ಉಡುಪಿ | ತಿಂಗಳಿಗೆ ₹3000 ಪಿಂಚಣಿ, ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಭದ್ರತೆ: ನೋಂದಣಿಗೆ ಡಿಸಿ ಕರೆ

Date:

ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್‌ಪಿಎಸ್ ಟ್ರೇಡರ್ಸ್ (ರಾಷ್ಟ್ರೀಯ ಪಿಂಚಣಿ ಯೋಜನೆ)ಗಳಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

ಅವರು ಇಂದು ಮಣಿಪಾಲದ ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಯೋಜನೆಗಳಡಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಹಮ್ಮಿಕೊಂಡಿರುವ ವಿಶೇಷ ನೋಂದಣಿ ಅಭಿಯಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನವರಿ 15ರಿಂದ ಮಾರ್ಚ್ 15ರವರೆಗೆ ಜಿಲ್ಲೆಯಾದ್ಯಂತ ವಿಶೇಷ ನೋಂದಣಿ ಅಭಿಯಾನ ನಡೆಸಲಾಗುತ್ತಿದ್ದು, ವಯಸ್ಸಿನ ಆಧಾರದ ಮೇಲೆ ತಿಂಗಳಿಗೆ ರೂ.55ರಿಂದ ರೂ.200ರವರೆಗೆ ವಂತಿಕೆ ಪಾವತಿಸಿದಲ್ಲಿ, 60 ವರ್ಷ ಪೂರೈಸಿದ ನಂತರ ತಿಂಗಳಿಗೆ ರೂ.3000 ಪಿಂಚಣಿ ಸೌಲಭ್ಯ ಲಭ್ಯವಾಗಲಿದೆ ಎಂದು ತಿಳಿಸಿದರು. ಆದಾಯ ತೆರಿಗೆ ಪಾವತಿದಾರರು ಹಾಗೂ ಇಎಸ್‌ಐ, ಇಪಿಎಫ್, ಎನ್‌ಪಿಎಸ್ ಫಲಾನುಭವಿಗಳು ಈ ಯೋಜನೆಗೆ ಅರ್ಹರಾಗಿರುವುದಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009254309

18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಆಧಾರ್ ಕಾರ್ಡ್, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್‌ಬುಕ್ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ. ಹೆಚ್ಚು ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ ಹಾಗೂ ವಿವಿಧ ಸಮಾರಂಭಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಅರಿವು ಮೂಡಿಸುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ 7275 ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸುವ ಗುರಿ ನಿಗದಿಯಾಗಿದ್ದು, ನರೇಗಾ ಕಾರ್ಮಿಕರು, ಸ್ವಸಹಾಯ ಸಂಘದ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಮಧ್ಯಾಹ್ನದ ಬಿಸಿಊಟದ ಸಿಬ್ಬಂದಿ, ಬೀದಿ ಬದಿ ವ್ಯಾಪಾರಿಗಳು, ಗೃಹಕಾರ್ಮಿಕರು, ಮೀನುಗಾರರು ಸೇರಿದಂತೆ ಇತರರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ, ಅಲ್ತಾಫ್ ಅಹಮದ್, ಪೌರಾಯುಕ್ತ ಮಹಾಂತೇಶ್ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ವಿ. ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...