ಉಡುಪಿ | ಮಲ್ಪೆ ಸರಕಾರಿ ಜಾಗ ಭೂಗುತ್ತಿಗೆ ವಿವಾದ, ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಡಿಸಿ, ಎಸ್‌ ಪಿಗೆ ಮನವಿ

Date:

ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರರ ಪ್ರದೇಶದಲ್ಲಿ ಉಂಟಾದ ಸರಕಾರಿ ಜಾಗ ವಿವಾದದಿಂದ ಸ್ಥಳೀಯ ನೈಜ ಮೀನುಗಾರರಲ್ಲಿ ಉಂಟಾಗಿರುವ ಆತಂಕ ನಿವಾರಣೆ, ಅವರ ಹಕ್ಕು-ಹಿತಗಳ ರಕ್ಷಣೆ ಹಾಗೂ ಸರ್ಕಾರ ಹೊರಡಿಸಿದ ವಿವಾದಾತ್ಮಕ ಆದೇಶವನ್ನು ರದ್ದುಗೊಳಿಸುವಂತೆ ಆಗ್ರಹಿಸಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಜಿಲ್ಲಾಧಿಕಾರಿ ಮತ್ತು ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಮನವಿ ಸಲ್ಲಿಸಿ ಈದಿನ.ಕಾಮ್ ಜೊತೆ ಮಾತನಾಡಿದ ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ವಿಶ್ವಾಸ್ ವಿ. ಅಮೀನ್, ಮಲ್ಪೆ ಪರಿಸರದಲ್ಲಿ ದಶಕಗಳಿಂದ ಮೀನುಗಾರರು ಬಳಸಿಕೊಂಡಿರುವ ಸರಕಾರಿ ಮೀನುಗಾರಿಕಾ ಜಾಗವನ್ನು ದಕ್ಷಿಣ ಕನ್ನಡ ಮೀನುಗಾರಿಕಾ ಫೆಡರೇಶನ್‌ಗೆ ಮಂಜೂರು ಮಾಡಿದ ಸರ್ಕಾರದ ಇತ್ತೀಚಿನ ಆದೇಶದಿಂದ ಸ್ಥಳೀಯ ಮೀನುಗಾರರಲ್ಲಿ ಭಾರೀ ಆತಂಕ, ಅಸಮಾಧಾನ ಮತ್ತು ಆಕ್ರೋಶ ಉಂಟಾಗಿದೆ ಎಂದು ತಿಳಿಸಿದರು. ಈ ಬೆಳವಣಿಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಸಾರ್ವಜನಿಕರ ನಡುವೆ ಅನಗತ್ಯ ಉದ್ವಿಗ್ನತೆ ಮತ್ತು ವೈಮನಸ್ಯದ ಪರಿಸ್ಥಿತಿಯನ್ನೂ ಸೃಷ್ಟಿಸಿದೆ ಎಂದು ಅವರು ಹೇಳಿದರು.

ಸ್ಥಳೀಯ ನೈಜ ಮೀನುಗಾರರ ದೀರ್ಘಕಾಲದ ಬಳಸುವ ಹಕ್ಕನ್ನು ಪರಿಗಣಿಸದೇ ತೆಗೆದುಕೊಂಡ ಈ ತೀರ್ಮಾನವು ಭವಿಷ್ಯದಲ್ಲಿ ಕಾನೂನು-ಸುವ್ಯವಸ್ಥೆಗೆ ಧಕ್ಕೆಯಾಗಬಹುದು. ಮೀನುಗಾರರ ಜೀವನೋಪಾಯಕ್ಕೆ ಯಾವುದೇ ಬಗೆಯ ತೊಂದರೆ ಆಗದಂತೆ ಅವರ ಹಕ್ಕುಗಳನ್ನು ಕಾಪಾಡಬೇಕು ಎನ್ನುವ ವಿಶ್ವಾಸ ನಮ್ಮದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನವಿಯಲ್ಲಿ ವಿವಾದಾತ್ಮಕ ಆದೇಶವನ್ನು ತಕ್ಷಣವೇ ರದ್ದುಗೊಳಿಸುವ ಜೊತೆಗೆ, ಗಲಭೆಗೆ ಕಾರಣವಾಗುವ ಅಥವಾ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿರುವ ಅಂಶಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ ಮಲ್ಪೆ ಪ್ರದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕೆಂದು ಆಗ್ರಹಿಸಲಾಗಿದೆ.

WhatsApp Image 2025 11 24 at 7.18.16 PM 1

ಈ ಮನವಿಯ ಪ್ರತಿಯನ್ನು ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಮಂಜುನಾಥ್ ಭಂಡಾರಿ ಮತ್ತು ಮಾಜಿ ಸಂಸದ ಶ್ರೀ ಜಯಪ್ರಕಾಶ್ ಹೆಗ್ಡೆ ರವರಿಗೆ ಕೂಡ ತಲುಪಿಸಲಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ಮುರಳಿ ಶೆಟ್ಟಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮೀನುಗಾರ ಮುಖಂಡರು ಕೇಶವ ಕೋಟ್ಯಾನ್, ಕಾಪು ಬ್ಲಾಕ್ ಮೀನುಗಾರ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಸದಾನಂದ್ ಪೊಲಿಪು, ಗಿರೀಶ್ ಸುವರ್ಣ, ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಅಧ್ಯಕ್ಷ ರೋಷನ್ ಶೆಟ್ಟಿ, ಜಿಲ್ಲಾ ಮೀನುಗಾರರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳು ಸಂತೋಷ್ ಪಡುಬಿದ್ರಿ, ಉಪೇಂದ್ರ ಮೆಂಡನ್, ವಿಜಯ್ ಪುತ್ರನ್, ಸುರೇಶ್ ಹೆಬ್ರಿ, ಗಣೇಶ್ ದೊಡ್ಡನಗುಡ್ಡೆ, ಸೂರಜ್ ಕಲ್ಮಾಡಿ, ಅಬೂಬಕರ್, ನಸ್ರುಲ್ ಹೂಡೆ, ಪುಷ್ಪರಾಜ್, ರಕ್ಷಿತ್ ಸಾಲ್ಯಾನ್ ಮಲ್ಪೆ, ದಿನೇಶ್, ಸುಧಾಕರ್ ಕೆ, ದೀಪಕ್ ಪೂಜಾರಿ, ಸುಧಾಕರ್, ಆದಿತ್ಯ ಹಾಗೂ ಹಲವಾರು ಮೀನುಗಾರ ಮುಖಂಡರು ಉಪಸ್ಥಿತರಿದ್ದರು.

WhatsApp Image 2025 11 24 at 7.18.16 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...