ಉಡುಪಿ | ಅದಾನಿ ವಿದ್ಯುತ್‌ ಸ್ಥಾವರದಲ್ಲಿ ಬೀಮ್‌ ಕುಸಿತ; ಕಾರ್ಮಿಕ ಸಾವು

Date:

ಉಡುಪಿ ಜಿಲ್ಲೆಯ ಎಲ್ಲೂರು ಬಳಿ iರುವ ಅದಾನಿ ವಿದ್ಯುತ್ ಸ್ಥಾವರದಲ್ಲಿ (ಹಿಂದಿನ ಯುಪಿಸಿಎಲ್) ದುರ್ಘಟನೆ ಸಂಭವಿಸಿದ್ದು, ರಾಜಸ್ಥಾನ ಮೂಲದ ಓರ್ವ ಕಾರ್ಮಿಕ ಮೃತಪಟ್ಟಿದ್ದಾರೆ.

ಶುಕ್ರವಾರ, ಸ್ಥಾವರದಲ್ಲಿದ್ದ ಕಬ್ಬಿಣದ ದೊಡ್ಡ ಬೀಮ್ ಕುಸಿದು ನಾಲ್ವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾರೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಕಾರ್ಮಿಕನನ್ನು ರಾಜಸ್ಥಾನ ಮೂಲದ ಕಾರ್ಮಿಕ ಮುಲಾರಾಮ್ (21) ಎಂದು ಗುರುತಿಸಲಾಗಿದೆ.

ಅದಾನಿ ಸ್ಥಾವರದೊಳಗೆ ಎಫ್‌ಜಿಡಿ ಸ್ಥಾವರದ ಕಾಮಗಾರಿ ಚಾಲ್ತಿಯಲ್ಲಿತ್ತು. ಬಹುತೇಕ ಶೇ.75 ಕಾಮಗಾರಿ ಮುಕ್ತಾಯಗೊಳ್ಳುತ್ತಾ ಬಂದಿದೆ. ಅದಾನಿ ಸಂಸ್ಥೆಯು `ಪವರ್ ಮೆಕ್’ ಕಂಪನಿಗೆ ಈ ಕುರಿತಾದ ಗುತ್ತಿಗೆಯನ್ನು ನೀಡಿತ್ತು. ಆದರೆ ಅರ್ಧಾಂಶ ಕಾಮಗಾರಿ ವೇಳೆ ಆ ಕಂಪೆನಿಯು ಕೇರಳದ `ಸುನ್ನಿ ಮತ್ತು ವೆಲ್ ಟೆಕ್’ ಎಂಬ ಸಂಸ್ಥೆಯನ್ನು ಪರ್ಯಾಯವಾಗಿ ಈ ಕಾರ್ಯಕ್ಕಾಗಿ ನೇಮಕ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಖಾಸಗಿ ಬಸ್‌ ಪಲ್ಟಿ; 10ಕ್ಕೂ ಅಧಿಕ ಮಂದಿಗೆ ಗಾಯ

ಶುಕ್ರವಾರ ಮಧ್ಯಾಹ್ನದ ವೇಳೆ ಕ್ರೇನ್ ಮೂಲಕ ರೋಪ್ ಕಟ್ಟಿಕೊಂಡು ಸುರಕ್ಷತಾ ಕ್ರಮವಾಗಿ 5 ಮಂದಿ ಕೆಲಸ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಕ್ರೇನ್‌ನ ರೋಪ್ ತುಂಡಾಗಿ ಕಟ್ಟಡದ ಬೀಮ್ ಒಂದು ನೆಲಕ್ಕುರುಳಿದೆ. ನಾಲ್ವರು ರೋಪ್ ಸಮೇತ ನೆಲಕ್ಕುರುಳಿದ್ದರು. ಇವರಲ್ಲಿ ಆಸ್ಪತ್ರೆಗೆ ಸಾಗಿಸುವಾಗ ಮುಲಾರಾಮ್ ಎಂಬ ಕಾರ್ಮಿಕ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ಮೂರು ಮಂದಿಯನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಪಡುಬಿದ್ರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...