ಉಡುಪಿ | ಇಂದ್ರಾಳಿ ಮೇಲ್ಸೇತುವೆ ಅಂತಿಮ ಘಟ್ಟದ ಕಾಮಗಾರಿ ತ್ವರಿತವಾಗಿ ಕೈಗೊಳ್ಳಿ – ಡಿಸಿ ಡಾ. ಕೆ ವಿದ್ಯಾಕುಮಾರಿ

Date:

ಇಂದ್ರಾಳಿ ರೈಲ್ವೇ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಮಾತನಾಡುತ್ತಿದ್ದರು.

ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ವತಿಯಿಂದ ವೆಲ್ಡಿಂಗ್ ಕಾರ್ಯದ ಗುಣಮಟ್ಟವನ್ನು ಸ್ಥಳೀಯವಾಗಿ ಇನ್ಸ್ಪೆಕ್ಷನ್ ನಡೆಸಲಾಗಿದೆ. ಅಂತಿಮವಾಗಿ ರೈಲ್ವೇ ಡಿಸೈನ್ ಮತ್ತು ಸೇಫ್ಟಿ ಆರ್ಗನೈಸೇಷನ್ ಲಕ್ನೋ ಅವರಿಂದ ತ್ವರಿತವಾಗಿ ಕೈಗೊಳ್ಳಬೇಕು ಎಂದರು.
ರೈಲ್ವೇ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ಅನ್ನು ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುವುದರೊಂದಿಗೆ ರೈಲ್ವೇ ಇಲಾಖೆಯ ವತಿಯಿಂದ ನಿಗಧಿಪಡಿಸುವ ದಿನಾಂಕದಂದು ರೈಲ್ವೇ ಸಂಚಾರವನ್ನು ಸ್ಥಗಿತಗೊಳಿಸಿ, ಅಳವಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದರು.

1004897388 1

ಗರ್ಡಲ್ಸ್ ಅನ್ನು ರೈಲ್ವೇ ಮೇಲ್ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಬೃಹತ್ ಕ್ರೈನ್ ಗಳು, ಜಾಕ್‌ಗಳು, ರೋಲರ್‌ಗಳು, ರೇಲ್ಸ್ಗಳು ಸೇರಿದಂತೆ ಮತ್ತಿತರ ಅವಶ್ಯವಿರುವ ಸಾಧನಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದ ಅವರು, ಈ ಕಾಮಗಾರಿಯ ಸಂದರ್ಭದಲ್ಲಿ ಸುರಕ್ಷಿತವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಸಹ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಪಾಲ ಕೃಷ್ಣ, ಲೋಕೋಪಯೋಗಿ ಇಲಾಖೆಯ ಎ.ಇ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...