ಉಡುಪಿ | ಆಸ್ಪತ್ರೆಯ ಪರಿಸರದಲ್ಲಿ ಜ್ವರ ಬಾಧೆಗಳು ಪಸರಿಸುವ ಭೀತಿ ! ಗಿಡ ಗಂಟಿಗಳ ಕಟಾವಿಗೆ ಆಗ್ರಹ

Date:

ಉಡುಪಿ ನಗರದ ಕವಿ ಮುದಣ್ಣ ಮಾರ್ಗ, ನಗರಸಭೆ ಕಛೇರಿ ಬಳಿಯಲ್ಲಿರುವ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಕಂಪೌಂಡ್ ಒಳಾಂಗಣದ ಸುತ್ತಲು ಗಿಡ ಗಂಟಿಗಳು ಬೆಳೆದು ನಿಂತಿದ್ದು, ಆಸ್ಪತ್ರೆಯ ಪರಿಸರವು ರೋಗವಾಹಕ ಸೊಳ್ಳೆಗಳ ಉತ್ಪತ್ತಿಯ ಕಾರ್ಖಾನೆಯಾಗಿ ಮಾರ್ಪಟ್ಟಿದ್ದು, ಜಿಲ್ಲಾ ಆರೋಗ್ಯ ಇಲಾಖೆ, ನಗರಾಡಳಿತ ತಕ್ಷಣ ಗಿಡಗಂಟಿಗಳನ್ನು ಕಟಾವುಗೊಳಿಸಬೇಕೆಂದು ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಆಗ್ರಹಪಡಿಸಿದ್ದಾರೆ.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಸರದಲ್ಲಿ ಗಿಡ ಗಂಟಿಗಳು ಬೆಳೆದು ನಿಂತಿರುವುದರಿಂದ ಉರಗಾದಿ, ವಿಷ ಜಂತುಗಳು ನೆಲೆ ಪಡೆಯಲು ಯೋಗ್ಯ ಸ್ಥಳವಾದಂತಾಗಿದೆ. ಪರಿಸರ ಶುಚಿತ್ವದ ಸಂದೇಶ ಸಾರಬೇಕಾದ ಆಸ್ಪತ್ರೆಯ ಮಡಿಲಿನಲ್ಲಿ ಅಶುಚಿತ್ವದ ವಾತಾವರಣ ಸೃಷ್ಟಿಯಾಗಿರುವುದು ವಿಪರ್ಯಾಸದ ಸಂಗತಿ ಎನಿಸಿಕೊಂಡಿದೆ. ಡೆಂಗ್ಯೂ, ಮಲೇರಿಯ ಜ್ವರ ಬಾಧಿಸುವ‌ ಭೀತಿಯು ಎದುರಾಗಿದೆ. ಪ್ರತಿ ವರ್ಷದ ಮಳೆಗಾಲದಲ್ಲೂ ಆಸ್ಪತ್ರೆಯ ಸುತ್ತಲು ಗಿಡಗಂಟಿಗಳು ಬೆಳೆದು ಸಮಸ್ಯೆ ಉದ್ಭವಿಸುವುದು ಕಂಡುಬರುತ್ತದೆ. ಹಾಗಾಗಿ ನೆಲವನ್ನು ಸಮತಟ್ಟುಗೊಳಿಸಿ ನೆಲಹಾಸು ಅಳವಡಿಸುವುದರಿಂದ, ಸಮಸ್ಯೆಯಿಂದ ಶಾಶ್ವತ ಮುಕ್ತಿ ಪಡೆಯಲು ಸೂಕ್ತ ಪರಿಹಾರವಾಗಿದ್ದು, ಆರೋಗ್ಯ ಇಲಾಖೆ ಗಮನಿಸಬೇಕಾಗಿದೆ ಎಂದು ಸಾಮಾಜಿಕ ಕಾರ್ಯರ್ಕರ್ತರು ಸಲಹೆಯನ್ನು ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...