ಮನರೇಗಾ ಕುರಿತು ಕೇಂದ್ರದ ನೀತಿಗೆ ಖಂಡನೆ, ಉಡುಪಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ, ಪ್ರತಿಭಟನೆ

Date:

ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹಿಂತೆಗೆದಿರುವ ಜನವಿರೋಧಿ ನೀತಿಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

1009748535

ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಪಾದಯಾತ್ರೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅವರು ಮನವಿಯನ್ನು ಸ್ವೀಕರಿಸಿದರು.

1009742669

“ಬಡವರ ಹಕ್ಕು ಕಸಿದುಕೊಳ್ಳುವ ಪ್ರಯತ್ನ”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ, ಬಡವರ ಪರವಾದ ಯೋಜನೆಗಳಲ್ಲಿ ಬದಲಾವಣೆ ಮಾಡುವ ಮೂಲಕ ಕೇಂದ್ರ ಸರ್ಕಾರ ಅವರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿದರು. ಮನರೇಗಾ ಯೋಜನೆಯನ್ನು ಉಳಿಸಲು ರೈತರ ಚಳವಳಿ ಮಾದರಿಯಲ್ಲಿ ರಾಜ್ಯಾದ್ಯಂತ ಹೋರಾಟ ಅಗತ್ಯವಿದೆ ಎಂದು ಹೇಳಿದರು.

1009742666

“ಗಾಂಧೀಜಿ ಹೆಸರನ್ನು ತೆಗೆದುಹಾಕುವುದು ಸರಿಯಲ್ಲ”

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಕೂಲಿಗಾಗಿ ಕಾಳು ನೀಡಿದ ಮನರೇಗಾ ಯೋಜನೆಯಿಂದ ನಿರುದ್ಯೋಗ ಸಮಸ್ಯೆ ಪರಿಹಾರವಾಗುತ್ತಿದ್ದ ವೇಳೆ ಅದರ ಸ್ವರೂಪ ಬದಲಾವಣೆ ಮಾಡಲಾಗುತ್ತಿದೆ ಎಂದು ಟೀಕಿಸಿದರು.
ಮಹಾತ್ಮ ಗಾಂಧೀಜಿ ಹೆಸರನ್ನು ಯೋಜನೆಯಿಂದ ತೆಗೆದುಹಾಕುವ ಕ್ರಮ ಸರಿಯಲ್ಲ. ವಿದೇಶಿಗರು ಸಹ ಭಾರತಕ್ಕೆ ಬಂದಾಗ ಗಾಂಧೀಜಿ ಸಮಾಧಿಗೆ ಭೇಟಿ ನೀಡುತ್ತಾರೆ. ಅಂತಹ ಮಹಾನ್ ನಾಯಕರ ಹೆಸರನ್ನು ಉಳಿಸಬೇಕು ಎಂದು ಹೇಳಿದರು.

1009748501

ಮಕ್ಕಳಿಗೆ ಶಿಕ್ಷಣ ಹಕ್ಕು, ಮಾಹಿತಿ ಹಕ್ಕು ಕಾಯ್ದೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಈಗಿನ ಸರ್ಕಾರ ತನ್ನ ತಪ್ಪುಗಳು ಹೊರಬಾರದಂತೆ ಕಾಯ್ದೆಗಳಲ್ಲಿ ತಿದ್ದುಪಡಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಕೇಂದ್ರ ಸರ್ಕಾರ ಹೆಚ್ಚುವರಿ ಅನುದಾನವನ್ನು ರಾಜ್ಯದ ಮೇಲೆ ಹೊರೆ ಮಾಡುವ ಯತ್ನ ಮಾಡುತ್ತಿದೆ ಎಂದರು.

ಪ್ರತಿಭಟನಾ ಸಭೆಯಲ್ಲಿ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಪ್ರಸಾದ್ ರಾಜ್ ಕಾಂಚನ್, ರಮೇಶ್ ಕಾಂಚನ್ ಸೇರಿದಂತೆ ಹಲವರು ಮಾತನಾಡಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಂ.ಎ. ಗಪೂರ್, ಕಿಶನ್ ಹೆಗ್ಡೆ ಕೇಳ್ಕೆಬೈಲ್, ಜ್ಯೋತಿ ಹೆಬ್ಬಾರ್, ವೆರೋನಿಕಾ ಕರ್ನೆಲಿಯೋ, ದಿನೇಶ್ ಪುತ್ರನ್, ಬಿ. ನರಸಿಂಹಮೂರ್ತಿ, ದಿನೇಶ್ ಹೆಗ್ಡೆ ಮಳವಳ್ಳಿ, ನಿರೇ ಕೃಷ್ಣ ಶೆಟ್ಟಿ, ರಾಘವೇಂದ್ರ ಶೆಟ್ಟಿ, ವೈ. ಸುಕುಮಾರ್, ಸಂತೋಷ್ ಕುಲಾಲ್, ಹರೀಶ್ ಕಿಣಿ, ಭಾಸ್ಕರ ರಾವ್ ಕಿದಿಯೂರ್, ಶಬ್ಬಿರ್ ಅಹ್ಮದ್, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಮೀನಾಕ್ಷಿ ಮಾಧವ ಬನ್ನಂಜೆ, ರೋಶನಿ ಒಲಿವರಾ, ಹರಿಪ್ರಸಾದ್ ರೈ, ಮಿಲಿಯಂ ಮಾರ್ಟೀಸ್, ಜಯಕುಮಾರ್, ಕಿಶೋರ್ ಕುಮಾರ್ ಎರ್ಮಾಳ್, ಮಹಾಬಲ ಕುಂದರ್, ಅಶೋಕ್ ಹೆಗ್ಡೆ, ಸುಮನ್ ಬೇಳಾರ್, ರವೀಂದ್ರ ಆಚಾರ್ಯ, ರಾಮದಾಸ್ ನಾಯಕ್, ಶರ್ಪುದ್ದೀನ್ ಶೇಖ್, ಉದ್ಯಾವರ ನಾಗೇಶ್ ಕುಮಾರ್, ಸುರೇಶ್ ಶೆಟ್ಟಿ ಬನ್ನಂಜೆ, ಸತೀಶ್ ಕೊಡವೂರು, ರೋಶನ್ ಶೆಟ್ಟಿ, ಇಸ್ಮಾಯಿಲ್ ಅತ್ರಾಡಿ, ಎಲ್ಲೂರು ಶಶಿಧರ ಶೆಟ್ಟಿ, ಕೇಶವ ಕೋಟ್ಯಾನ್, ಗಣೇಶ್ ನೆರ್ಗಿ, ಗಣೇಶ್ ರಾಜ್ ಸರಳಬೆಟ್ಟು ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...