ಉಡುಪಿ | ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಆದ್ಯತೆಯ ಮೇಲೆ ಕೈಗೊಳ್ಳಿ – ಆಶೀಶ್ ಕುಂದಾಲ್

Date:

ಉಡುಪಿ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಅದ್ಯತೆಯ ಮೇಲೆ ಕೈಗೊಂಡು ಶುದ್ಧ ನೀರನ್ನು ಒದಗಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ನೋಡೆಲ್ ಅಧಿಕಾರಿ ಆಶೀಶ್ ಕುಂದಾಲ್ ಅವರು ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು.

ಜಿಲ್ಲೆಯ ಗ್ರಾಮೀಣ ಭಾಗದ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಒದಗಿಸುವ ಜಲ್ ಜೀವನ್ ನಳ ನೀರನ್ನು ಒದಗಿಸುವ ಕಾಮಗಾರಿ ಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು. ವಾರಾಹಿ ನದಿ ನೀರಿನ ಮೂಲದಿಂದ ಕಾರ್ಕಳ, ಹೆಬ್ರಿ ಹಾಗೂ ಕಾಪು ತಾಲೂಕಿನ 69 ಗ್ರಾಮಗಳ 1904 ವಾಸಸ್ಥಾನಗಳಿಗೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯ ಕಾಮಗಾರಿಗಳನ್ನು ಮುಂಬರುವ ಡಿಸೆಂಬರ್ ಒಳಗೆ ಪೂರ್ಣಗೊಳಿಸಿ, ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಎಂದರು.

1005774994

ಬಹುಗ್ರಾಮ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿ, ನೀರು ಶುದ್ಧೀಕರಣ ಘಟಕ, ಸೇರಿದಂತೆ ಮತ್ತಿತರ ಕಾಮಗಾರಿಗಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ಪೈಪ್‌ಲೈನ್ ಕಾಮಗಾರಿಯು ಮೀಸಲು ಅರಣ್ಯ ಪ್ರದೇಶ ಹಾಗೂ ವನ್ಯಜೀವಿ ಅರಣ್ಯ ಪ್ರದೇಶಗಳಲ್ಲಿ ಹಾದುಹೋಗಲಿದ್ದು, ಈಗಾಗಲೇ ಅರಣ್ಯ ಇಲಾಖೆ ವತಿಯಿಂದ ಒಪ್ಪಿಗೆ ನೀಡಿದೆ. ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯೋಜನೆಗೆ ಅಗತ್ಯವಿರುವ ವಿದ್ಯುತ್‌ಚ್ಛಕ್ತಿ ಸಬ್‌ಸ್ಟೇಷನ್, ಪಂಪ್‌ಹೌಸ್, ಟ್ಯಾಂಕುಗಳ ನಿರ್ಮಾಣ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದ ಅವರು, ಗ್ರಾಮೀಣ ಭಾಗದಲ್ಲಿ ಅಂತರ್ಜಲ ಹೆಚ್ಚಿಸಲು ಅಗತ್ಯವಿರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ, ಕೇಂದ್ರ ಜಲ ಜೀವನ್ ಮಿಷನ್ ಯೋಜನೆಯ ತಾಂತ್ರಿಕ ಸಹಾಯಕ ನಾರಾಯಣ ದಾಸ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಉದಯ್ ಕುಮಾರ್, ವಿವಿಧ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...