ಉಡುಪಿ | ‘ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ’ ಎಂದು ಮನೆಗೆ ನುಗ್ಗಿ ಪುರೋಹಿತನಿಂದ ಗಲಾಟೆ: ಎಫ್‌ಐಆರ್

Date:

‘ತಿಥಿ ಪೂಜಾ ಕಾರ್ಯ ತನಗೆ ನೀಡಿಲ್ಲ’ ಎನ್ನುವ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ದಾಂಧಲೆ ನಡೆಸಿ, ಅವಾಚ್ಯ‌ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

ಉಡುಪಿಯ ಕರ್ಜೆ ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು, ಈ ಬಗ್ಗೆ ಬ್ರಹ್ಮಾವರ‌‌ ಪೊಲೀಸ್ ಠಾಣೆಯಲ್ಲಿ ಪುರೋಹಿತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಹೊಸೂರು ಗ್ರಾಮದ ರಾಘವೇಂದ್ರ ಎಂಬವರ ತಾಯಿ ಮೃತಪಟ್ಟಿದ್ದು, ಮೃತರ ಶ್ರಾದ್ದ ಕಾರ್ಯಕ್ರಮ ಮಾರ್ಚ್‌ 6ರಂದು ರಾಘವೇಂದ್ರ(46) ಅವರ ಮನೆಯಲ್ಲೇ ನೆರವೇರಿಸಲಾಗಿತ್ತು. ಆದರೆ, ಶ್ರಾದ್ಧ ಕಾರ್ಯಕ್ರಮಗಳು ಮುಗಿಯುತ್ತಿದ್ದಂತೆ ಮನೆಗೆ ಬಂದ ಅರ್ಚಕ ರಾಮಕೃಷ್ಣ(66) ಎಂಬವರು, ಯಾಕೆ ತಿಥಿ ಕಾರ್ಯದ ಪೂಜಾ ಕಾರ್ಯಗಳನ್ನು ತನಗೆ ನೀಡಿಲ್ಲ ಎಂದು ಪ್ರಶ್ನಿಸಿದ್ದಲ್ಲದೇ, ಮನೆಯವರನ್ನು ಅವಾಚ್ಯ ಪದಗಳಿಂದ ತರಾಟೆಗೆ ತೆಗೆದುಕೊಂಡಿದ್ದಾರೆ. ನಿಮ್ಮ ಕುಟುಂಬವನ್ನು ಸರ್ವನಾಶ ಮಾಡುತ್ತೇನೆ, ನಮ್ಮ ಎಂಜಲನ್ನು ತಿನ್ನಿಸದೇ ಬಿಡುವುದಿಲ್ಲ ಎಂದು ಬೆದರಿಕೆ ಕೂಡಾ ಹಾಕಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವೇಳೆ ಮನೆಯಲ್ಲಿದ್ದವರೊಬ್ಬರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡಿಂಗ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ರಾಘವೇಂದ್ರ ಅವರು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದು, ಅರ್ಚಕ ರಾಮಕೃಷ್ಣ ಅವರು, ‘ನಿಮ್ಮ ಕುಟುಂಬನ್ನು ಸರ್ವನಾಶ ಮಾಡುತ್ತೇನೆ ‘ಎಂಬ ಬೆದರಿಕೆಗೆ ಭಯಗೊಂಡಿದ್ದಾರೆ. ಆ ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಕೂಡ ನೀಡಿದ್ದು, ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅರ್ಚಕ ರಾಮಕೃಷ್ಣ ಅವರ ವಿರುದ್ಧ, ಎಸ್‌ಸಿ ಎಸ್‌ಟಿ ದೌರ್ಜನ್ಯ ಕಾಯ್ದೆ(ಅಟ್ರಾಸಿಟಿ)ಯ ಅಡಿಯಲ್ಲಿರುವ ಕಲಂ:447, 504, 506 ಐಪಿಸಿ ಮತ್ತು ಕಲಂ: 3(i)(r), 3(i)(s) SC/ST ACTನಂತೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...