ಉಡುಪಿ | ವರ್ಷಗಳಾದರೂ ಇಎಸ್ಐ ಆಸ್ಪತ್ರೆ ಕಾಮಗಾರಿ ಆರಂಭಿಸಿಲ್ಲ : ಸುರೇಶ್ ಕಲ್ಲಾಗರ

Date:

ಬೆಳಗಾವಿ ಅಧಿವೇಶನದಲ್ಲಿ ಉಡುಪಿ ಜಿಲ್ಲೆಗೆ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಜಿಲ್ಲೆಯ ಶಾಸಕರು ಮುಂದಾಗಬೇಕು ಎಂದು ಸಿಪಿಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು. ಅವರು ಬ್ರಹ್ಮಾವರ ತಹಸಿಲ್ದಾರ್ ಕಚೇರಿ ಎದುರು ನಡೆದ ಪ್ರಚಾರಾಂದೋಲನ ಮತ್ತು ಪ್ರತಿಭಟನೆಯಲ್ಲಿ ಮಾತನಾಡಿದರು. ಬ್ರಹ್ಮಾವರ ಇಎಸ್ಐ ಆಸ್ಪತ್ರೆ ಮಂಜೂರಾಗಿ ವರ್ಷಗಳೇ ಕಳೆದರೂ ಕಾಮಗಾರಿ ಆರಂಭಿಸಲು ಮುತುವರ್ಜಿ ವಹಿಸದೇ ಇರುವುದರಿಂದ ಜಿಲ್ಲೆಯ ಸಾವಿರಾರು ಕಾರ್ಮಿಕರಿಗೆ ತೊಂದರೆಯಾಗಿದೆ ಎಂದು ಹೇಳಿದರು.

ಉಡುಪಿ ಸಿಪಿಎಂ ವಲಯ ಸಮಿತಿ ಕಾರ್ಯದರ್ಶಿ ಶಶಿಧರ್ ಗೊಲ್ಲ ಮಾತನಾಡಿ, ಬ್ರಹ್ಮಾವರ ತಾಲೂಕು ರಚನೆ ಆಗಿದ್ದರೂ ತಾಲೂಕು ಅಭಿವೃದ್ಧಿ ಕುಂಠಿತಗೊಂಡಿದೆ. ತಾಲೂಕು ಜನರ ಸಮಸ್ಯೆಗಳು ಬೆಳೆಯುತ್ತಿದೆ ತಾಲೂಕು ಆಡಳಿತ ಗಮನಹರಿಸಬೇಕು ಎಂದು ಆಗ್ರಹಿಸಿದರು.

WhatsApp Image 2025 12 09 at 10.33.05 PM 1

ಬೇಡಿಕೆಗಳು
1.ಬ್ರಹ್ಮಾವರ ಇಎಸ್ಐ ಆಸ್ಪತ್ರೆ ಕಾಮಗಾರಿಗಾಗಿ ನಿಧಾನಗತಿಯಲ್ಲಿದೆ ಇದನ್ನು ತ್ವರಿತವಾಗಿ ಕಾಮಗಾರಿ ಆರಂಭಿಸಬೇಕು.
2.ಬ್ರಹ್ಮಾವರ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ಸರಕಾರಿ ಆಸ್ಪತ್ರೆಯಾಗಿ ಮಾಡಬೇಕು.
3.ಬ್ರಹ್ಮಾವರದ ಮಟಪಾಡಿ, ನೀಲಾವರ ಮಾರ್ಗದಲ್ಲಿ ಸರಕಾರಿ ಬಸ್ಸು ಓಡಿಸಿ ಮಹಿಳೆಯರಿಗೆ, ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆ ಸಿಗುವಂತೆ ಮಾಡಬೇಕು.
4.ಬ್ರಹ್ಮಾವರದಲ್ಲಿ ಪ್ಲೇಓವರ್ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು.
5.ಹಂದಾಡಿ,ಮಟಪಾಡಿಗಳಲ್ಲಿ ಮಳೆಗಾಲದಲ್ಲಿ ಕ್ರಷಿಗಳು ಮಳೆಯಿಂದ ಹಾನಿಗೊಳಗಾಗುವುದನ್ನು ತಪ್ಪಿಸಲು ಸರಿಯಾದ ಚರಂಡಿಗಳನ್ನು ಸಂಕಗಳನ್ನು ಮಾಡಬೇಕು ಹಂದಾಡಿಯಲ್ಲಿ ಈಗಾಗಲೇ ಸಂಕ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದ್ದು ಮಳೆಗಾಲದಲ್ಲಿ ಬೇಸಾಯ ಮುಳುಗಡೆಯಿಂದ ನಾಶವಾಗುತ್ತಿದೆ ಇದನ್ನು ಸರಿಪಡಿಸಿ ಕಾಂಕ್ರೀಟ್ ರಸ್ತೆ ಎತ್ತರ ಮಾಡಿ ಮರುನಿರ್ಮಾಣ ಮಾಡಬೇಕು.
6.ಬ್ರಹ್ಮಾವರ ಬಸ್ ನಿಲ್ದಾಣ ವಿಸ್ತಾರವಾಗಿ ಸರಕಾರಿ ಜಾಗದಲ್ಲಿ ಮಾಡಲು ಕ್ರಮ ವಹಿಸಬೇಕು.
7.ಬ್ರಹ್ಮಾವರದಲ್ಲಿ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಮಂಜೂರು ಮಾಡಿ ಖಾಯಂ ನಿರೀಕ್ಷಕರನ್ನು ನೇಮಕ ಮಾಡಬೇಕು.
10.ಬ್ರಹ್ಮಾವರ ಕ್ರಷಿ ಕಾಲೇಜು ಮೇಲ್ದರ್ಜೆಗೇರಿಸಬೇಕು.
11.ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಪುನರ್ ಆರಂಭಿಸಿ ಸ್ಥಳೀಯರಿಗೆ ಉದ್ಯೋಗ ಕಲ್ಪಿಸಬೇಕು.
12.ಕೊಳಲಗಿರಿಯಲ್ಲಿ ಜನರ ರಕ್ಷಣೆಗೆ ಗ್ರಾಮಾಂತರ ಪೋಲೀಸ್ ಠಾಣೆ ಸ್ಥಾಪಿಸಬೇಕು.
13.ಬೆಂಗಳೂರಿಗೆ ಮತ್ತೊಂದು ರಾತ್ರಿ ರೈಲು ಓಡಿಸಬೇಕು.ಬಾರ್ಕೂರು ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್ ಫಾರ್ಮ್ ಅಭಿವೃದ್ಧಿ ಮಾಡಬೇಕು.
14.ಹಂದಾಡಿ,ಮಟಪಾಡಿ,ನೀಲಾವರ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಹಿಂದೂ ರುದ್ರ ಭೂಮಿ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 12 09 at 10.04.28 PM 2

ಪ್ರತಿಭಟನೆಯಲ್ಲಿ ಸಿಪಿಎಂ ಪಕ್ಷದ ಜಿಲ್ಲಾ ಸಮಿತಿ ಸದಸ್ಯ ಸುಭಾಶ್ಚಂದ್ರ ನಾಯಕ್, ಕವಿರಾಜ್ ಎಸ್ ಕಾಂಚನ್, ಬ್ರಹ್ಮಾವರ ಶಾಖಾ ಕಾರ್ಯದರ್ಶಿ ರಮೇಶ್ ಪೂಜಾರಿ,ಮುರುಳಿ,ನಳಿನಿ, ಅರವಿಂದ,ಶ್ರೀಧರ ಶೆಟ್ಟಿ,ಕ್ರಷ್ಣನಂದ ನಾಯಕ್,ಕರುಣಾಕರ, ವೆಂಕಟೇಶ್, ರಿಕ್ಷಾ ಚಾಲಕರ ಸಂಘದ ಗೌರವಅಧ್ಯಕ್ಷ ರಾಜು ಪೂಜಾರಿ ಇದ್ದರು. ಮನವಿಯನ್ನು ಬ್ರಹ್ಮಾವರ ತಹಸಿಲ್ದಾರ್ ಮೂಲಕ ಸರ್ಕಾರಕ್ಕೆ ನೀಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...