ಉಡುಪಿ | ದಲಿತ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಪೊಲೀಸರು ಅಮಾನತು

Date:

ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣದಲ್ಲಿ ಈವರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಇಬ್ಬರು ಪೊಲೀಸ್‌ ಅಧಿಕಾರಿಗಳನ್ನೂ ಅಮಾನತು ಮಾಡಲಾಗಿದೆ.

ಪ್ರಕರಣದಲ್ಲಿ ಸರಿಯಾಗಿ ಮಾಹಿತಿ ಸಂಗ್ರಹಿಸಿದೆ ನಿರ್ಲಕ್ಷಿಸಿದ ಆರೋಪದ ಮೇಲೆ ಮಲ್ಪೆ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಸುರೇಶ್ ಮತ್ತು ಕಾನ್‌ಸ್ಟೇಬಲ್ ನಾಗರಾಜ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಕೆ ಅರುಣ್ ಆದೇಶಿಸಿದ್ದಾರೆ.

ಪ್ರಕರಣದಲ್ಲಿ ಮಾರ್ಚ್ 19ರಂದು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೀಗ, ಲೀಲಾ ಮತ್ತು ಪಾರ್ವತಿ ಎಂಬ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಗುರುವಾರ ಸೂಚಿಸಿದೆ.

ಪ್ರಕರಣದ ಹಿನ್ನೆಲೆ;

ಮೀನು ಕದ್ದ ಆರೋಪದ ಮೇಲೆ ವಿಜಯನಗರ ಜಿಲ್ಲೆ ಮೂಲದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದ ವಿಡಿಯೋ ಮಾರ್ಚ್ 18ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಸಂಬಂಧ ಹಲ್ಲೆಗೊಳಗಾದ ಮಹಿಳೆ ಕಡೆಯವರು ಮಲ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 74, 115, 351,352, ಮತ್ತು ದಲಿತ ದೌರ್ಜನ್ಯ (ತಡೆ) ಕಾಯ್ದೆಯ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳಾದ ಲಕ್ಷ್ಮಿಬಾಯಿ, ಸುಂದರ್, ಶಿಲ್ಪಾ ಮತ್ತು ಇನ್ನೊಬ್ಬರನ್ನು ಮಾರ್ಚ್ 19ರಂದು ಬಂಧಿಸಿದ್ದರು.

ಈ ವರದಿ ಓದಿದ್ದೀರಾ?: ಮಹಾಡ್ ಸತ್ಯಾಗ್ರಹ | ಚವದಾರ್ ನೀರು ಮುಟ್ಟಿ, ಮನುಸ್ಮೃತಿ ಸುಟ್ಟ ಮೊದಲ ದಲಿತ ಬಂಡಾಯ

“ವಿಡಿಯೋ ಪರಿಶೀಲಿಸಿ, ಪ್ರಕರಣದಲ್ಲಿ ಇನ್ನು ಯಾರದ್ದಾದರು ಪಾತ್ರ ಇದ್ದರೆ ಆದಷ್ಟು ಬೇಗ ಅವರ ಮೇಲೆಯೂ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ಉಡುಪಿ ಎಸ್ಪಿ ಡಾ.ಕೆ ಅರುಣ್ ಹೇಳಿದ್ದರು.

ಮಾರ್ಚ್ 22ರಂದು ಪ್ರತಿಭಟನೆ;

“ದಲಿತ ಮಹಿಳೆ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ನಡೆಸಿಲ್ಲ. ಅದು ಕ್ಷಣಿಕ ಸಿಟ್ಟಿನಿಂದ ಆಗಿದ್ದು. ರಾಜಿ ಮೂಲಕ ವಿವಾದ ಇತ್ಯರ್ಥಪಡಿಸಿಕೊಂಡಿದ್ದರೂ, ಪ್ರಕರಣ ದಾಖಲಿಸಿ ಬಡ ಮೀನುಗಾರರನ್ನು ಬಂಧಿಸಲಾಗಿದೆ ಎಂದು ಮಲ್ಪೆ ಮೀನುಗಾರರ ಸಂಘ ಆಕ್ರೋಶ ವ್ಯಕ್ತಪಡಿಸಿದೆ. ಮಾರ್ಚ್ 22ರಂದು ಸ್ವಇಚ್ಚೆಯಿಂದ ಮೀನುಗಾರಿಗೆ ಸ್ಥಗಿತಗೊಳಿಸಿ ಬಂದರಿನಲ್ಲಿ ಎಲ್ಲಾ ಮೀನುಗಾರರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘ ತಿಳಿಸಿದೆ ಎಂದು ವರದಿಗಳು ಹೇಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...