ಉಡುಪಿ | ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರುಗಳಿಗೆ ಕಾಲು ಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಾದ್ಯಂತ ನವೆಂಬರ್ 3 ರಿಂದ ಡಿಸೆಂಬರ್ 2 ರವರೆಗೆ ಜಾನುವಾರುಗಳಿಗೆ ಎಂಟನೇ ಸುತ್ತಿನ ಕಾಲುಬಾಯಿ ಜ್ವರ ರೋಗದ ಲಸಿಕೆ ನೀಡಲಾಗುತ್ತಿದ್ದು, ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಕಟ್ಟೆಚ್ಚರ ವಹಿಸುವುದರೊಂದಿಗೆ ಯಾವುದೇ ಜಾನುವಾರುಗಳು ಲಸಿಕೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದರು.

KAALUBAYI ROGA LASIKA KARYAKRAMA 2

ಕಳೆದ ಏಳನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,05,518 ಜಾನುವಾರುಗಳ ಗುರಿ ನಿಗಧಿಪಡಿಸಿ, 1,93,496 ಜಾನುವಾರುಗಳಿಗೆ ಲಸಿಕೆ ಹಾಕಿಸಿ ಶೇ. 96 ರಷ್ಟು ಪ್ರಗತಿ ಸಾಧಿಸಲಾಗಿದೆ. ಎಂಟನೇ ಸುತ್ತಿಗೆ 1,93,496 ಗುರಿ ನಿಗಧಿಪಡಿಸಿ, ಈವರೆಗೆ 88,556 ಜಾನುವಾರುಗಳಿಗೆ ಲಸಿಕೆ ಹಾಕಿಸಲಾಗಿದೆ. ಇದು ಪ್ರತಿಶತಃ ನೂರರಷ್ಟು ಪ್ರಗತಿಯಾಗಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಸಿಕಾ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ 2,28,350 ಡೋಸ್ ಲಸಿಕೆ ಲಭ್ಯವಿದೆ. ಲಸಿಕಾ ಕಾರ್ಯದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಜೀವವೈದ್ಯ ತ್ಯಾಜ್ಯಗಳನ್ನು ನಿಯಮಾನುಸಾರ ವೈಜ್ಞಾನಿಕ ವಿಲೇವಾರಿ ಮಾಡಬೇಕು ಎಂದ ಅವರು, ಜಿಲ್ಲೆಯ ಎಲ್ಲಾ ಗ್ರಾಮಗಳ ಜಾನುವಾರುಗಳಿಗೆ ಲಸಿಕಾ ಚುಚ್ಚುಮದ್ದು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.

ಪಶುವೈದ್ಯರು, ತಾಂತ್ರಿಕ ಸಿಬ್ಬಂದಿ, ಕೆ.ಎಂ.ಎಫ್ ಸಿಬ್ಬಂದಿ, ಮೈತ್ರಿ ಕಾರ್ಯಕರ್ತರು, ಪಶು ಸಖಿಯರು ಹಾಗೂ ಇತರೆ ತರಬೇತಿ ಹೊಂದಿದ ಒಟ್ಟು 268 ಸಿಬ್ಬಂದಿಗಳನ್ನು ಲಸಿಕಾ ಕಾರ್ಯಕ್ಕೆ ನಿಯೋಜಿಸಲಾಗಿದ್ದು, ಇವರುಗಳು ಮನೆ ಭೇಟಿ ನೀಡಿದ ಸಂದರ್ಭದಲ್ಲಿ ರೈತರುಗಳು ಮಾಹಿತಿ ನೀಡಿ ಸಹಕರಿಸುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಬೇಕು ಎಂದರು.

ಜಿಲ್ಲೆಯ ಕಾಪು, ಉಡುಪಿ, ಬೈಂದೂರು, ಹೆಬ್ರಿ, ಕುಂದಾಪುರ, ಕಾರ್ಕಳ ಹಾಗೂ ಬ್ರಹ್ಮಾವರ ತಾಲೂಕು ಮತ್ತು ಉಡುಪಿ ಪಾಲಿಕ್ಲಿನಿಕ್ ನಲ್ಲಿ ತಲಾ ಒಂದರಂತೆ ಒಟ್ಟು 8 ಪಶು ಸಂಜೀವಿನಿ ಆಂಬುಲೆನ್ಸ್ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರತೀ ಚಿಕಿತ್ಸಾ ಘಟಕದ ವಾಹನದಲ್ಲಿ ಪಶುವೈದ್ಯರು, ಪಶುವೈದ್ಯ ಸಹಾಯಕ ಹಾಗೂ ವಾಹನ ಚಾಲಕರು ನೇಮಕಗೊಂಡಿದ್ದು, ಈ ವಾಹನಗಳ ಮೂಲಕ 2025 ರ ಜುಲೈ ನಿಂದ ಸೆಪ್ಟಂಬರ್ ವರೆಗೆ ಒಟ್ಟು 4611 ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿರುತ್ತದೆ ಎಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಪಶುವೈದ್ಯಕೀಯ ಪಾಲಿ ಕ್ಲಿನಿಕ್ ಉಪನಿರ್ದೇಶಕ ಡಾ. ಬಾಬಣ್ಣ, ಮಂಗಳೂರು ಕೆ.ಎಂ.ಎಫ್ ಉಪ ವ್ಯವಸ್ಥಾಪಕ ಡಾ.ಮಾಧವ ಐತಾಳ್, ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...