ಉಡುಪಿ | ಬೀದಿನಾಯಿಗೆ ಅನ್ನ ಹಾಕಿದ್ದಕ್ಕೆ ದಲಿತ ಮಹಿಳೆ ಮೇಲೆ ಹಲ್ಲೆ; ದಸಂಸ ಖಂಡನೆ

Date:

ಬೀದಿ ನಾಯಿಗಳಿಗೆ ಅನ್ನ ಹಾಕಿದ ಕಾರಣಕ್ಕೆ ದಲಿತ ಮಹಿಳೆಗೆ ಪ್ರಬಲ ಜಾತಿಯ ಚಂದ್ರಕಾಂತ್‌ ಭಟ್ಟ ಎಂಬಾತ ಮಾರಾಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವ್ರವಾಗಿ ಖಂಡಿಸಿದೆ.

ಉಡುಪಿ ತಾಲೂಕಿನ ಇಂದ್ರಾಳಿ ರೈಲ್ವೇ ಸ್ಟೇಷನ್ ಪಕ್ಕದಲ್ಲಿ ವಾಸಿಸುತ್ತಿದ್ದ ದಲಿತ ಮಹಿಳೆ ಬೇಬಿ ಎನ್ನುವವರು ನಿತ್ಯವೂ ಬೀದಿ ನಾಯಿಗಳಿಗೆ ಅನ್ನ ಹಾಕುತ್ತಿದ್ದರು. ಬುಧವಾರವೂ ಕೂಡ ತನ್ನ ದೈನಂದಿನ ದಿನಚರಿಯಂತೆ ಬೀದಿ ನಾಯಿಗಳಿಗೆ ಅನ್ನಹಾಕಿ ಸಲಹಿ ತನ್ನ ಪ್ರಾಣಿ ಪ್ರೀತಿ ಔದಾರ್ಯ ಮೆರೆಯುತ್ತಿದ್ದ ಬೇಬಿಯವರು ಇಂದ್ರಾಳಿಯಲ್ಲಿ ಬೀದಿ ನಾಯಿಗಳಿಗೆ ಅನ್ನ ಹಾಕುತ್ತಿದ್ದ ಸಂದರ್ಭದಲ್ಲಿ ಚಂದ್ರಕಾಂತ ಭಟ್ಟ ಎನ್ನುವವರು ರೀಪಿನಿಂದ ತಲೆಗೆ ಹೊಡೆದಿದ್ದು, ಮಾರಾಣಾಂತಿಕ ಹಲ್ಲೆ ನಡೆಸಿದ್ದಾರೆ. ಕೊಲೆ ಮಾಡುವ ಉದ್ದೇಶದಿಂದಲೇ ಹೊಡೆದಿದ್ದು, ಬೇಬಿಯವರ ತಲೆಗೆ ತೀವ್ರವಾದ ಪೆಟ್ಟಾಗಿದೆ. ಅಜ್ಜರಕಾಡು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುದ್ಧಿವಂತರ ಜಿಲ್ಲೆ ಎಂದು ಕರೆಯಲ್ಪಡುವ ಉಡುಪಿ ಜಿಲ್ಲೆಯಲ್ಲೂ ಮೇಲ್ವರ್ಗದವರ ಊಳಿಗಮಾನ್ಯ ಪದ್ದತಿಯ ಮನಸ್ಥಿತಿ ಹಾಗೇ ಮುಂದುವರಿದಿದೆ ಎನ್ನುವುದು ಮತ್ತೊಮ್ಮೆ ಸಾಬಿತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ಸುದ್ಧಿ ತಿಳಿದ ಕೂಡಲೇ ದಸಂಸ‌ ಜಿಲ್ಲಾ ಪ್ರಧಾನ ಸಂಚಾಲಕ ಸುಂದರ್ ಮಾಸ್ತರ್ ನೇತ್ರತ್ವದಲ್ಲಿ ದಸಂ‌ಸ ನಿಯೋಗ ಆಸ್ಪತ್ರೆಗೆ ಭೇಟಿ ನೀಡಿದ್ದು‌, ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿ ಘಟನೆಯ ಮಾಹಿತಿ ಪಡೆದರು.

ದಲಿತ ಸಂಘರ್ಷ ಸಮಿತಿಯು ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದು, “ಆರೋಪಿಗೆ ಯಾವ ಕಾರಣಕ್ಕೂ ಜಾಮೀನು ಸಿಗಬಾರದು. ಮೇಲ್ವರ್ಗದವರ ಗೂಂಡಾಗಿರಿ ದಲಿತರ ಮೇಲೆ ನಿರಂತರವಾಗಿ ನಡೆಯುತ್ತಿದೆ. ಈಗ ಉಡುಪಿಯ ಪೊಲೀಸ್ ವ್ಯವಸ್ಥೆ ತೀರಾ ಹದಗೆಟ್ಟಿದ್ದು, ದಲಿತರಿಗೆ ರಕ್ಷಣೆಯೇ ಇಲ್ಲವಾಗಿದೆ. ಆರೋಪಿಗೆ ಸರಿಯಾದ ಶಿಕ್ಷೆ ಆಗಬೇಕು” ಎಂದು ಆಗ್ರಹಿಸಿದರು.

“ತಲೆಗೆ ಹೊಡೆದು ಕೊಲೆಗೆ ಪ್ರಯತ್ನಿಸಿದ ಆರೋಪಿಗೆ ಸಣ್ಣ ಪುಟ್ಟ ಕೇಸುಗಳನ್ನು ಹಾಕಿ ಆತನಿಗೆ ಜಾಮೀನು ಸಿಗುವಂತೆ ಪ್ರಯತ್ನಿಸಿದರೆ ದಸಂಸ ದೊಡ್ಡ ಪ್ರತಿಭಟನೆಗೆ ಕರೆ ಕೊಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಅನೈತಿಕ ಪೊಲೀಸ್‌ಗಿರಿ; ಮುಸ್ಲಿಂ ಯುವಕನಿಗೆ ಥಳಿಸಿದ ಹಿಂದೂ ಯುವಕರ ಗುಂಪು

ದಸಂಸ ಪದಾಧಿಕಾರಿಗಳಾದ ಸುಂದರ್ ಮಾಸ್ತರ್, ಮಂಜುನಾಥ ಗಿಳಿಯಾರು, ಶ್ಯಾಮರಾಜ್ ಬಿರ್ತಿ, ವಾಸುದೇವ ಮುದೂರು, ಭಾಸ್ಕರ್ ಮಾಸ್ತರ್, ಪರಮೇಶ್ವರ ಉಪ್ಪೂರು, ಶ್ಯಾಮಸುಂದರ್ ತೆಕ್ಕಟ್ಟೆ, ಶ್ರೀಪತಿ ಕುಂಜಿಬೆಟ್ಟು, ಶ್ರೀಧರ್, ರಾಜು ಬೆಟ್ಟಿನಮನೆ, ಮಂಜುನಾಥ್ ಬಾಳ್ಕದ್ರು, ಉಡುಪಿ ನಗರ ಸಭಾ ಸದಸ್ಯ ರಾಜು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...