ಉಡುಪಿ | ಬಡ ರಿಕ್ಷಾ ಚಾಲಕರ ಮೇಲೆ ಹಲ್ಲೆ, ದೌರ್ಜನ್ಯ ತಡೆಯುವಂತೆ ಸಿಐಟಿಯು ಒತ್ತಾಯ

Date:

ಇತ್ತೀಚಿನ ದಿನಗಳಲ್ಲಿ ಉಡುಪಿ ನಗರದಲ್ಲಿ ನಿರಂತರವಾಗಿ ಕೆಲವು ಬಡ ರಿಕ್ಷಾ ಚಾಲಕರಿಗೆ ಹಲ್ಲೆ, ದೌರ್ಜನ್ಯ, ಮಾನಸಿಕ ಹಿಂಸೆಯನ್ನು ಉಡುಪಿ ನಗರದಲ್ಲಿರುವ ರಾಜಕೀಯ ವ್ಯಕ್ತಿಗಳ ಕೈಯಲ್ಲಿ ಇರುವ ಕೆಲವು ರಿಕ್ಷಾ ಯೂನಿಯನ್ ಗಳು ನಡೆಸುತ್ತಿದೆ ಇದನ್ನು ಈ ಕೂಡಲೇ ಜಿಲ್ಲಾಧಿಕಾರಿಯವರು ಮತ್ತು ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ಮಧ್ಯ ಪ್ರವೇಶಿಸಿ ಇಂತಹ ಅನಾಗರಿಕ ರೀತಿಯಲ್ಲಿ ನಡೆಯು ರಿಕ್ಷಾ ಯೂನಿಯನ್ ಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳ ಬೇಕು ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕವಿರಾಜ್. ಎಸ್.ಕಾಂಚನ್ ಒತ್ತಾಯಿಸಿದ್ದಾರೆ.

ಈ ಹಿಂದೆ ಹಲವು ಬಾರಿ ಬಾಡಿಗೆ ವಿಚಾರವಾಗಿ ಜಗಳ, ಹಲ್ಲೆ ಗಳು ನಡೆದಾಗ ಪೋಲಿಸ್ ಅಧಿಕಾರಿಗಳು ಹಾಗೂ ನಗರಸಭೆ ಅಧಿಕಾರಿಗಳು ಮಾತುಕತೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಿದರು. ಇತ್ತೀಚಿಗೆ ಉಡುಪಿ ನಗರದ ಸಿಟಿಬಸ್ ನಿಲ್ದಾಣ, ಸರ್ವಿಸ್ ಬಸ್ ನಿಲ್ದಾಣದಲ್ಲಿ ಇರುವ 4ರಿಕ್ಷಾ ಸ್ಟ್ಯಾಂಡ್ ಗಳಲ್ಲಿ ನಿರಂತರವಾಗಿ ಬಡ ಚಾಲಕರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಿದ್ದು ರಿಕ್ಷಾ ಯೂನಿಯನ್ ನ ಸದಸ್ಯರಾಗಲು ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿದ್ದಾರೆ. ಇವರಿಗೆ ಕೆಲವು ರಾಜಕೀಯ ವ್ಯಕ್ತಿಗಳ ಬೆಂಬಲಿಸುವುದರಿಂದ ಉಡುಪಿ ನಗರದಲ್ಲಿ ಬಡ ಚಾಲಕರಿಂದ ಹಗಲು ದರೋಡೆ ನಡೆಸುತ್ತಿದ್ದಾರೆ ಈ ಕೂಡಲೇ ಜಿಲ್ಲಾಧಿಕಾರಿ ಯವರು ಮತ್ತು ಪೋಲಿಸ್ ವರಿಷ್ಠಾಧಿಕಾರಿಯವರು ಪರಿಶೀಲನೆ ನಡೆಸಿ ಅಂತಹ ರಿಕ್ಷಾ ಯೂನಿಯನ್‌ಗಳ ಮತ್ತು ಹಲ್ಲೆ ನಡೆಸುವಂತಹ ರಿಕ್ಷಾ ಚಾಲಕರ ಲೈಸನ್ಸ್ ರದ್ದು ಗೊಳಿಸಬೇಕು ಹಾಗೂ ಹಲ್ಲೆ ಒಳಾಗಾಗಿ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ಬಡ ರಿಕ್ಷಾ ಚಾಲಕನಿಗೆ ನ್ಯಾಯ ಒದಗಿಸಬೇಕು ಎಂದು ಸಿಐಟಿಯು ಒತ್ತಾಯಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...