ಉಡುಪಿ | ಕೋವಿಡ್ ಪಾಸಿಟಿವ್, ಬೆಳ್ಳೆ ಗ್ರಾಮದ ವ್ಯಕ್ತಿ ಸಾವು

Date:

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಬೆಳ್ಳೆ ಗ್ರಾಮದ 65 ವರ್ಷದ ಪೀಟರ್ ಮಥಾಯಸ್ ಎಂಬುವವರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕೋವಿಡ್ ಪಾಸಿಟಿವ್ ದೃಢಪಟ್ಟಿರುವ ಹಿನ್ನಲೆಯಲ್ಲಿ ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಅವರು ಮಂಗಳವಾರ ಮೃತರ ಮನೆಗೆ ಭೇಟಿ ನೀಡಿದರು. ಇದೇ ವೇಳೆ ಪೀಟರ್ ಮಥಾಯಸ್ ಅವರ ಮನೆಯ ಕುಟುಂಬದ ಸದಸ್ಯರ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದರು. ಬಳಿಕ ಮಾತನಾಡಿ, ಪೀಟ‌ರ್ ಅವರ ಮನೆಯವರ ಆರೋಗ್ಯ ಪರೀಕ್ಷೆ ನಡೆಸಲಾಗಿದ್ದು, ಯಾರಲ್ಲೂ ಕೂಡಾ ಕೋವಿಡ್ ಲಕ್ಷಣಗಳು ಕಂಡು ಬಂದಿರುವುದಿಲ್ಲ. ಪೀಟರ್ ಮಥಾಯಸ್ ಅವರ ಮೃತ ದೇಹ ಇನ್ನೂ ಆಸ್ಪತ್ತೆಯಲ್ಲಿಯೇ ಇದೆ.

ಕೋವಿಡ್ SOP ಅನುಸರಿಸಿ ಅಂತ್ಯಸಂಸ್ಕಾರ ಕೈಗೊಳ್ಳಲಾಗುವುದು ಎಂದ ತಹಶಿಲ್ದಾರ ಹೇಳಿದ್ದಾರೆ. ಕಳೆದ ಕೆಲವು ದಿನಗಳಿಂದ ಪೀಟರ್ ಮಥಾಯಸ್ ಅವರು ಕರುಳಿನ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಮೇ.29 ರಂದು ಹೈಪರ್ ಟೆನ್ನನ್ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಿದಾಗ ಕೋರೋನ ದೃಢಪಟ್ಟಿರುತ್ತದೆ. ಜೂ.2ರಂದು ಅಪರಾಹ್ನ ಮೃತಪಟ್ಟಿರುತ್ತಾರೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶಿಲ್ದಾರ್ ಮತ್ತು ವೈದ್ಯರ ತಂಡ, ಆಶಾ ಕಾರ್ಯಕರ್ತೆಯರು ಮಂಗಳವಾರ ಮನೆಗೆ ಭೇಟಿ ನೀಡಿ ಊರಿನ ಜನರಿಗೆ ಕೊರೊನ ಮುನ್ನೆಚ್ಚರಿಗಳ ಬಗ್ಗೆ ಅರಿವು ಮೂಡಿಸಿದರು. ಕೊರೊನ SOP ಪಾಲಿಸುವಂತೆ ಸೂಚನೆ ನೀಡಿದರು.

ತಾಲ್ಲೂಕು ವೈದ್ಯಾಧಿಕಾರಿ ಡಾ.ವಾಸುದೇವ್, ಶಿರ್ವ ಮೆಡಿಕಲ್ ಆಫೀಸರ್ ಡಾ.ಸುಬ್ರಹ್ಮಣ್ಯ, ವೈದ್ಯೆ ಡಾ.ವೈಷ್ಣವಿ, ಆಶಾ ಕಾರ್ಯಕರ್ತೆ ಯಶೋದ. ರೆವಿನ್ಯೂ ಇನ್ಸ್‌ಪೆಕ್ಟರ್ ಇಜ್ಜಾರ್ ಸಾಬಿರ್, ಗ್ರಾಮಾಡಳಿತಾಧಿಕಾರಿ ಪ್ರದೀಪ್ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...