ಉಡುಪಿ | ಸಂವಿಧಾನದ ಆಶಯಗಳಿಗೆ ಬದ್ದರಾಗಿದ್ದ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ – ದಸಂಸ

Date:

ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಸಮಿತಿ ನಿಯೋಗ ವರ್ಗಾವಣೆಗೊಂಡ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು. ಇದೇ ಸಂದರ್ಭದಲ್ಲಿ ನೂತನ ಜಿಲ್ಲಾಧಿಕಾರಿ ಸ್ವರೂಪಾ ಅವರನ್ನು ಸ್ವಾಗತಿಸಲಾಯಿತು.

ಉಡುಪಿ ಜಿಲ್ಲಾಡಳಿತದಲ್ಲಿ ಜನಸಾಮಾನ್ಯರ ಧ್ವನಿಯಾಗಿ ಸಂವಿಧಾನದ ಮೂಲ ಆಶಯಗಳನ್ನು ಎತ್ತಿಹಿಡಿದು ದಕ್ಷ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಡಾ. ವಿದ್ಯಾಕುಮಾರಿಯವರು ಇದೀಗ ಜಿಲ್ಲೆಯಿಂದ ವರ್ಗಾವಣೆ ಗೊಂಡಿರುತ್ತಾರೆ ಇವರ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಮಾಡಿದ್ದರು ಸಮಾನತೆ ಸಹೋದರತೆಯ ಬ್ರಾತೃತ್ವಕ್ಕೆ ಹೆಚ್ಚಿನ ಒತ್ತು ನೀಡಿ ಜಿಲ್ಲೆಯಲ್ಲಿ ಸಾಮಾಜಿಕ ಮತಿಯ ಸಾಮರಸ್ಯವನ್ನು ಕಾಪಾಡುವಲ್ಲಿ ಶ್ರಮಿಸಿದ್ದರು ಜಿಲ್ಲೆಯ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಂವಿಧಾನ ಜಾತ ಕಾರ್ಯಕ್ರಮು ಅಭೂತಪೂರ್ವ ಯಶಸ್ಸನ್ನು ಕಾಣುವುದರೊಂದಿಗೆ ನವೆಂಬರ್ 26 ರಂದು ಸಂವಿಧಾನ ಅರ್ಪಣ ದಿನದ ಅಂಗವಾಗಿ ಶಿರೂರು ಟೋಲ್ ಗೇಟ್ ನಿಂದ ಹೆಜಮಾಡಿವರೆಗೆ ಏಕಕಾಲದಲ್ಲಿ ಹಮ್ಮಿಕೊಂಡ ಮಾನವ ಸರಪಳಿ ಬಹಳ ಅರ್ಥ ಪೂರ್ಣವಾಗುವಲ್ಲಿ ಜಿಲ್ಲಾಡಳಿತದ ಜವಾಬ್ದಾರಿ ಮಹತ್ತರವಾಗಿತ್ತು.

14 ರ ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಹಬ್ಬದ ರೀತಿಯಲ್ಲಿ ಆಚರಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಮ್ಮಿಕೊಂಡ ಜೈ ಭೀಮ್ ರ‌್ಯಾಲಿ ಜಿಲ್ಲಾಧಿಕಾರಿಗಳ ಕಛೇರಿಯಿಂದಲೇ ಪ್ರಾರಂಭಿಸುವಂತೆ ಹೇಳಿ ಸಮಾಜದ ಶೋಷಿತರ ಧ್ವನಿಯಾಗಿ ನಿಲ್ಲುವಂತ ಒಬ್ಬ ಜನಸಾಮಾನ್ಯರ ನೆಚ್ಚಿನ ಜಿಲ್ಲಾಧಿಕಾರಿಯಾಗಿದ್ದರು ಈ ಹಿನ್ನೆಲೆಯಲ್ಲಿ ಜನಪರ ಕಾರ್ಯಕ್ರಮಗಳನ್ನು ನಿಯೋಗವು ನೆನಸಿಕೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಯೋಗದಲ್ಲಿ ಪ್ರಗತಿಪರ ಚಿಂತಕರು ಜನಪರ ಹೋರಾಟಗಾರರು ಜಯನ್ ಮಲ್ಪೆ, ಜಿಲ್ಲಾ ದೌರ್ಜನ್ಯ ತಡೆ ಜಾಗೃತಿ ಉಸ್ತುವಾರಿ ಸಮಿತಿ ಸದಸ್ಯರಾದ ವಾಸುದೇವ ಮುದೂರು, ಲೋಕೋಪಯೋಗಿ ಇಲಾಖೆಯ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷರು ಪರಮೇಶ್ವರ ಉಪ್ಪೂರು, ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷರು ಬಾಲಗಂಗಾಧರ ಗೌಡ, ಅಂಬೇಡ್ಕರ್ ಯುವ ಸೇನೆಯ ಜಿಲ್ಲಾಧ್ಯಕ್ಷರು ಗಣೇಶ್ ನೆರ್ಗಿ, ಶಿವಕುಮಾರ್ ಪರ್ಕಳ, ಹರೀಶ್ ಸಾಲ್ಯನ್, ಕಮಲಾಕ್ಷ, ನಾರಾಯಣ ಪರ್ಕಳ, ಭಗವಾನ್ ದಾಸ್, ಮೋಹನ್ ದಾಸ್, ರವಿರಾಜ್ ಉಪಸ್ಥಿತಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...