ಉಡುಪಿ | ನ. 16 : ಮೂತ್ರಪಿಂಡ ರೋಗಿಗಳಿಗೆ 50% ರಿಯಾಯತಿಯಲ್ಲಿ ಡಯಾಲಿಸಿಸ್ ಚಿಕಿತ್ಸೆಯ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಯೋಜನೆಗೆ ಚಾಲನೆ

Date:

ಮೂತ್ರಪಿಂಡ ವೈಫಲ್ಯದಿಂದ ನರಳುತ್ತಿರುವ, ಉಡುಪಿ ಜಿಲ್ಲೆಯ ಅರ್ಹ ಬಡರೋಗಿಗಳಿಗಾಗಿ 50% ರಿಯಾಯತಿ ದರದಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುವ ನಿಟ್ಟಿನಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಹಾಗೂ ಉದ್ಯಮಿ ಜೋಸೆಫ್ ಮಿನೇಜಸ್ ಸಾಸ್ತಾನ ಇವರ ನೇತೃತ್ವದಲ್ಲಿ ಮತ್ತು ಫ್ರೀಡಾ ರೇಗೊ ಮತ್ತು ಬೆಸಿಲ್ ಪಿಂಟೊ ಇವರ ಸಹಕಾರದೊಂದಿಗೆ ಟ್ರಿನಿಟಿ ಮೆಡಿಕೇರ್ ಸರ್ವಿಸ್ ಯೋಜನೆಯ ಉದ್ಘಾಟನೆ ನವೆಂಬರ್ 16 ರಂದು ಭಾನುವಾರ 11 ಗಂಟೆಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಇದರ ಸಭಾಂಗಣದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಅಧ್ಯಕ್ಷರಾದ ರೊನಾಲ್ಡ್ ಡಿ ಆಲ್ಮೇಡಾ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ, ಹಿರಿಯ ವೈದ್ಯರಾದ ಡಾ. ಮೇಘಾ ಪೈ ಗೌರವ ಅತಿಥಿಗಳಾಗಿ ಹೆಸರಾಂತ ವಾಗ್ಮಿ ರಫೀಕ್ ಮಾಸ್ಟರ್, ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಉದ್ಯಮಿ ಜೊಸೇಫ್ ಎಲಿಯಾಸ್ ಮಿನೇಜಸ್ ಭಾಗವಹಿಸಲಿದ್ದಾರೆ.

ಉಡುಪಿ ಜಿಲ್ಲಾ ವ್ಯಾಪ್ತಿಯ ನಿಗದಿತ ಅಸ್ಪತ್ರೆಗಳಲ್ಲಿ ಈ ಸೌಲಭ್ಯವನ್ನು ಆರಂಭಿಸಲಾಗಿದ್ದು ಪ್ರಾಥಮಿಕ ಹಂತದಲ್ಲಿ ಕಲ್ಯಾಣಪುರ ಸಂತೆಕಟ್ಟೆಯ ಗೊರೆಟ್ಟಿ ಆಸ್ಪತ್ರೆ ಮತ್ತು ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆಯನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಕಳ ಮತ್ತು ಕುಂದಾಪುರದ ನಿಗದಿತ ಆಸ್ಪತ್ರೆಗಳಿಗೆ ಕೂಡ ಸೇವೆಯನ್ನು ವಿಸ್ತರಿಸಲಾಗುವುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಡಯಾಲಿಸಿಸ್ ಅಗತ್ಯವಿರುವ ಬಡ ರೋಗಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದು. ಈ ಯೋಜನೆ ಎಲ್ಲಾ ಧರ್ಮ ಮತ್ತು ವರ್ಗದವರಿಗೂ ಕೂಡ ಲಭ್ಯವಾಗಿದ್ದು ಸ್ಥಳೀಯ ಚರ್ಚಿನ ಕಥೊಲಿಕ್ ಸಭಾ ಘಟಕದ ಶಿಫಾರಸು ಅರ್ಜಿಯೊಂದಿಗೆ ಯೋಜನೆಯ ಪ್ರಯೋಜನ ಪಡೆಯಲು ಅವಕಾಶವಿದೆ. ಡಯಾಲಿಸಿಸ್ ರೋಗಿಗಳಿಗೆ ಯೋಜನೆಗೆ ನೊಂದಣಿಯಾದ ಬಳಿಕ ಅಧಿಕೃತ ಗುರುತು ಪತ್ರ ನೀಡಲಾಗುತ್ತಿದ್ದು ಅದರ ಆಧಾರದಲ್ಲಿ ನಿರಂತರವಾಗಿ 50% ರಿಯಾಯತಿ ದರದಲ್ಲಿ ಚಿಕಿತ್ಸೆಯನ್ನು ನಿಗದಿಪಡಿಸಿದ ಆಸ್ಪತ್ರೆಯಲ್ಲಿ ಪಡೆಯಬಹುದಾಗಿದೆ. ಡಯಾಲಿಸಿಸ್ ಸೇವೆಗೆ ತಗುಲುವ 50% ವೆಚ್ಚವನ್ನು ರೋಗಿಗಳು ಭರಿಸಬೇಕಾಗಿದ್ದು ಉಳಿದ 50% ವೆಚ್ಚವನ್ನು ಜೋಸೆಫ್ ಮಿನೇಜಸ್ ಮತ್ತು ಅವರ ತಂಡ ಕಥೊಲಿಕ್ ಸಭಾ ಉಡುಪಿ ಪ್ರದೇಶದ ಮುಖಾಂತರ ಆಸ್ಪತ್ರೆಗಳಿಗೆ ಭರಿಸಲಿದೆ.

ಜೋಸೆಫ್ ಮಿನೇಜಸ್ ಮತ್ತು ಕುಟುಂಬ ಕುಟುಂಬದ ವತಿಯಿಂದ ಈಗಾಗಲೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ರೋಗಿಗಳ ಸಹಾಯಕರಿಗೆ ಕಳೆದ ಹಲವಾರು ವರುಷಗಳಿಂದ ವಿವಿಧ ದಾನಿಗಳ ಸಹಕಾರದಿಂದ ಮಧ್ಯಾಹ್ನದ ಊಟದ ವ್ಯವಸ್ಥೆ ನೀಡುವ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ನ ಮನ್ನಾ ಯೋಜನೆಯ ಮುಂದಿನ 100 ವರ್ಷಗಳ ಕಾಲ ಸಂಪೂರ್ಣ ವೆಚ್ಚವನ್ನು ನಿರ್ವಹಿಸುತ್ತಿರುವುದು ಗಮನಾರ್ಹ ಸಂಗತಿಯಾಗಿದ್ದು ಈಗ ಮತ್ತೊಂದು ಜನಪರ ಯೋಜನೆಗೆ ಮುಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...