ಉಡುಪಿ | ಕಾಂಗ್ರೆಸ್ ಸರ್ಕಾರದಿಂದ ದಲಿತರ ನಿಧಿ ದುರ್ಬಳಕೆ: ದಸಂಸ ವತಿಯಿಂದ ರಾಜ್ಯಪಾಲರಿಗೆ ದೂರು

Date:

ಕಾಂಗ್ರೆಸ್ ಸರ್ಕಾರವು ದಲಿತರ ನಿಧಿ ದುರ್ಬಳಕೆ ಮಾಡಿಕೊಂಡಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕದ ಉಡುಪಿ ಘಟಕ ಆರೋಪಿಸಿದೆ. ಈ ಬಗ್ಗೆ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ರಾಜ್ಯ ಸಂಘಟನಾ ಸಂಚಾಲಕರಾದ ಶೇಖರ್ ಹಾವಂಜೆ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ನಿಯೋಗವು, ಕಾಂಗ್ರೆಸ್ ಸರಕಾರ ದಲಿತರಿಗೆ ವಂಚನೆ ಮಾಡಿರುವುದನ್ನು ಉನ್ನತ ಮಟ್ಟದ ತನಿಖೆ ನಡೆಸುವಂತೆ, ಹಾಗೂ ರಾಜ್ಯದಲ್ಲಿ ಬೌದ್ಧ ಧರ್ಮದ ಅಭಿವೃದ್ಧಿಗಾಗಿ ನಿಗಮವನ್ನು ಸ್ಥಾಪಿಸಬೇಕು. ಬೌದ್ಧ ಧರ್ಮಕ್ಕೆ ಮತಾಂತರಗೊಂಡವರಿಗೆ ನಮೂನೆ 1ರ ಸಂವಿಧಾನ ಪ್ರಕಾರ ಜಾತಿ ಪ್ರಮಾಣ ಪತ್ರದಲ್ಲಿ ಧಮ್ಮದ ಉಲ್ಲೇಖ ಇರುವಂತೆ ಈ ಕೂಡಲೇ ಮಾರ್ಪಡು ಮಾಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯದ್ಯ ಎಲ್ಲಾ ಜಿಲ್ಲೆಗಳಲ್ಲಿ ಏಕ ಕಾಲದಲ್ಲಿ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎಸ್.ಸಿ/ಎಸ್.ಟಿ ಸಮುದಾಯಗಳಿಗೆ ವಂಚಿಸುತ್ತಾ ಬಂದಿದೆ. ಕಳೆದ ಒಂದು ವರ್ಷದಿಂದ ಎಸ್.ಸಿ/ಎಸ್.ಟಿ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಸುಮಾರು 25 ಸಾವಿರ ಕೋಟಿ ಹಣವನ್ನು ದುರುಪಯೋಗಪಡಿಸಿಕೊಂಡಿದೆ. ಇದರಿಂದ ಈ ಸಮುದಾಯಗಳಿಗೆ ಸರ್ಕಾರ ಅನ್ಯಾಯ ಮಾಡಿದೆ. ಇದೇ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಕೋಟ್ಯಾಂತರ ರೂಪಾಯಿಗಳ ಹಣವನ್ನು ರಾಜಕಾರಣಿಗಳು ಮತ್ತು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದು ಸರ್ಕಾರದ ವೈಫಲ್ಯವಾಗಿದೆ. ಸರ್ಕಾರವೇ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಡಾ ಹಗರಣದ ಬಗ್ಗೆ ರಾಜ್ಯ ಸರ್ಕಾರ ನಡೆಸುವ ತನಿಖೆಯಿಂದ ನ್ಯಾಯ ಸಿಗುವುದಿಲ್ಲ ಹಾಗೂ ಭ್ರಷ್ಟಾಚಾರದಿಂದ ಮುಖ್ಯಮಂತ್ರಿಗಳು ಮುಕ್ತರಾಗುವ ಸಂಭವ ಇಲ್ಲದಾಗಿದೆ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕೊಪ್ಪಳ | ಮಹಾತ್ಮ ಗಾಂಧೀಜಿ ಅವರ ಆದರ್ಶಗಳು ಎಲ್ಲರೂ ಪಾಲಿಸಬೇಕು: ಮಕಂದರ್ ಖಾನ್

ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಸದಾಶಿವ ಶೆಟ್ಟಿ ಹೇರೂರು, ದಲಿತ ಸಂಘರ್ಷ ಸಮಿತಿ ಭೀಮವಾದದ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕರಾದ ಗೋಪಾಲ್ ಶಿವಪುರ, ರಮೇಶ್ ಮಾಬಿಯಾನ್, ಪ್ರಭಾಕರ್ ಅಮ್ಮುಂಜೆ, ಬೌದ್ಧ ಧಮ್ಮಾಚಾರಿ, ಶಂಭು ಸುವರ್ಣ ಸದಸ್ಯರಾದ ಅನಿಲ್ ಫೆರ್ನಾಂಡಿಸ್, ಸುಜಾತ ಎಸ್ ಹಾವಂಜೆ, ಸುನೀತಾ ಒಳಗುಡ್ಡೆ, ನಾರಾಯಣ್ ಒಳಗುಡ್ಡೆ, ಶೇಖರ್ ಮೂಡುಕುಡೂರು, ಕ ದ ಸಂ ಸ ಭೀಮವಾದದ ಉಡುಪಿ ಜಿಲ್ಲಾ ಖಜಾಂಚಿ ಪೃಥ್ವಿ ಒಳಗುಡ್ಡೆ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...