ಉಡುಪಿ | ಆಲ್ವಿನ್ ಡಿಸೋಜಾ ಹಲ್ಲೆಕೋರನ ಬಂಧನಕ್ಕೆ ಕ್ಯಾಥೊಲಿಕ್‌ ಸಭೆ ಆಗ್ರಹ

Date:

ಮರಳು ಮಾಫಿಯಾದ ವಿರುದ್ದ ಧ್ವನಿ ಎತ್ತಿದ್ದ ಮಂಗಳೂರು ಪ್ರದೇಶದ ಕ್ಯಾಥೊಲಿಕ್ ಸಭೆಯ ಅಧ್ಯಕ್ಷರಾಗಿರುವ ಆಲ್ವಿನ್ ಡಿಸೋಜಾ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕು ಎಂದು ಉಡುಪಿ ಪ್ರದೇಶದ ಕ್ಯಾಥೊಲಿಕ್‌ ಸಭೆ ಆಗ್ರಹಿಸಿದೆ.

ಉಡುಪಿ ಪ್ರದೇಶದ ಕ್ಯಾಥೊಲಿಕ್‌ ಸಭೆಯಿಂದ ಪತ್ರಿಕೆ ಪ್ರಕಟಣೆ ಹೊರಡಿಸಿದ್ದು, “ಆಲ್ವಿನ್ ಡಿಸೋಜಾ ಹಲ್ಲೆಕೋರನನ್ನು ಈವರೆಗೆ ಬಂಧಿಸದೇ ಇರುವ ದಕ್ಷಿಣ ಕನ್ನಡ ಪೊಲೀಸರ ನಡೆ ನಿಜಕ್ಕೂ ಸಂಶಯಗಳಿಗೆ ಕಾರಣವಾಗಿದೆ. ಯಾವುದೇ ರೀತಿಯ ಅನುಮಾನಗಳಿಗೆ ಎಡೆಮಾಡಿಕೊಡದೆ ಪೊಲೀಸ್‌ ಇಲಾಖೆ ಕೂಡಲೇ ಆರೋಪಿಗಳನ್ನು ಬಂಧಿಸಬೇಕು” ಎಂದು ಒತ್ತಾಯಿಸಿದೆ.

“ಆಲ್ವಿನ್ ಅವರು ಸಾಮಾಜಿಕ ಸಂಘಟನೆಯ ಅಧ್ಯಕ್ಷರಾಗಿದ್ದು, ಉಳಿಯ ಪಾವೂರು, ರಾಣಿಪುರ, ಉಳ್ಳಾಲ ಹೊಯ್ಗೆ, 62ನೇ ತೋಕೂರು ಕೆಂಜಾರು ಈ ಪ್ರದೇಶಗಳ ದ್ವೀಪಗಳನ್ನು ಉಳಿಸುವ ಉದ್ದೇಶದಿಂದ ಸಾರ್ವಜನಿಕರೊಂದಿಗೆ ಸೇರಿಕೊಂಡು ಅಕ್ರಮ ಮರಳುಗಾರಿಕೆಯ ವಿರುದ್ದ ಧ್ವನಿ ಎತ್ತಿದ್ದರು. ಇದನ್ನು ಸಹಿಸದ ದುಷ್ಕರ್ಮಿಗಳು ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಇದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದು, ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇವಲ ಹೇಳಿಕೆಗೆ ಸೀಮಿತವಾಗಿದೆ. ಈ ಪ್ರಕೃತಿಯನ್ನು ನಾಶಗೊಳಿಸುವವರ ವಿರುದ್ದ ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರ ಪರೋಕ್ಷವಾಗಿ ಕೈಜೋಡಿಸಿದಂತೆ ಕಾಣಿಸು‌ತ್ತಿದೆ. ಘಟನೆ ನಡೆದು ಮೂರ್ನಾಲ್ಕು ದಿನಗಳು ಕಳೆದರೂ ಕೂಡ ದುಷ್ಕರ್ಮಿಗಳನ್ನು ಬಂಧಿಸದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಭತ್ತ ಕಟಾವು ಯಂತ್ರದ ಮಾಲೀಕರಿಂದ ರೈತರ ಸುಲಿಗೆ: ರೈತ ಸಂಘ ಆರೋಪ

“ಅಲ್ಪಸಂಖ್ಯಾತರ ಹಿತ ಕಾಯುವ ಆಶ್ವಾಶನೆ ನೀಡುವ ಸರ್ಕಾರಗಳು ಕೇವಲ ಕ‌ಣ್ಣೊರೆಸುವ ತಂತ್ರದಲ್ಲಿಯೇ ತೊಡಗಿರುವುದನ್ನು ಬಿಟ್ಟರೆ ಯಾವುದೇ ಪ್ರಯೋಜನಗಳಾಗುತ್ತಿಲ್ಲ. ಅನ್ಯಾಯದ ವಿರುದ್ದ ದನಿಯೆತ್ತಿದವರನ್ನು ಹಲ್ಲೆಗಳ ಮೂಲಕ ದಮನಿಸುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ. ಆಲ್ವಿನ್ ಅವರ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳನ್ನು ಕೂಡಲೇ ಜಿಲ್ಲಾಡಳಿತದಿಂದ ಬಂಧಿಸುವ ಕೆಲಸವಾಗಬೇಕು. ಇಲ್ಲದಿದ್ದಲ್ಲಿ ಕ್ಯಾಥೊಲಿಕ್ ಸಭಾ ಸಂಘಟನೆ ಎರಡು ಜಿಲ್ಲೆಯ ಜನರನ್ನು ಸೇರಿಸಿಕೊಂಡು ಪ್ರತಿಭಟಿನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಈ ಪ್ರಕೃತಿಯನ್ನು ನಾಶಗೊಳಿಸುವವರ ವಿರುದ್ದ ಹೋರಾಟ ನಡೆಸುವ ನಮ್ಮ ಮೇಲೆ ಇನ್ನಷ್ಟು ಹಲ್ಲೆ ನಡೆಸಿದರೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ” ಎಂದು ಕಥೊಲಿಕ್ ಸಭಾ ಉಡುಪಿ ಪ್ರದೇಶದ ಪದಾಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...