ಉಡುಪಿ | ಕಾಶ್ಮೀರ ಪಹಲ್ಗಾಮ್ ನಲ್ಲಿ ಉಗ್ರವಾದಿಗಳ ದಾಳಿ – ಬಿಷಪ್ ಖಂಡನೆ

Date:

ಕಾಶ್ಮೀರದ ಪಹಲ್ಗಾಮ್ನಲ್ಲಿ ಮಂಗಳವಾರ ಉಗ್ರವಾದಿಗಳಿಂದ ನಡೆದಿರುವ ಹೃದಯ ವಿದ್ರಾವಕ ಘಟನೆನಯನ್ನು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಖಂಡಿಸಿದ್ದಾರೆ.

ಈ ಘಟನೆಯಯಿಂದ ಆಮಾಯಕರ ಜೀವಗಳನ್ನು ಬಲಿಯಾಗುವುದರೊಂದಿಗೆ ಅನೇಕ ಕುಟುಂಬಗಳನ್ನು ಧ್ವಂಸಗೊಳಿಸಿದ್ದು ಇಂತಹ ಹಿಂಸಾಚಾರಗಳು ಸಂಪೂರ್ಣವಾಗಿ ಅಮಾನವೀಯವಾಗಿದ್ದು ನ್ಯಾಯ, ಘನತೆ ಮತ್ತು ಶಾಂತಿಯನ್ನು ಬಯಸುವ ಸಮಾಜದಲ್ಲಿ ಹಿಂಸೆಗೆ ಸ್ಥಾನವಿಲ್ಲ. ಪ್ರತಿಯೊಂದು ಜೀವವೂ ಕೂಡ ಅಮೂಲ್ಯವಾಗಿದ್ದು ಹಿಂಸಾಚಾರದಿಂದ ಉಂಟಾಗುವ ಜೀವ ನಷ್ಟವು ನಮ್ಮ ಸಾಮೂಹಿಕ ಆತ್ಮಸಾಕ್ಷಿಗೆ ಆಗುವ ಗಾಯವಾಗಿದೆ.
“ಶಾಶ್ವತ ಶಾಂತಿಯ ನಿಜವಾದ ಅಡಿಪಾಯವೇ ಸಹೋದರತ್ವ” ಎಂದು ಪವಿತ್ರ ಪೋಪ್ ಫ್ರಾನ್ಸಿಸ್ ನಮಗೆ ಆಗಾಗ್ಗೆ ನೆನಪಿಸಿದ್ದಾರೆ. ಈ ಮಾತುಗಳು ನಂಬಿಕೆಯ ಜನರಿಗೆ ಮಾತ್ರವಲ್ಲ, ಪ್ರತಿಯೊಬ್ಬ ವ್ಯಕ್ತಿಯ ಘನತೆ ಮತ್ತು ಸಹಾನುಭೂತಿ ಮತ್ತು ಪರಸ್ಪರ ಗೌರವದಲ್ಲಿ ನೆಲೆಗೊಂಡ ಭವಿಷ್ಯವನ್ನು ನಿರ್ಮಿಸುವ ತುರ್ತು ಅಗತ್ಯವನ್ನು ನೆನಪಿಸುತ್ತದೆ.
ಮೃತರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುವುದರೊಂದಿಗೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ. ಪ್ರದೇಶ ಮತ್ತು ರಾಷ್ಟ್ರದಾದ್ಯಂತದ ನಾಯಕರು, ಸಮುದಾಯಗಳು ಮತ್ತು ವ್ಯಕ್ತಿಗಳು ಧೈರ್ಯ, ಒಗ್ಗಟ್ಟು ಮತ್ತು ಶಾಂತಿಗಾಗಿ ನವೀಕೃತ ಬದ್ಧತೆಯಿಂದ ಪ್ರತಿಕ್ರಿಯಿಸುವಂತೆ ಒತ್ತಾಯಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...