ಉಡುಪಿ | ಭಕ್ತಿ ಭಾವದಿಂದ ಜರುಗಿದ ಉಡುಪಿ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ

Date:

ಉಡುಪಿ ಕಥೊಲಿಕ ಧರ್ಮಪ್ರಾಂತ್ಯದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಾನುವಾರ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ಜರಗಿತು.

ಕ್ರಿಸ್ತರಾಜರ ಮಹೋತ್ಸವದ ಪ್ರಧಾನ ಬಲಿಪೂಜೆಯ ನೇತೃತ್ವ ವಹಿಸಿದ್ದ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಮಾತನಾಡಿ, ‘ನಾವು ತೋರಿಸುವ ಪ್ರೀತಿ ತೋರ್ಪಡಿಕೆಯಾಗಿರದೆ ಅದನ್ನು ಕಾರ್ಯದ ಮೂಲಕ ಮಾಡಿ ತೋರಿಸುವಂತಿರಬೇಕು. ಪ್ರೀತಿ ಮತ್ತು ಸೇವೆ ಕ್ರೈಸ್ತ ಧರ್ಮದ ಮೂಲ ತತ್ವವಾಗಿದ್ದು, ಅದನ್ನು ನಮ್ಮ ನೆರೆಹೊರೆಯವರಲ್ಲಿ ತೋರ್ಪಡಿಸಲು ಹಿಂಜರಿಯಬಾರದು’ ಮುಂದಿನ ವರ್ಷವನ್ನು ಉಡುಪಿ ಧರ್ಮಪ್ರಾಂತ್ಯದಲ್ಲಿ ಬಡವರ ವರ್ಷವಾಗಿ ಆಚರಿಸಲಾಗುತ್ತಿದ್ದು ಕಷ್ಟದಲ್ಲಿರುವವರಿಗೆ, ಬಡತನದ ನೋವಿನಲ್ಲಿರುವವರಿಗೆ ಸಹಾಯಹಸ್ತ ಚಾಚಲು ಪ್ರತಿಯೊಬ್ಬರು ಈ ವರ್ಷದದಲ್ಲಿ ಪಣತೊಡೋಣಾ ಎಂದರು.

ಪವಿತ್ರ ಬಲಿಪೂಜೆಯ ಬಳಿಕ ಧರ್ಮಗುರು ವಿಲ್ಸನ್ ಡಿಸೋಜ ಪರಮ ಪ್ರಸಾದ ಆರಾಧನೆ ನೆರವೇರಿಸಿದರು. ಬಳಿಕ ಪರಮ ಪ್ರಸಾದವನ್ನು ವಿಶೇಷವಾಗಿ ಅಲಂಕರಿಸಿದ, ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಒಯ್ದು ಸಂತೆಕಟ್ಟೆ ಕಲ್ಯಾಣಪುರ ಮೌಂಟ್ ರೋಸರಿ ಚರ್ಚ್ನ ಮೈದಾನದಲ್ಲಿ ಬಹಿರಂಗ ಪ್ರಾರ್ಥನೆಯ ಮೂಲಕ ಗೌರವ ಸಲ್ಲಿಸಲಾಯಿತು. ಬ್ಯಾಂಡ್- ಸಂಗೀತ ಮತ್ತು ಭಕ್ತಿ ಗೀತೆಗಳೊಂದಿಗೆ ಮೆರವಣಿಗೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೌಂಟ್ ರೋಜರಿ ದೈವಾಲಯದ ಸಭಾಂಗಣದಲ್ಲಿ ದೈವವಾಕ್ಯದ ಪ್ರಬೋಧನೆಯನ್ನು ಮಿಲಾಗ್ರಿಸ್ ಕಾಥೆಡ್ರಲ್ ಸಹಾಯಕ ಗುರು ವಂದನೀಯ ಫಾ. ಪ್ರದೀಪ್ ಕಾರ್ಡೋಜ ರವರು ನೀಡಿದರು. ಅವರು “ಅಪೋಸ್ತಲರ ಆತ್ಮಸ್ಫೂರ್ತಿಯಲ್ಲಿ ಧರ್ಮಕೇಂದ್ರ, ಮನೆ, ಸಮುದಾಯ—ಎಲ್ಲೆಡೆ ಪರಮಪ್ರಸಾದ ಐಕ್ಯ ಕುಟುಂಬ ಕಟ್ಟುವ ಜವಾಬ್ದಾರಿ ನಮ್ಮದಾಗಿದೆ” ಎಂದು ಮನದಟ್ಟು ಮಾಡಿದರು.

ಧರ್ಮಾಧ್ಯಕ್ಷರು ಕಾರ್ಯಕ್ರಮದ ಅಂತ್ಯದಲ್ಲಿ ಪರಮಪ್ರಸಾದದ ಅಂತಿಮ ಆಶೀರ್ವಚನ ನೀಡಿ ಭಕ್ತರಿಗೆ ಆಧ್ಯಾತ್ಮಿಕ ಬಲವರ್ಧನ ಒದಗಿಸಿದರು. ಧರ್ಮಪ್ರಾಂತ್ಯದ ಬೈಬಲ್ ಆಯೋಗದ ನಿರ್ದೇಶಕ ವಂ| ವಿಲ್ಸನ್ ಡಿಸೋಜ ಮತ್ತು ಸಂತೆಕಟ್ಟೆ ಮೌಂಟ್ ರೋಸರಿ ಚರ್ಚಿನ ಪ್ರಧಾನ ಧರ್ಮಗುರು ವಂ|ಡಾ| ರೋಕ್ ಡಿಸೋಜ ದೈವಾರಾಧನಾ ವಿಧಿಯನ್ನು ಸಮರ್ಪಕವಾಗಿ ನಿರೂಪಿಸಿದರು. ರೊನಾಲ್ಡ್ ಸಲ್ಡಾನಾ ಧನ್ಯವಾದ ಸಲ್ಲಿಸಿದರು ಸಲ್ಲಿಸಿದರು.

ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚ್ಗಳಿಂದ ಸುಮಾರು 3000ಕ್ಕೂ ಅಧಿಕ ಭಕ್ತರು, 60ಕ್ಕೂ ಅಧಿಕ ಧರ್ಮ ಗುರುಗಳು, 100ಕ್ಕೂ ಅಧಿಕ ಧರ್ಮ ಭಗಿನಿಯರು ಭಾಗವಹಿಸಿದ್ದರು. ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಲಪತಿ ವಂ|ಸ್ಟೀಫನ್ ಡಿಸೋಜಾ, ಶಿರ್ವ, ಕಾರ್ಕಳ, ಉಡುಪಿ ವಲಯಗಳ ಪ್ರಧಾನ ಧರ್ಮಗುರುಗಳಾದ ವಂ|ಡಾ|ಲೆಸ್ಲಿ ಡಿಸೋಜ, ವಂ|ಆಲ್ಬನ್ ಡಿಸೋಜಾ, ವಂ| ಚಾರ್ಲ್ಸ್ ಮಿನೇಜಸ್, ಧರ್ಮಪ್ರಾಂತ್ಯದ ಪಾಲನಾ ಸಮಿತಿ ಕಾರ್ಯದರ್ಶಿ ಲೆಸ್ಲಿ ಅರೋಝಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...