ಉಡುಪಿ‌ | ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ಉದ್ಘಾಟನೆ

Date:

ಸಮುದಾಯದಲ್ಲಿ ಸಂಘಟಿತರಾಗಿ ತಮ್ಮಲ್ಲಿರುವ ಪ್ರತಿಭೆಗಳನ್ನು ಸಮುದಾಯದ ಏಳಿಗೆಗೆ ಉಪಯೋಗಿಸಿದಾಗ ನಿಜವಾದ ನಾಯಕತ್ವ ತೋರಿಸಿದಂತಾಗುತ್ತದೆ ಎಂದು ಬೆಂಗಳೂರು ಮಹಾಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಪೀಟರ್ ಮಚಾದೋ ಹೇಳಿದರು.

ಅವರು ಭಾನುವಾರ ಕಕ್ಕುಂಜೆ ಅನುಗ್ರಹ ಪಾಲನಾಕೇಂದ್ರದಲ್ಲಿ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವವರಲ್ಲಿ ಬೇರೆ ಬೇರೆ ಪ್ರತಿಭೆಗಳಿದ್ದು ಅಂತಹ ಪ್ರತಿಭೆಗಳನ್ನು ಒಂದೇ ವೇದಿಯಡಿ ತಂದು ಇದರ ಮೂಲಕ ಸಮುದಾಯದ ಅಭಿವೃದ್ಧಿಗೆ ಪೂರಕವಾದ ಚಿಂತನೆಗಳನ್ನು ಮಾಡಿಕೊಂಡು ಅದನ್ನು ಕಾರ್ಯರೂಪಕ್ಕೆ ತಂದಾಗ ಸಮುದಾಯದಲ್ಲಿನ ಪ್ರತಿಯೊಬ್ಬ ಸದಸ್ಯನ ಅಭಿವೃದ್ದಿ ಕಾಣಲು ಸಾಧ್ಯವಾಗುತ್ತದೆ. ಕರ್ನಾಟಕ ಪ್ರಾಂತೀಯ ಹಂತದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ನೀಡುತ್ತಿರುವ ವ್ಯಕ್ತಿಗಳ ಚಿಂತನ –ಮಂಥನ ತಂಡಗಳನ್ನು ರೂಪಿಸಲಾಗುತ್ತಿದ್ದು ಉಡುಪಿ ಧರ್ಮಪ್ರಾಂತ್ಯದಲ್ಲಿ ಅತ್ಯುತ್ತಮ ರೀತಿಯಲ್ಲಿ ಸಂಪೂರ್ಣವಾದ ಪೂರ್ವಭಾವಿ ತಯಾರಿಯೊಂದಿಗೆ ರಚಿಸಲಾಗಿದ್ದು ಮುಂದಿನ ದಿನಗಳಲ್ಲಿ ಅತ್ಯುತ್ತಮ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಸೇವೆ ಸುವಿಚಾರ ಚಿಂತನ-ಮಂಥನ ತಂಡದ ಮೂಲಕ ನೀಡುವಂತಾಗಲಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ ಯಾವುದೇ ಕೆಲಸಗಳಿಗೆ ಧಾರ್ಮಿಕ ವ್ಯಕ್ತಿಗಳನ್ನೇ ಆಶ್ರಯಿಸಿಕೊಂಡಿರದೇ ಶ್ರೀಸಾಮಾನ್ಯರೂ ಕೂಡ ನಾಯಕತ್ವ ವಹಿಸಿದಾಗ ಅಂತಹ ಕಾರ್ಯಕ್ರಮಕ್ಕೆ ಇನ್ನಷ್ಟು ಮಹತ್ವ ಲಭಿಸುತ್ತದೆ. ಮುಂದಿನ ದಿನಗಳಲ್ಲಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡ ಯಶಸ್ವಿಯಾಗಿ ಕಾರ್ಯಾಚರಿಸಲಿ ಎಂದು ಶುಭಹಾರೈಸಿದರು

ಕರ್ನಾಟಕ ಪ್ರಾಂತ್ಯದ ಚಿಂತನ-ಮಂಥನ ತಂಡದ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ ಅವರು ದಿಕ್ಸೂಚಿ ಭಾಷಣದಲ್ಲಿ ತಂಡದ ಕಾರ್ಯ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಸುವಿಚಾರ ಚಿಂತನ-ಮಂಥನ ತಂಡದಲ್ಲಿ ವಿವಿಧ ಕ್ಷೇತ್ರಗಳಾದ ಮಾಧ್ಯಮ, ವೈದ್ಯಕೀಯ, ಕಾನೂನು, ನರ್ಸಿಂಗ್, ಕೃಷಿ, ಉದ್ಯಮಿಗಳು, ರಾಜಕೀಯ ಮುಖಂಡರು, ಕಲೆ ಮತ್ತು ನಾಟಕ ಕ್ಷೇತ್ರದ ಪ್ರತಿನಿಧಿಗಳು ಒಳಗೊಂಡಿರುತ್ತಾರೆ.

ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಸ್ವಾಗತಿಸಿ, ಶ್ರೀ ಸಾಮಾನ್ಯ ಆಯೋಗದ ನಿರ್ದೇಶಕ ಡಾ|ಜೆರಾಲ್ಡ್ ಪಿಂಟೊ ವಂದಿಸಿದರು. ಶಿಕ್ಷಣ ಆಯೋಗದ ಕಾರ್ಯದರ್ಶಿ ವಂ|ವಿನ್ಸೆಂಟ್ ಕ್ರಾಸ್ತಾ ಪ್ರಾರ್ಥನಾ ವಿಧಿ ನೆರವೇರಿಸಿ, ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...