ಉಡುಪಿ | ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

Date:

ಉಡುಪಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರ ಜೊತೆಗೆ ಅವರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಮಲ್ಪೆ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಕುರಿತು ನಿರ್ಮಿತಿ ಕೇಂದ್ರವು ಯೋಜನಾ ಕಾಮಗಾರಿಗಳ ನೀಲನಕ್ಷೆ ಹಾಗೂ ಅಂದಾಜು ಪಟ್ಟಿಯನ್ನು ಪ್ರಸ್ತುತ ಪಡಿಸಿದ್ದು, ಮಲ್ಪೆಯ ಹಾಲಿ ಇರುವ ಬೀಚ್, ಬೀಚ್ ಉತ್ತರ ಭಾಗದಲ್ಲಿರುವ ಜಾಗವನ್ನು ಸ್ವಾಧೀನಪಡಿಸಿಕೊಂಡು ವಲಯವಾರು ಅಭಿವೃದ್ಧಿ ಪಡಿಸಲು ಒತ್ತು ನೀಡಲಾಗಿದೆ ಹಾಗೂ ಸೈಂಟ್ ಮೇರೀಸ್ ದ್ವೀಪದಲ್ಲಿಯೂ ಅಭಿವೃದ್ಧಿ ಪಡಿಸಲು ಇದರಲ್ಲಿ ಕಲ್ಪಿಸಲಾಗಿದೆ. ಮುಂಬರುವ ದಿನಗಳಲ್ಲಿ ಅನುದಾನದ ಲಭ್ಯತೆಯನ್ನು ಆಧರಿಸಿ ಇಲ್ಲಿನ ಅಭಿವೃದ್ಧಿ ಕಾಮಗಾರಿಗಳನ್ನು ಸುರಕ್ಷತೆಗೆ ಒತ್ತು ನೀಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಸಿಗರು ಬೋಟ್ ಗಳಲ್ಲಿ ಸಂಚರಿಸುವಾಗ ಲೈಫ್ ಜಾಕೆಟ್ ಅನ್ನು ತಪ್ಪದೆ ಧರಿಸಿ ಪ್ರಯಾಣಿಸಬೇಕು. ತಪ್ಪಿದ್ದಲ್ಲಿ ಅಂತಹವರ ಮೇಲೆ ದಂಡ ವಿಧಿಸಲಾಗುವುದು ಎಂದ ಅವರು, ಲೈಫ್ ಜಾಕೆಟ್ ಧರಿಸಿದರೆ ಮಾತ್ರ ಬೋಟ್‌ಗಳ ಮಾಲೀಕರು ಬೋಟ್ ಚಲಾಯಿಸಬೇಕು. ಈ ಬಗ್ಗೆ ಕರಾವಳಿ ಕಾವಲು ಪಡೆಯವರು ಆಗಿಂದಾಗ್ಗೆ ಪರಿಶೀಲಿಸಬೇಕು ಎಂದರು.

ಜಿಲ್ಲೆಯಲ್ಲಿರುವ ಕಡಲ ತೀರಗಳಾದ ಮಲ್ಪೆ ಬೀಚ್, ಸೈಂಟ್ ಮೇರಿಸ್ ದ್ವೀಪ ಪ್ರದೇಶದಲ್ಲಿ ಪ್ರವಾಸಿಗರ ರಕ್ಷಣೆಯ ಉದೇಶಕ್ಕಾಗಿ ವಾಚ್ ಟವರ್ ನಿರ್ಮಾಣ, ಹೊರ್ಡಿಂಗ್ ಬೋರ್ಡ್ ಅಳವಡಿಕೆ, ಮಾಹಿತಿ ಫಲಕ, ಸಾರ್ವಜನಿಕ ಸೂಚನಾ ಫಲಕ, ಎಚ್ಚರಿಕೆಯ ಫಲಕ ಸೇರಿದಂತೆ ಇನ್ನಿತರ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳುವ ಬಗ್ಗೆ ಸೂಚನಾ ಫಲಕ ಅಳವಡಿಸಬೇಕೆಂದರು.

1009478724

ಉಡುಪಿ ತಾಲೂಕಿನ ಕದಿಕೆ ಗ್ರಾಮದ ಕಡಲ ತೀರದ ನಿರ್ವಹಣೆ, ಸಮಗ್ರ ಅಭಿವೃದ್ಧಿ, ಜಲ ಸಾಹಸ ಚಟುವಟಿಕೆಗಳು ಹಾಗೂ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರಯಾಣಿಕರ ದೋಣಿ ಸೇವೆಯನ್ನು ಟೆಂಡರ್ ಕರೆದು, ಶೇಕಡವಾರು ಹಂಚಿಕೆ ಆಧಾರದಲ್ಲಿ ನೀಡಬೇಕು ಎಂದ ಅವರು, ಮಲ್ಪೆ ಬೀಚ್ ಹಾಗೂ ಸೀವಾಕ್ ಪ್ರದೇಶಗಳಲ್ಲಿ ಅಂಗಡಿಗಳನ್ನು ಹಾಗೂ ಇಲ್ಲಿನ ಸ್ವಚ್ಛತೆ ಮತ್ತು ನಿರ್ವಹಣೆಯನ್ನು ಟೆಂಡರ್ ಪ್ರಕ್ರಿಯೆಯನ್ನು ಕರೆದು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೀಚ್‌ಗಳಲ್ಲಿ ಜಲ ಕ್ರೀಡೆ ಸೇರಿದಂತೆ ಮತ್ತಿತರ ಜಲ ಸಾಹಸ ಕ್ರೀಡೆಗಳನ್ನು ಜಿಲ್ಲೆಯಲ್ಲಿ ಯಾವ ಬೀಚ್ ಗಳಲ್ಲಿ ಆಯೋಜಿಸುವುದು ಸೂಕ್ತ ಎಂಬ ವರದಿಯನ್ನು ನೀಡಲು ಕಳೆದ ವರ್ಷ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವಾಟರ್ ಸ್ಪೋರ್ಟ್ಸ್ಗೆ ವರದಿ ನೀಡಲು ಸೂಚಿಸಲಾಗಿತ್ತು, ಆದರೆ ಈ ವರೆಗೆ ವರದಿ ನೀಡಿರುವುದಿಲ್ಲ, ಅದನ್ನು ಕೂಡಲೇ ಪಡೆಯಬೇಕು ಎಂದ ಅವರು, ಪ್ರವಾಸಿಗರ ಜೀವ ರಕ್ಷಣೆಗೆ ಅಗತ್ಯವಿರುವ ಜೆಟ್ ಸೀ ಬೈಕ್ ಅನ್ನು ಸರಬರಾಜು ಮಾಡಲು ಕೆ. ಆರ್. ಡಿ. ಎಲ್ ಮುಖಾಂತರ ಟೆಂಡರ್ ಕರೆಯಲಾಗಿತ್ತು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಶಾಸಕ ಯಶ್ ಪಾಲ್ ಎ ಸುವರ್ಣ ಮಾತನಾಡಿ, ಮಲ್ಪೆ ಬೀಚ್‌ನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಸ್ಥಳೀಯ ಸಂಪ್ರದಾಯಿಕ ಮೀನುಗಾರರು, ಮೀನುಗರಿಕೆ ಚಟುವಟಿಕೆಗಳನ್ನು ಕೈಗೊಳ್ಳಲು ತೊಂದರೆಯಾಗದಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸಭೆಯ ಗಮನಕ್ಕೆ ತಂದರು.

ಜಿಲ್ಲೆಯ ಪ್ರವಾಸಿ ತಾಣಗಳನ್ನು ಸವಿಯಲು ಆಗಮಿಸುವ ಪ್ರವಾಸಿಗರಿಗೆ ಕಡಲ ತೀರದ ಮಾಹಿತಿ ಕೊರತೆಯಿಂದಾಗಿ ಕೆಲವು ಅವಘಡಗಳು ಉಂಟಾಗುತ್ತಿವೆ, ಹೀಗಾಗದಂತೆ ಎಚ್ಚರಿಕೆಯ ಫಲಕಗಳನ್ನು ಅಳವಡಿಸುವುದರ ಜೊತೆಗೆ ಮತ್ತಿತರ ಕ್ರಮಗಳನ್ನು ಕೈಗೊಳ್ಳಬೇಕೆಂದರು.

ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿ, ಕುಂದಾಪುರದ ಕೋಡಿ ಕಡಲ ಕಿನಾರೆಯಲ್ಲಿರುವ ಸೀ ವಾಕ್‌ನಲ್ಲಿ ಪ್ರವಾಸಿಗರಿಗೆ ಅನುಕೂಲವಾಗುವಂತೆ ಉದ್ಯಾನವನ ನಿರ್ಮಾಣ, ಸಮುದ್ರ ವೀಕ್ಷಣೆಗೆ ಕುಳಿತುಕೊಳ್ಳಲು ಬೆಂಚ್ ಸೇರಿದಂತೆ ಮತ್ತಿತರ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಬೀಚ್ ಹಾಗೂ ದ್ವೀಪಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪೂರ್ಣ ಪ್ರಮಾಣದಲ್ಲಿ ಸರಕಾರದ ವತಿಯಿಂದ ಕೈಗೊಳ್ಳಲು ಸಾಧ್ಯ ವಾಗದೆ ಇದ್ದಲ್ಲಿ ಖಾಸಗಿ ಸಹಭಾಗೀತ್ವದಲ್ಲಿ ಅಭಿವೃದ್ಧಿ ಪಡಿಸಲು ಆಲೋಚಿಸುವುದು ಸೂಕ್ತ ಸಲಹೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕಿ ವಿಂದ್ಯಾ ಎನ್. ಎಮ್, ಟೂರಿಸಮ್ ಅಶೋಸಿಯೇಷನ್ ನ ಮನೋಹರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...