ಉಡುಪಿ | ಅಕ್ರಮ ವಲಸೆ ಪ್ರಕರಣದ ವಿಚಾರಣೆ : 10 ಮಂದಿ ಬಾಂಗ್ಲಾ ಪ್ರಜೆಗಳಿಗೆ ಜೈಲು, ದಂಡ

Date:

ಅಕ್ರಮವಾಗಿ ಭಾರತಕ್ಕೆ ಬಂದು ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ 10 ಮಂದಿ ಬಾಂಗ್ಲಾ ವಲಸಿಗರಿಗೆ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ನ್ಯಾಯಾಲಯ ಡಿ.8ರಂದು ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಬಾಂಗ್ಲಾ ದೇಶದ ಪ್ರಜೆಗಳಾದ ಹಕೀಮ್ ಆಲಿ, ಸುಜೋನ್ ಎಸ್.ಕೆ ಯಾನೆ ಫಾರೂಕ್, ಇಸ್ಮಾಯಿಲ್ ಎಸ್.ಕೆ., ಮುಹಮ್ಮದ್ ಇಸ್ಮಾಯಿಲ್ ಹಾಕ್, ಕರೀಮ್ ಎಸ್.ಕೆ ಯಾನೆ ಅಬ್ದುಲ್ ಕರೀಮ್, ಸಲಾಂ ಎಸ್.ಕೆ ಯಾನೆ ಅಬ್ದುಲ್ ಅಜೀಜ್, ರಾಜಿಕುಲ್ ಎಸ್.ಕೆ., ಮುಹಮ್ಮದ್ ಸೋಜಿಬ್ ಯಾನೆ ಎಂ.ಡಿ.ಅಲ್ಲಾಂ ಅಲಿ, ರಿಮೂಲ್ ಯಾನೆ ಅಬ್ದುಲ್ ರೆಹಮಾನ್, ಮುಹಮ್ಮದ್ ಇಮಾಮ್ ಶೇಖ್, ಮುಹಮ್ಮದ್ ಜಹಾಂಗಿರ್ ಆಲಂ ಶಿಕ್ಷೆಗೆ ಗುರಿಯಾದ ಆರೋಪಿಗಳು.

2024ರ ಅ.11ರಂದು ಸಂಜೆ ಮಲ್ಪೆ ವಡಭಾಂಡೇಶ್ವರ ಬಸ್ ನಿಲ್ದಾಣದ ಬಳಿ 7 ಮಂದಿ ಅನುಮಾನಸ್ಪದವಾಗಿ ಲಗೇಜ್ ಸಮೇತ ಒಡಾಡುತ್ತಿರುವುದನ್ನು ಕಂಡು ಅನುಮಾನಗೊಂಡು ಮಲ್ಪೆ ಪೊಲೀಸರು ವಿಚಾರಿಸಿದ್ದರು. ಆಗ ಇವರೆಲ್ಲ ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೇ ಅಕ್ರಮವಾಗಿ ನಕಲಿ ಆಧಾರ್ ಕಾರ್ಡ್ ದಾಖಲೆಗಳನ್ನು ಸೃಷ್ಟಿಸಿ, ಬಾಂಗ್ಲಾದೇಶದಿಂದ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿರುವುದು ತಿಳಿದುಬಂತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದರಂತೆ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಭಾರತಕ್ಕೆ ಬಂದಿರುವ ಇವರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಆಗಿನ ಮಲ್ಪೆ ಪೊಲೀಸ್ ವೃತ್ತ ನಿರೀಕ್ಷಕರು ನಡೆಸಿದ್ದು, ಉಳಿದ 3 ಮಂದಿ ಅಕ್ರಮ ವಲಸಿಗರನ್ನು ಬಂಧಿಸಿದ್ದರು. ಒಟ್ಟು 10 ಮಂದಿ ಬಾಂಗ್ಲಾ ದೇಶದಿಂದ ಅಕ್ರಮವಾಗಿ ಉಡುಪಿಗೆ ಬಂದ ಆರೋಪಿಗಳ ವಿರುದ್ದ ಉಡುಪಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ 10 ಮಂದಿ ಆರೋಪಿಗಳಿಗೆ 2 ವರ್ಷಗಳ ಕಾಲ ಜೈಲುಶಿಕ್ಷೆ ಮತ್ತು ತಲಾ 10,000ರೂ. ದಂಡವನ್ನು ವಿಧಿಸಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...