ಉಡುಪಿ | ಕುಂದಾಪುರದಲ್ಲಿ ಅ. 20ರಂದು ಸಿಐಟಿಯು ವತಿಯಿಂದ ಕಾರ್ಮಿಕರ ಸಮಾವೇಶ

Date:

ರಾಜ್ಯ ಸರ್ಕಾರ ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ಮೂಲಕ ಘೋಷಿಸಿರುವ ಹಲವಾರು ಸೌಲಭ್ಯಗಳನ್ನು ಪಡೆಯಲು ಸಾರಿಗೆ ಕಾರ್ಮಿಕರ ಕಾರ್ಡ್ ಪಡೆಯಲು ಮಾಹಿತಿ ಕೊಡುವ ಉದ್ದೇಶದಿಂದ ಅಕ್ಟೋಬರ್ 20ರಂದು ಬೆಳಗ್ಗೆ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಕಾರ್ಮಿಕರ ಬೃಹತ್ ಸಮಾವೇಶ ನಡೆಸಲು ಸಿಐಟಿಯು ಸಂಚಲನ ಸಮಿತಿ ನಿರ್ಧರಿಸಿದೆ.

ಸಾರಿಗೆ ಕಾರ್ಮಿಕರಿಗೆ ಪಿಂಚಣಿ, ಅಪಘಾತ ಪರಿಹಾರ, ವೈದ್ಯಕೀಯ ಸೌಲಭ್ಯ,ಸಾರಿಗೆ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಧನಸಹಾಯ ಸೇರಿದಂತೆ ಮುಂತಾದ ಸೌಲಭ್ಯಗಳನ್ನು ಪಡೆಯಲು ಮಂಡಳಿಗೆ ನೋಂದಾಯಿಸಿ ಅವರ ಕುಟುಂಬಗಳಿಗೆ ಭದ್ರತೆ ಒದಗಿಸಲು ಈ ಸಮಾವೇಶ ನಡೆಯಲಿದೆ.

ಅಂಬೇಡ್ಕರ್ ಸಹಾಯ ಹಸ್ತ ನೋಂದಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಮಿಕ ಇಲಾಖೆಯು ಹಮಾಲರು, ಟೈಲರ್‌ಗಳು, ಅಗಸರು, ಹೋಟೆಲ್ ಕಾರ್ಮಿಕರು, ಫೋಟೋಗ್ರಾಫರ್, ಕಲ್ಯಾಣ ಮಂಟಪದಲ್ಲಿ ದುಡಿಯುವ ಕೆಲಸಗಾರರು, ಬೀದಿ ಬದಿ ವ್ಯಾಪಾರಸ್ಥರು, ದಿನ ಪತ್ರಿಕೆ ವಿತರಕರು, ಮನೆಗೆಲಸಗಾರರು ಮುಂತಾದವರಿಗೆ ಅಂಬೇಡ್ಕರ್ ಸಹಾಯ ಹಸ್ತ ಎಂಬ ಹೆಸರಿನಲ್ಲಿ ನೋಂದಣಿ ಮಾಡಿ ಕಾರ್ಮಿಕ ಕಾರ್ಡ್ ಪಡೆಯಲು ಮಾಹಿತಿ ಇದೇ ಸಂದರ್ಭದಲ್ಲಿ ನೀಡಲಾಗುತ್ತದೆ ಎಂದು ಸಿಐಟಿಯು ತಿಳಿಸಿದೆ.

ಇದನ್ನು ಓದಿದ್ದೀರಾ? ಬೆಂಗಳೂರು | ಮಾಹಿತಿ ತಂತ್ರಜ್ಞರ ಸೇವೆ ಪಡೆಯಲು ಅರ್ಜಿ ಆಹ್ವಾನ

ಆದ್ದರಿಂದ ಈ ಎಲ್ಲಾ ಕ್ಷೇತ್ರಗಳಲ್ಲಿ ದುಡಿಯುವ ಕಾರ್ಮಿಕರು ಈ ಸಮಾವೇಶದಲ್ಲಿ ಪಾಲ್ಗೊಂಡು ಸರಕಾರದ ಸೌಲಭ್ಯಗಳನ್ನು ಪಡೆಯಬೇಕು ಎಂದು ಸಿಐಟಿಯು ಸಂಚಲನ ಸಮಿತಿ ಸಂಚಾಲಕರಾದ ಚಂದ್ರಶೇಖರ ವಿ, ಕೆಲಸಗಾರರ ಸಂಘದ ಅಧ್ಯಕ್ಷ ಸುರೇಶ್ ಕಲ್ಲಾಗರ, ಸಿಐಟಿಯು ಉಡುಪಿ ಜಿಲ್ಲಾ ಮುಖಂಡರಾದ ಎಚ್ ನರಸಿಂಹ ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...