ಉಡುಪಿ | ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ

Date:

ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಅಂತಹ ವಾಹನಗಳಿಗೆ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸಂಚರಿಸುತ್ತಿರುವ ಕೆಲವು ಬಸ್‌ಗಳು ಬಸ್ ನಿಲ್ದಾಣವನ್ನು ಹೊರತುಪಡಿಸಿ, ಎಲ್ಲೆಂದರಲ್ಲಿ ನಿಲುಗಡೆ ಮಾಡುತ್ತಿದ್ದಾರೆ. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ಈ ಹಿಂದೆ ಈ ಬಗ್ಗೆ ಆರ್.ಟಿ.ಓ ಅಧಿಕಾರಿಗಳಿಗೆ ಕ್ರಮ ವಹಿಸಲು ಸೂಚಿಸಲಾಗಿತ್ತು. ಆದರೂ ಸುಧಾರಣೆ ಕಂಡುಬಂದಿಲ್ಲ. ಪ್ರತೀ ಮಾಹೆಯೂ ನಿಯಮವನ್ನು ಉಲ್ಲಂಘಿಸಿದಂತಹ ಬಸ್‌ಗಳ ಮೇಲೆ ಪ್ರಕರಣ ದಾಖಲಿಸಬೇಕು ಎಂದ ಅವರು, ಪ್ರತಿಯೊಂದು ಬಸ್‌ಗಳಿಗೂ ಸಹ ಡೋರ್‌ಗಳನ್ನು ಅಳವಡಿಸಬೇಕು. ಅವರಿಗೆ ಡೋರ್ ಅಳವಡಿಸಲು ಒಂದು ನಿಗಧಿತ ಸಮಯಾವಕಾಶ ಕೊಟ್ಟು, ಅಳವಡಿಸದೇ ಇರುವ ವಾಹನಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆರ್.ಟಿ.ಓ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹಹಜ

ಜಿಲ್ಲೆಯಲ್ಲಿ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯವಿರುವ ಸಿದ್ಧ ಕಾಂಕ್ರೀಟ್ ಮಿಶ್ರಣವನ್ನು ಸಾಗಿಸುವ ವಾಹನಗಳು ಓವರ್ ಲೋಡ್ ನಿಂದಾಗಿ ಕಾಂಕ್ರೀಟ್ ಮಿಶ್ರಣವು ರಸ್ತೆಯ ಮೇಲೆ ಎಲ್ಲೆಂದರಲ್ಲಿ ಬಿದ್ದು, ಉಬ್ಬುಗಳು ಉಂಟಾಗಿ ದ್ವಿಚಕ್ರ ವಾಹನಗಳು ಸೇರಿದಂತೆ ಮತ್ತಿತರ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಆಗುವುದರ ಜೊತೆಗೆ ಅಪಘಾತಗಳು ಸಂಭವಿಸುತ್ತಿವೆ. ಈ ಸಂಬಂಧ ದೂರುಗಳು ಸಹ ಕೇಳಿ ಬರುತ್ತಿವೆ. ಕೂಡಲೇ ಆರ್.ಟಿ.ಓ ಅಧಿಕಾರಿಗಳು ಕ್ರಮವಹಿಸಿ, ಅಂತಹ ವಾಹನಗಳ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗಾಗಲೇ ಜಿಲ್ಲೆಯ ಹೆದ್ದಾರಿಗಳಲ್ಲಿ ಅಪಘಾತ ಸಂಭವಿಸುವ 18 ಬ್ಲಾಕ್ ಸ್ಪಾಟ್‌ಗಳ ಪ್ರದೇಶಗಳನ್ನು ಗುರುತಿಸಿದ್ದು, ಈ ಸ್ಥಳಗಳನ್ನು ಪರಿಶೀಲಿಸಿ ವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿತ್ತು. ಇವುಗಳಲ್ಲಿ ಬಹುತೇಕ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೂಡಲೇ ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಗಳು ಸಂಬಂಧಿಸಿದ ಅಭಿಯಂತರರುಗಳಿಗೆ ಸೂಚನೆ ನೀಡಿದರು.

ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವಾಗ ಸರಕಾರ ಸುಗಮ ಸಂಚಾರಕ್ಕಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ವಿಧಿಸಿದ್ದು, ಇವುಗಳನ್ನು ಚಾಚೂ ತಪ್ಪದೇ ಪಾಲಿಸಿದ್ದಲ್ಲಿ ಅಪಘಾತಗಳಿಂದ ಮುಕ್ತಿ ಹೊಂದಲು ಸಾಧ್ಯ. ಇದಕ್ಕೆ ಒತ್ತು ನೀಡಿ, ಜಾಗರೂಕರಾಗಿ ವಾಹನಗಳನ್ನು ಚಾಲನೆ ಮಾಡಬೇಕು ಎಂದರು.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಜಾಗಗಳನ್ನು ಗುರುತಿಸಿ, ಸಾರ್ವಜನಿಕ ವಾಹನಗಳ ನಿಲುಗಡೆಗೆ ಅವಕಾಶ ಕಲ್ಪಿಸಬೇಕು, ರಸ್ತೆ ಬದಿಯಲ್ಲಿರುವ ಅನಧಿಕೃತ ಗೂಡಂಗಡಿಗಳನ್ನು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ತೆರವುಗೊಳಿಸಬೇಕು. ಸಾಧ್ಯವಾದಲ್ಲಿ ವೆಂಡಿಂಗ್ ಝೋನ್ ಗೆ ಸ್ಥಳ ಗುರುತಿಸಿ, ಅಲ್ಲಿ ಅವರಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಪೌರಾಯುಕ್ತರಿಗೆ ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾತನಾಡಿ, ಆಟೋ ರಿಕ್ಷಾ ತಂಗುದಾಣಗಳಲ್ಲಿ ಎಲ್ಲಾ ಆಟೋ ರಿಕ್ಷಾ ಚಾಲಕರು ತಮ್ಮ ವಾಹನಗಳನ್ನು ನಿಲ್ಲಿಸಲು ಅನುಮತಿ ಬಗ್ಗೆ ಪೌರಾಯುಕ್ತರು ಕ್ರಮ ವಹಿಸಬೇಕು ಎಂದ ಅವರು, ಮಣಿಪಾಲ್ ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಆಧಾರಿತ ಟ್ಯಾಕ್ಸಿ ಸೇವೆಗೆ ಸಂಬಂಧ ಸಾರ್ವಜನಿಕ ಸಭೆಯನ್ನು ಪರ-ವಿರೋಧ ಪ್ರತ್ಯೇಕವಾಗಿ ಕರೆದು ಆ ಸಂಬಂಧ ವರದಿ ನೀಡಬೇಕೆಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಕಿರಣ್ ಎಸ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...