ಉಡುಪಿ | ನ.23 ರಂದು ಉಡುಪಿ ಧರ್ಮಪ್ರಾಂತ್ಯದ ಪರಮ ಪ್ರಸಾದ ಮೆರವಣಿಗೆ, ಕ್ರಿಸ್ತರಾಜ ಮಹೋತ್ಸವ

Date:

ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯ ಮಟ್ಟದ ವಾರ್ಷಿಕ ಪರಮ ಪ್ರಸಾದದ ಮೆರವಣಿಗೆ ಹಾಗೂ ಕ್ರಿಸ್ತರಾಜರ ಮಹೋತ್ಸವ ನ.23ರಂದು ಭಾನುವಾರ ಸಂಜೆ 3ಕ್ಕೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ಆವರಣದಲ್ಲಿ ಜರುಗಲಿದೆ. ವಾರ್ಷಿಕ ಪರಮ ಪ್ರಸಾದ ಮೆರವಣಿಗೆಯ ದಿವ್ಯ ಬಲಿಪೂಜೆಯನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅರ್ಪಿಸಲಿದ್ದು, ಬಳಿಕ ಪರಮ ಪ್ರಸಾದವನ್ನು ಅಲಂಕರಿಸಲಾದ ತೆರದ ವಾಹನದಲ್ಲಿ ನಗರದಲ್ಲಿ ಮೆರವಣಿಗೆ ಮೂಲಕ ಕೊಂಡೊಯ್ದು ಪರಮ ಪ್ರಸಾದಕ್ಕೆ ಸಾರ್ವಜನಿಕ ಗೌರವ ಸಲ್ಲಿಸಲಾಗುವುದು.

ಧಾರ್ಮಿಕ ಕಾರ್ಯಕ್ರಮದಲ್ಲಿ ಯಾಜಕರು, ಧಾರ್ಮಿಕ ಭಗಿನಿಯರು ಹಾಗೂ ಸಾವಿರಾರು ಭಕ್ತಾದಿಗಳ ಭಾಗವಹಿಸುವಿಕೆ ಮಹೋತ್ಸವಕ್ಕೆ ಪವಿತ್ರತೆ ಹೆಚ್ಚಿಸಲಿದೆ. ನಂತರ ಧರ್ಮಾಧ್ಯಕ್ಷರ ಪ್ರೇರಣಾದಾಯಕ ಪ್ರವಚನ ನಡೆಯಲಿದೆ.
ಬಲಿಪೂಜೆಯ ನಂತರ ದಿವ್ಯ ಪರಮಪ್ರಸಾದ ಮೆರವಣಿಗೆ ಮಿಲಾಗ್ರಿಸ್ ಕಾಥೆಡ್ರಲ್ನಿಂದ ಮೌಂಟ್ ರೋಜರಿ ಚರ್ಚಿನ ಕಡೆಗೆ ಭಕ್ತಿಪೂರ್ವಕವಾಗಿ ಸಾಗಲಿದ್ದು. ಅಲ್ಲಿ ದೈವವಾಕ್ಯದ ಪ್ರವಚನ ಹಾಗೂ ದಿವ್ಯ ಪರಮಪ್ರಸಾದದ ಆಶೀರ್ವಚನ ನೆರವೇರುವುದು. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನ ಸಹಾಯಕ ಧರ್ಮಗುರು ವಂ|ಪ್ರದೀಪ್ ಕಾರ್ಡೋಜಾ ದೈವವಾಕ್ಯದ ಪ್ರವಚನ ನೆರವೇರಿಸಲಿದ್ದಾರೆ. ಭಜನೆ, ದೀಪಮಾಲೆ ಹಾಗೂ ಪ್ರಾರ್ಥನೆಯೊಂದಿಗೆ ಮೆರವಣಿಗೆಗೆ ವಿಶೇಷ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಘನತೆ ದೊರಕಲಿದೆ.

ಈ ಮಹೋತ್ಸವದ ಸಂದರ್ಭದಲ್ಲಿ ಭಾರತ ಹಾಗೂ ವಿಶ್ವದಾದ್ಯಂತ ಶಾಂತಿ, ಸಹೋದರತ್ವ ಮತ್ತು ಮಾನವೀಯ ಬೆಳವಣಿಗೆಗಾಗಿ ವಿಶೇಷ ಪ್ರಾರ್ಥನೆ ನೆರವೇರಿಸಲಿದ್ದಾರೆ ಎಂದು ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...