ಉಡುಪಿ | ಅಂತರ್ ರಾಜ್ಯ ಮೋಟರ್‌ ಸೈಕಲ್ ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Date:

ಅಂತರ್ ರಾಜ್ಯ ಮಟ್ಟದಲ್ಲಿ ನಡೆದ ಮೋಟರ್‌ಸೈಕಲ್ ಕಳ್ಳತನ ಪ್ರಕರಣವೊಂದನ್ನು ಉಡುಪಿ ನಗರ ಪೊಲೀಸರು ಭೇದಿಸಿದ್ದು, ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿ ಕಳವುಗೊಂಡ ಯಮಹಾ R15 ಬೈಕ್ ವಶಪಡಿಸಿಕೊಂಡಿದ್ದಾರೆ.

ಮೂಡನಿಡಂಬೂರು ಗ್ರಾಮದ ನಾಗಚಂದ್ರ (32) ಎಂಬವರು ಡಿಸೆಂಬರ್ 28ರಂದು ರಾತ್ರಿ ಕರಾವಳಿ ಬೈಪಾಸ್ ಬಳಿಯ ಲ್ಯಾಂಡ್‌ಮಾರ್ಕ್ ಬಿಲ್ಡಿಂಗ್ ಸಮೀಪ ತಮ್ಮ ಮೋಟರ್‌ಸೈಕಲ್ ನಿಲ್ಲಿಸಿ ಮನೆಗೆ ತೆರಳಿದ್ದರು. ಡಿಸೆಂಬರ್ 29ರಂದು ಬೆಳಿಗ್ಗೆ ವಾಹನ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಅಂದಾಜು ₹70,000 ಮೌಲ್ಯದ ಬೈಕ್ ಕಳವುಗೊಂಡಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣ ಪತ್ತೆಗೆ ಡಿವೈಎಸ್‌ಪಿ ಡಿ.ಟಿ. ಪ್ರಭು ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ ಠಾಣಾ ಪ್ರಭಾರ ನಿರೀಕ್ಷಕ ಮಹೇಶ್ ಪ್ರಸಾದ್ ಪಿ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪೊಲೀಸ್ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಹಾಗೂ ಗೋಪಾಲಕೃಷ್ಣ ಜೋಗಿ ನೇತೃತ್ವದ ತಂಡವು ಜನವರಿ 4ರಂದು ಕೇರಳದ ಕೋಯಿಕ್ಕೋಡು ಜಿಲ್ಲೆಯ ಮುಕ್ಕಂ ಪ್ರದೇಶದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಆಶಿಕ್ ಅನ್ಸಾರ್ (19) ಹಾಗೂ ಮಹಮ್ಮದ್ ಅಲ್ತಫ್ (23) ಎಂದು ಗುರುತಿಸಲಾಗಿದ್ದು, ಇವರಿಂದ ಯಮಹಾ R15 ಮೋಟರ್‌ಸೈಕಲ್ ವಶಪಡಿಸಿಕೊಳ್ಳಲಾಗಿದೆ.

ಆರೋಪಿ ಆಶಿಕ್ ಅನ್ಸಾರ್ ವಿರುದ್ಧ ಕೇರಳ ರಾಜ್ಯದಲ್ಲಿ ಮನೆಕಳ್ಳತನ ಹಾಗೂ ಗಾಂಜಾ ಸೇವನೆ ಸೇರಿ ಎರಡು ಪ್ರಕರಣಗಳು ದಾಖಲಾಗಿದ್ದರೆ, ಮಹಮ್ಮದ್ ಅಲ್ತಫ್ ವಿರುದ್ಧ ಮೂರು ಕಳ್ಳತನ ಹಾಗೂ ಎರಡು ಗಾಂಜಾ ಸೇವನೆ ಪ್ರಕರಣಗಳೂ ಸೇರಿದಂತೆ ಒಟ್ಟು ಐದು ಪ್ರಕರಣಗಳು ದಾಖಲಾಗಿರುವುದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...