ಉಡುಪಿ | ಸರ್ವಿಸ್ ರಸ್ತೆ ಹಾಗೂ ಪ್ಲೈ ಓವರ್ ರಚಿಸಲು ವಿಸ್ತ್ರತ ಯೋಜನಾ ವರದಿಗೆ ಏಜೆನ್ಸಿ ನೇಮಕ

Date:

ಬ್ರಹ್ಮಾವರ, ಕೋಟ, ಪಡುಬಿದ್ರಿ ಹಾಗೂ ಮುಲ್ಕಿಯಲ್ಲಿ ಸರ್ವಿಸ್ ರಸ್ತೆ ಮತ್ತು ಪ್ಲೈ ಓವರ್ ರಚಿಸಲು ವಿಸ್ತ್ರತ ಯೋಜನಾ ವರದಿ ಸಿದ್ದಪಡಿಸಲು ಏಜೆನ್ಸಿ ನೇಮಕವಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ -66 ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಗೋವಿಂದರಾಜ್ ಹೆಗ್ಡೆ ತಿಳಿಸಿದರು. ಅವರು ಬ್ರಹ್ಮಾವರದ ಹೋಟೆಲ್ ಆಶ್ರಯ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.

ಸೆ.2 ರಂದು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ-66 ಉಳಿಸಿ ಹೋರಾಟ ಸಮಿತಿ ವತಿಯಿಂದ ಬೇಡಿಕೆಗಳ ಕುರಿತು ವಿಸ್ತ್ರತವಾಗಿ ತಿಳಿಸಿದ್ದು ಸಂಸದರು ಹಾಗೂ ಅಧಿಕಾರಿಗಳು ನಮ್ಮ ಬೇಡಿಕೆಗೆ ಸ್ಪಂಧಿಸಿದ್ದಾರೆ. ಬ್ರಹ್ಮಾವರದಲ್ಲಿ 7 ಪಿಲ್ಲರ್‌ಗಳ ಪ್ಲೈ ಓವರ್ ರಚನೆ, ಭದ್ರಗಿರಿಯಿಂದ ಮಾಬುಕಳ ಸೇತುವೆ ತನಕ ಎರಡೂ ಬದಿಯಲ್ಲಿ ಸರ್ವಿಸ್ ರಸ್ತೆ ರಚನೆ, ದೂಪದಕಟ್ಟೆ, ಆಕಾಶವಾಣಿ ಬೈಪಾಸ್, ಉಪ್ಪಿನಕೋಟೆಯಲ್ಲಿ ಮೀಡಿಯನ್ ಓಪನಿಂಗ್ ಬಗ್ಗೆ ಆಗ್ರಹಿಸಿ ಸೆ.೪ರಂದು ಬ್ರಹ್ಮಾವರ ಬಂದ್ ಮಾಡಿ ಉಪ್ಪಿನಕೋಟೆ ಫಾರ್ಚೂನ್ ಹೋಟೆಲ್‌ನಿಂದ ಧರ್ಮಾವರ ಅಡಿಟೋರಿಯಂವರೆಗೆ ಸಾರ್ವಜನಿಕರ ಸಹಕಾರದಿಂದ ಶ್ರಮದಾನದ ಮೂಲಕ ಸರ್ವಿಸ್ ರಸ್ತೆ ನಿರ್ಮಿಸಲು ತೀರ್ಮಾನಿಸಲಾಗಿತ್ತು. ಆದರೆ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಆಶ್ವಾಸನೆಯಿಂದ ಆಯೋಜಿಸಿದ್ದ ಹೋರಾಟವನ್ನು ಮುಂದೂಡಲಾಗಿತ್ತು. ಜಿಲ್ಲಾಧಿಕಾರಿಯವರ ಸಮಕ್ಷಮ ನಡೆದ ಸಭೆಯಲ್ಲಿ ಸಂಸದರು ಭರವಸೆ ನೀಡಿದಂತೆ ಕೇಂದ್ರ ಸಾರಿಗೆ ಸಚಿವರಿಗೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ, ಯೋಜನಾ ನಿರ್ದೇಶಕರು ಹಾಗೂ ಪ್ರಾದೇಶಿಕ ಕಚೇರಿಯ ಅಧಿಕಾರಿಗಳಿಗೆ ಪತ್ರ ವ್ಯವಹಾರ ನಡೆಸಿದ್ದು ಕೇಂದ್ರ ಸಾರಿಗೆ ಸಚಿವರ ನಿರ್ದೇಶನದೊಂದಿಗೆ ಸರ್ವಿಸ್ ರಸ್ತೆ ಹಾಗೂ ದೀರ್ಘಕಾಲಿನ ಕ್ರಮಕ್ಕೆ ವಿಸ್ತ್ರತ ಯೋಜನ ವರದಿ (ಡಿಪಿಆರ್) ತಯಾರಿಸಲು ಮೆ| ದ್ರುವ ಕನ್ಸಲ್ಟೆನ್ಸಿ ಸರ್ವಿಸಸ್ ಲಿ. ಸಂಸ್ಥೆಯ ಇಂಜಿನಿಯರ್‌ಗಳನ್ನು ನೇಮಿಸಲಾಗಿದೆ. ಇವರು 15 ದಿನದೊಳಗೆ ಆಗಮಿಸಿ ಕೋಟ, ಬ್ರಹ್ಮಾವರ, ಮುಲ್ಕಿ ಹಾಗೂ ಪಡುಬಿದ್ರಿಯಲ್ಲಿ ವಿಸ್ತ್ರತ ಯೋಜನಾ ವರದಿ ಸಿದ್ದಪಡಿಲಿದ್ದಾರೆ. ಈ ಸಂದರ್ಭ ಹೋರಾಟ ಸಮಿತಿ ವತಿಯಿಂದ ಮಾಹಿತಿ ನೀಡಲಾಗುವುದು. ಸಮಿತಿಯ ಮನವಿಗೆ ಸ್ಪಂಧಿಸಿದ ಸಂಸದರು, ಕೇಂದ್ರ ಸಚಿವರು ಹಾಗೂ ಅಧಿಕಾರಿಗಳಿಗೆ ಕೃತಜ್ಞತೆ ಅರ್ಪಿಸಿಕೊಳ್ಳುತ್ತೇವೆ ಎಂದು ಗೋವಿಂದರಾಜ್ ಹೆಗ್ಡೆ ನುಡಿದರು.

ಆಶ್ರಯ ಹೋಟೆಲ್ ಮಾಲಕ ರಾಜಾರಾಮ ಶೆಟ್ಟಿ ಮಾತನಾಡಿ ಬ್ರಹ್ಮಾವರದಲ್ಲಿ ಈಗ ನಡೆಯುತ್ತಿರುವ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿದ್ದು ವೇಗವಾಗಿ ಮಾಡದೇ ಇದ್ದಲ್ಲಿ ಇಲ್ಲಿನ ವ್ಯವಹಾರಿಕ ಸೆಂಟರ್‌ಗಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಲಿದ್ದು ಬೇಗನೆ ಕೆಲಸ ಮುಗಿಸಲು ಅಧಿಕಾರಿಗಳು ಗಮನ ಹರಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕಾಗೋಷ್ಟಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ದೇವಕಿ ಪೂಜಾರ್ತಿ, ನಿರಂಜನ ಶೆಟ್ಟಿ, ಹಾರಾಡಿ ದಯಾನಂದ ಶೆಟ್ಟಿ, ಬಸ್ ಮಾಲಕರ ಸಂಘದ ವಸಂತ ಶೆಟ್ಟಿ, ಕಾರು ಚಾಲಕ ಮಾಲಕರ ಸಂಘದ ರಮೇಶ್, ರಿಕ್ಷಾ ಚಾಲಕ ಮಾಲಕರ ಸಂಘದ ರಾಜು ಪೂಜಾರಿ, ರಾಜು ಸಾಲ್ಯಾನ್, ಟೆಂಪೋ ಮಾಲಕರ ಸಂಘದಿಂದ ವಿಜಯ ಕುಮಾರ್, ಸಂತೋಷ ಪೂಜಾರಿ, ಗಣೇಶ್ ಶ್ರೀಯಾನ್, ಬ್ರಹ್ಮಾವರ ಅಭಿವೃದ್ಧಿ ಸಮಿತಿಯ ಪ್ರತೀತ್ ಹೆಗ್ಡೆ, ಜೋಯ್ಸನ್, ಕಟ್ಟಡ ಕಾರ್ಮಿಕರ ಸಂಘದ ಸುಭಾಸ್, ಸಿಐಟಿಯು ಸಂಘಟನೆಯ ಶಶಿಧರ ಗೊಲ್ಲ, ಎಸ್.ಎಮ್.ಎಸ್. ವಿದ್ಯಾಸಂಸ್ಥೆಯ ಅಲ್ವಾರಿಸ್ ಡಿಸಿಲ್ವಾ, ಗಿಲ್ಬರ್ಟ್ ಡಿಸಿಲ್ವಾ, ಅಲ್ಬರ್ಟ್ ಡಿಸಿಲ್ವಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...