ಉಡುಪಿ | ಡಿಜಿಟಲ್ ಜನಗಣತಿಗೆ ಸಜ್ಜು, ಏಪ್ರಿಲ್ 16ರಿಂದ ಮನೆ ಪಟ್ಟಿ ಕಾರ್ಯ ಆರಂಭ

Date:

ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯಾ ಎಣಿಕೆ ಕಾರ್ಯ 2027 ಫೆಬ್ರವರಿಯಿಂದ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027 ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರದ ಮಾರ್ಗಸೂಚಿಯನ್ವಯ ಗಣತಿ ಕಾರ್ಯಗಳನ್ನು ಕೈಗೊಳ್ಳಲು ಅವಶ್ಯಕವಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ನೇಮಕ ಕಾರ್ಯಗಳನ್ನು ಮಾಡಿಕೊಳ್ಳಬೇಕು, ಮನೆಗಳ ಪಟ್ಟಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಮತ್ತು ಮೇಲ್ವಿಚಾರಣೆಗಾಗಿ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುವುದು. ಮನೆ ಗಣತಿಗೆ ಅಗತ್ಯವಿರುವ ಸಿಬ್ಬಂದಿಗಳನ್ನು ನೇಮಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009907702

ಗಣತಿಗಾಗಿ ತರಬೇತುದಾರರ ಅಂತಿಮಗೊಳಿಸುವಿಕೆ, ಜಿಲ್ಲಾ ಜನಗಣತಿ ಅಧಿಕಾರಿಗಳಿಗೆ ತರಬೇತಿ, ಮತ್ತು ಕ್ಷೇತ್ರ ಕಾರ್ಯಕರ್ತರ ನೇಮಕಾತಿ ಕುರಿತು ಚರ್ಚಿಸಿ ಅಂತಿಮ ಪಟ್ಟಿ ಸಿದ್ಧಗೊಳಿಸಲು ತಿಳಿಸಿದರು.

ಜಿಪಿಎಸ್ ಆಧಾರಿತ ಮ್ಯಾಪಿಂಗ್ ಪೂರ್ಣಗೊಳಿಸಬೇಕು. ಎಲ್ಲ ಅಗತ್ಯ ಕ್ರಮಗಳನ್ನು ಕಾಲಮಿತಿಯಲ್ಲಿ ನಡೆಸಬೇಕು. ಇದಕ್ಕಾಗಿ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಉದಯ ಕುಮಾರ್ ಶೆಟ್ಟಿ, ಸಹಾಯಕ ಕಮಿಷನರ್ ರಶ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...