ಉಡುಪಿ-ಚಿಕ್ಕಮಗಳೂರು | ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಕಟ್ಟಿಂಗೇರಿ ಗ್ರಾಮಸ್ಥರ ನಿರ್ಧಾರ

Date:

ಬೆಳ್ಳೆ ಗ್ರಾಮದ ಕಟ್ಟಿಂಗೇರಿ 1ನೇ ವಾರ್ಡಿನ ನೂರಾರು ಮಂದಿ ಗ್ರಾಮಸ್ಥರು ಸಭೆ ಸೇರಿ ನಮ್ಮ ಬೇಡಿಕೆ ಈಡೇರದಿದ್ದರೆ ಲೋಕಸಭೆ ಸೇರಿದಂತೆ ಮುಂಬರುವ ಯಾವುದೇ ಚುನಾವಣೆಗಳಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಟ್ಟ ಕಾಪು ವಿಧಾನಸಭಾ ಕ್ಷೇತ್ರದ ಮೂಡುಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟ್ಟಿಂಗೇರಿ ಗ್ರಾಮಸ್ಥರು ಮುಂಬರುವ ಲೋಕಸಭಾ ಚುನಾವಣೆಯನ್ನು ಬಹಿಷ್ಕಾರ ಮಾಡುವ ನಿಟ್ಟಿನಲ್ಲಿ ಕಟ್ಟಿಂಗೇರಿ ಅಂಗನವಾಡಿ ಸಮೀಪ ಹಮ್ಮಿಕೊಂಡಿದ್ದ ಬೃಹತ್ ಸಭೆಯಲ್ಲಿ ಮಾತನಾಡಿದರು.

“ಮೂಡುಬೆಳ್ಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಟ್ಟಿಂಗೇರಿ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೊಳಗಾಗಿದೆ. ಮೂಲ ಸೌಕರ್ಯಗಳಾದ ರಸ್ತೆ, ಸೇತುವೆ, ಬೀದಿದೀಪ, ಬಸ್ ವ್ಯವಸ್ಥೆಯಿಲ್ಲದೆ ಕಟ್ಟಿಂಗೇರಿ ಕುಗ್ರಾಮವಾಗಿದೆ. ಬೆಳ್ಳೆ ಗ್ರಾಮದಲ್ಲಿ ಈ ಹಿಂದಿನ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ನಡೆಸಿ, ಜನರ ಅಹವಾಲುಗಳನ್ನು ಸ್ವೀಕರಿದ್ದರೂ ಕೂಡಾ ಈತನಕ ಯಾವುದೇ ಸಮಸ್ಯೆ ಬಗೆಹರಿದಿಲ್ಲ” ಎಂದು ಗ್ರಾಮಸ್ಥರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆ ಬಹಿಷ್ಕಾರ 1

ಬೆಳ್ಳೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಾಜಿ ಎಸ್‌ ಸುವರ್ಣ ಮಾತನಾಡಿ, “ಕಟ್ಟಿಂಗೇರಿ ವಾರ್ಡಿನಲ್ಲಿ ಸುಮಾರು 1 ಸಾವಿರ ಮಂದಿ ಅರ್ಹ ಮತದಾರರಿದ್ದಾರೆ. ಕಳೆದ ಚುನಾವಣೆಯಲ್ಲಿ 750ಕ್ಕೂ ಅಧಿಕ ಮಂದಿ ಮತದಾನ ಮಾಡಿದ್ದಾರೆ. ಹೀಗಿದ್ದರೂ ಇಲ್ಲಿ ಯಾವುದೇ ಸೌಕರ್ಯಗಳಿಲ್ಲ. ಸಮರ್ಪಕ ರಸ್ತೆ, ಸೇತುವೆಗಳಿಲ್ಲದೆ 6ವರ್ಷಗಳಿಂದ ಕಟ್ಟಿಂಗೇರಿಗೆ ಬಸ್ ಬರುತ್ತಿಲ್ಲ. ಈ ಬಾರಿ ಮತದಾನ ಬಹಿಷ್ಕಾರ ಮಾಡಲು ಗ್ರಾಮಸ್ಥರು ಸ್ವ-ಇಚ್ಛೆಯಿಂದ ಮುಂದಾಗಿದ್ದಾರೆ” ಎಂದರು.

ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ದೇವದಾಸ್‌ ಹೆಬ್ಬಾರ್ ಮಾತನಾಡಿ, “ಕಟ್ಟಿಂಗೇರಿ ಸಮಸ್ಯೆಯ ಬಗ್ಗೆ ಗ್ರಾಮಸ್ಥರು ಸಭೆ ನಡೆಸಿ ಪ್ರತಿ ಬಾರಿ ಮತದಾನ ಬಹಿಷ್ಕಾರಕ್ಕೆ ಮುಂದಾದರೂ, ಜನಪ್ರತಿನಿಧಿಗಳ ಆಶ್ವಾಸನೆಗೆ ಸೋತು ಬಹಿಷ್ಕಾರ ಹಿಂಪಡೆಯಲಾಗುತ್ತಿತ್ತು. ಆದರೆ ಈ ಬಾರಿ ಯಾವುದೇ ಒತ್ತಡ, ಆಮಿಷಗಳಿಗೆ ಗ್ರಾಮಸ್ಥರು ಜಗ್ಗದೆ ಅಚಲ ನಿರ್ಧಾರವನ್ನು ಸಭೆಯಲ್ಲಿ ಕೈಗೊಂಡಿದ್ದಾರೆ” ಎಂದರು.

ಬೆಳ್ಳೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರಂಜನಿ ಹೆಗ್ಡೆ ಮಾತನಾಡಿ, “ಕಟ್ಟಿಂಗೇರಿಗೆ ರಸ್ತೆ ಕಾಮಗಾರಿ ಮುಗಿದು, ಬಸ್ ಸಂಚಾರ ಆರಂಭವಾದ ಮೇಲೆಯೇ ಮತದಾನ ಮಾಡುವುದೆಂದು ನಾವು ನಿರ್ಧರಿಸಿದ್ದೇವೆ. ಸ್ಥಳೀಯ ಶಾಸಕರು, ಸಂಸದರು ಸೇರಿದಂತೆ ಎಲ್ಲರೂ ನಮ್ಮನ್ನು ಮರೆತಿದ್ದಾರೆ. ಮತದಾನ ಬಹಿಷ್ಕಾರದ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಮಾತ್ರವಲ್ಲದೆ ರಾಜ್ಯ ಚುನಾವಣಾ ಆಯೋಗಕ್ಕೂ ಪತ್ರ ಬರೆದಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಗ್ಯಾರಂಟಿ ಯೋಜನೆಗಳ ಬಗೆಗಿನ ತಪ್ಪು ಸಂದೇಶಗಳಿಗೆ ಕಿವಿಕೊಡಬೇಡಿ: ಗೀತಾ ಶಿವರಾಜಕುಮಾರ್

ಮುಂಬಯಿ ಉದ್ಯಮಿ ಮಹೇಶ್ ಹೆಗ್ಡೆ, ಗ್ರಾಮ ಪಂಚಾಯಿತಿ ಸದಸ್ಯ ಸದಾನಂದ ಸಫಲಿಗ, ಸಮಾಜಸೇವಕ ಸಂತೋಷ್ ಶೆಟ್ಟಿ ಪಂಜಿಮಾರ್‌ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...