ಉಡುಪಿ | ಲಂಡನ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ಆರ್ ಮನೋಹರ್ ಅಭಿವೃದ್ಧಿಪಡಿಸಿದ ಬೈನಾಕ್ಯುಲರ್

Date:

ಉಡುಪಿ ಜಿಲ್ಲೆಯ ಮಣಿಪಾಲದ ಎಂಐಟಿ ಕಾಲೇಜಿನ ಮೆಕ್ಯಾನಿಕಲ್‌ ಇಂಜಿನಿಯರಿಂಗ್ ವಿಭಾಗದಲ್ಲಿ ತಂತ್ರಜ್ಞರಾಗಿರುವ ಪರ್ಕಳದ ಆ‌ರ್. ಮನೋಹ‌ರ್ ಅವರು ಅಭಿವೃದ್ಧಿ ಪಡಿಸಿದ ಎರಡು ದೂರದರ್ಶಕಗಳು (ಬೈನಾಕ್ಯುಲರ್) ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ ಹಾಗೂ ದಿ ಬ್ರಿಟಿಷ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದುಕೊಂಡಿವೆ.

ಅಯೋಧ್ಯೆ ಯ ರಾಮಮಂದಿರದ ಉದ್ಘಾಟನೆ ಸಂದರ್ಭ ಇವರು ತಯಾರಿಸಿದ್ದ ಬೈನಾಕ್ಯುಲರ್‌ ಅನ್ನು ಬಳಕೆ ಮಾಡಲಾಗಿತ್ತು. ಇದಲ್ಲದೆ, ಕೇಂದ್ರ ಸರಕಾರ ಕೂಡ ಇವರ ಬೈನಾಕ್ಯುಲರ್‌ಗೆ ಆರ್ಡರ್ ನೀಡಿದೆ.

IMG 20240913 WA0005

ಮನೋಹ‌ರ್ ಅವರು ಅಭಿವೃದ್ಧಿಪಡಿಸಿರುವ ಅತಿ ಶಕ್ತಿಶಾಲಿ ಹಾಗೂ ವಿಶಿಷ್ಟ, 200ರಿಂದ 240 ಮೆಗ್ನಿಫಿಕೇಷನ್‌ ಇರುವ ಬೈನಾಕ್ಯುಲರ್‌ ಅನ್ನು ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಈ ಸಂಬಂಧ ಸಂಸ್ಥೆ ಆ‌ರ್.ಮನೋಹ‌ರ್ ಅವರಿಗೆ ಪ್ರಮಾಣ ಪತ್ರವನ್ನೂ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುಮಾರು ಎರಡು ಕೆ.ಜಿ.ತೂಕದ 4 ಅಡಿ ಉದ್ದದ ಬೈನಾಕ್ಯುಲರ್ ಅನ್ನು ಸತತ ಪ್ರಯೋಗದ ಬಳಿಕ ಮನೋಹರ್ ಅವರು ಅಭಿವೃದ್ಧಿಪಡಿಸಿದ್ದಾರೆ. ಇದರಲ್ಲಿ ಎರಡೂ ಕಣ್ಣುಗಳ ಮೂಲಕ ನೇರವಾಗಿ ಚಂದ್ರನ ಮೇಲ್ಮೈಯನ್ನೂ ಸ್ಪಷ್ಟವಾಗಿ ವೀಕ್ಷಿಸಬಹುದಾಗಿದೆ.

ಹೆಚ್ಚಿನ ದೂರದರ್ಶಕಗಳು ಬಗ್ಗಿ ನೋಡುವ ರೀತಿಯಲ್ಲಿದ್ದರೆ, ನೇರವಾಗಿ ಎರಡೂ ಕಣ್ಣುಗಳ ಮೂಲಕ ನೋಡುವ ಸೌಲಭ್ಯವನ್ನು ಇವರ ದೂರದರ್ಶಕ ಹೊಂದಿದೆ. ಇವರು ಅಭಿವೃದ್ಧಿಪಡಿಸಿದ ಒಂದೂವರೆ ಅಡಿ ಉದ್ದದ 40ರಿಂದ 60 ಮೆಗ್ನಿಫಿಕೇಷನ್ ಹೊಂದಿರುವ ಸಣ್ಣ ದೂರದರ್ಶಕ ದಿ ಬ್ರಿಟಿಷ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಮನೋಹ‌ರ್ ಅವರು ತಯಾರಿಸಿರುವ ಎರಡು ದೂರದರ್ಶಕಗಳ ಮೂಲಕವೂ ಆಕಾಶಕಾಯಗಳನ್ನು ಆರಾಮವಾಗಿ ವೀಕ್ಷಿಸಬಹುದು.

ಇವರ ಆವಿಷ್ಕಾರವು ಗಿನ್ನೆಸ್ ವಿಶ್ವ ದಾಖಲೆ ಹಾಗೂ ಭಾರತದ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲೂ ಸ್ಥಾನ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ.

IMG 20240913 WA0006

ಈ ಬಗ್ಗೆ ಆರ್ ಮನೋಹರ್ ಈ ದಿನ.ಕಾಮ್ ಜೊತೆಗೆ ಮಾತನಾಡಿ, “ಸಣ್ಣ ಪ್ರಾಯದಿಂದಲೂ ನನಗೆ ಬೈನಾಕ್ಯುಲರ್‌ ಬಗ್ಗೆ ತುಂಬಾ ಆಸಕ್ತಿ. ಇದನ್ನು ಇಟ್ಟುಕೊಂಡು ಏನಾದರೂ ಸಾಧನೆ ಮಾಡಬೇಕು ಎಂಬ ಛಲ ಇದ್ದದ್ದರಿಂದ ಈಗ ಇದನ್ನು ಆವಿಷ್ಕಾರಿಸಲು ಸಹಕಾರಿ ಆಯಿತು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ಇದರ ಬಗ್ಗೆ ಮಾಹಿತಿಯನ್ನು ಸಹ ನೀಡುತ್ತಿದ್ದೆ. ಆಕಾಶದಲ್ಲಿ ಆಗಾಗ ಸಂಭವಿಸುವ ವಿಶಿಷ್ಟ ವಿದ್ಯಮಾನಗಳನ್ನು ನಾನು ಅಭಿವೃದ್ಧಿಪಡಿಸಿದ ದೂರದರ್ಶಕಗಳ ಮೂಲಕ ಆರಾಮವಾಗಿ ಹಾಗೂ ಹೆಚ್ಚು ಸ್ಪಷ್ಟವಾಗಿ ನೋಡಬಹುದು. ಇವುಗಳಲ್ಲಿರುವ ಲೆನ್ಸ್‌ಗಳ ಸಾಮರ್ಥ್ಯವನ್ನು ಇನ್ನಷ್ಟು ಹೆಚ್ಚಿಸುವ ಮೂಲಕ ದೂರದ ವಸ್ತುಗಳು ಇನ್ನಷ್ಟು ಸ್ಪಷ್ಟವಾಗಿ ಗೋಚರಿಸುವಂತೆ ಮಾಡುವ ಪ್ರಯತ್ನ ನಡೆಸಿದ್ದೇನೆ” ಎಂದು ಹೇಳಿದರು.

IMG 20240913 WA0007

ಈ ಬಗ್ಗೆ ಈ ದಿನ ಜೊತೆ ಮಾತನಾಡಿದ ಸಾಮಾಜಿಕ ಕಾರ್ಯಕರ್ತ ಗಣೇಶ್‌ರಾಜ್‌ ಸರಳೇಬೆಟ್ಟು, “ವರ್ಲ್ಡ್‌ ಬುಕ್ ಆಫ್ ರೆಕಾರ್ಡ್ಸ್‌ಗೆ ನಮ್ಮ ಉಡುಪಿಯ ಮನೋಹರ್ ಅವರ ಹೆಸರು ಸೇರಿರುವುದು ತುಂಬಾ ಸಂತೋಷ ತಂದಿದೆ. ಅವರು ಅಭಿವೃದ್ಧಿ ಪಡಿಸಿದ 200-240 ಎಕ್ಸ್ ಎಲ್ ದೂರದರ್ಶಕಕ್ಕೆ ಭಾರತೀಯ ಸೇನೆಯಿಂದ ಬೇಡಿಕೆ ಸಹ ಬಂದಿದೆ. ಸೈನಿಕರ ಅಭ್ಯಾಸದ ವೇಳೆ ದೂರದ ಗುರಿಯ ನಿಖರತೆಯನ್ನು ತಿಳಿಯಲು ಇದನ್ನು ಬಳಸುವ ಸಾಧ್ಯತೆ ಇದೆ. ಸುಮಾರು 500ರಷ್ಟು ದೂರದರ್ಶಕಕ್ಕೆ ಅದು ಬೇಡಿಕೆ ಇಟ್ಟಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಉಡುಪಿ | ಬ್ರಹ್ಮಾವರದ ನಿರ್ಮಲಾ ಶಾಲೆಯಲ್ಲಿ ಜಿಲ್ಲಾಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ

ರಾಜ್ಯ ಸರ್ಕಾರವು ಇವರ ಆವಿಷ್ಕಾರ ಗಮನಿಸಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಇವರ ಹೆಸರನ್ನು ಆಯ್ಕೆ ಮಾಡುವಂತೆ ಇದೇ ವೇಳೆ ಅವರು ವಿನಂತಿಸಿದ್ದಾರೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...