ಉಡುಪಿ | ಕೆಂಪು ಕಲ್ಲು ಮರಳು ಸಮಸ್ಯೆ ಧರಣಿ ಅಂತ್ಯ, ಆಗಸ್ಟ್ 30 ಜಂಟಿ ಸಭೆ ನಿಗದಿ

Date:

ಕಟ್ಟಡ ಕಾರ್ಮಿಕರಿಗೆ ಕೆಂಪು ಕಲ್ಲು ಮರಳು ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಆಗಸ್ಟ್ 18 ರಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಇಂದು ಜಿಲ್ಲೆಯ ಸಾವಿರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್ ಬಳಿಯಿಂದ ಬ್ರಹತ್ ಮೆರವಣಿಗೆ ನಡೆಸಿದ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಚಲೋ ನಡೆಸಿ ಪ್ರತಿಭಟಿಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಮೆರವಣಿಗೆ ಬರುತ್ತಿದ್ದಂತೆ ಜಿಲ್ಲಾಧಿಕಾರಿ ಕಚೇರಿ ಎರಡೂ ಗೇಟ್ ಗಳನ್ನು ಬಂದ್ ಮಾಡಲಾಗಿತ್ತು. ಅನಂತರ ಸಭೆಯಲ್ಲಿ ಮಾತನಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯದ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ಶಾಸಕರು ವಿಫಲರಾಗಿದ್ದಾರೆ. ಅಧಿಕಾರಿಗಳು ಕಠಿಣ ಕ್ರಮ ಜರುಗಿಸಿರುವುದರಿಂದ ಸಮಸ್ಯೆ ಉಲ್ಬಣಗೊಂಡಿದೆ ಇದು ಬಡ ಕಾರ್ಮಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು.

1006799788

ಕಟ್ಟಡ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ರಟ್ಟೆಯ ಬಿಟ್ಟರೆ ಆಸ್ತಿಯೇ ಇಲ್ಲದ ಕಟ್ಟಡ ಕಾರ್ಮಿಕರು ರಟ್ಟೆ ನಂಬಿ ಕುಟುಂಬ ನಿರ್ವಹಣೆಗೆ ಸಾಲ ಮಾಡಿದ್ದಾರೆ ಆದರೆ ಜಿಲ್ಲಾಡಳಿತ ಕೆಲಸವನ್ನೇ ಕಸಿದುಕೊಂಡಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಲೀಸರು ಹೋರಾಟಗಾರರ ಮಧ್ಯೆ ಮಾತಿನ ಚಕಮಕಿ

ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಬರುತ್ತಿದ್ದಂತೆ ಪೋಲೀಸರು ಒಳಗೆ ಹೋಗುವುದನ್ನು ತಡೆಯಲು ಪ್ರಯತ್ನಿಸಿದರು ಆದರೆ ಹೋರಾಟಗಾರರು ಮುಂದಕೆ ಹೋದಾಗ ಗೇಟ್ ಬಂದ್ ಮಾಡಿಸಲಾಯಿತು ಈ ಮಧ್ಯೆ ಮಾತಿನ ಚಕಮಕಿ ನಡೆಯಿತು. ಅಪರ ಜಿಲ್ಲಾಧಿಕಾರಿ ಮಧ್ಯೆ ಪ್ರವೇಶಿಸಿ ಮನವಿ ಸ್ವೀಕರಿಸಲು ಮುಂದಾದರು ಆದರೆ ಪ್ರತಿಭಟನಾಕಾರರು ಕೇವಲ ಮನವಿ ಸ್ವೀಕರಿಸಿದರೆ ಸಾಲದು ಸಮಸ್ಯೆ ಇತ್ಯರ್ಥ ಪಡಿಸಬೇಕು ಎಂದು ಒತ್ತಾಯಿಸಿ ಜಂಟಿ ಸಭೆ ನಡೆಸಲು ಆಗ್ರಹಿಸಿದರು. ಲಿಖಿತ ಭರವಸೆ ನೀಡಬೇಕು ಎಂದರು.

1006798903

ಅಪರ ಜಿಲ್ಲಾಧಿಕಾರಿ ಅವರು ಆಗಸ್ಟ್ 30 ರಂದು ಜಂಟಿ ಸಭೆ ನಡೆಸಲು ಒಪ್ಪಿ ಲಿಖಿತ ಆದೇಶ ನೀಡಿದ ನಂತರ ಧರಣಿ ವಾಪಸ್ ಪಡೆಯಲಾಯಿತು. ಹೋರಾಟದಲ್ಲಿ ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಸುಭಾಷ್ ಚಂದ್ರ ನಾಯಕ್, ಪ್ರಧಾನ ಕಾರ್ಯದರ್ಶಿ ಶಶಿಧರ ಗೊಲ್ಲ, ಬೈಂದೂರು ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ್ ಪಡುಕೋಣೆ, ಕಾರ್ಯದರ್ಶಿ ರೊನಾಲ್ಡ್ ರಾಜೇಶ್ ಕ್ವಾಡ್ರಸ್,ಸಿಐಟಿಯು ಮುಖಂಡರಾದ ಎಚ್ ನರಸಿಂಹ ಚಂದ್ರಶೇಖರ ವಿ, ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್ ಕಾಂಚನ್, ಸಿಐಟಿಯು ಜಿಲ್ಲಾ ಅಧ್ಯಕ್ಷರಾದ ಕೆ ಶಂಕರ್ ಮೊದಲಾದವರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...