ಉಡುಪಿ | ಅಂತರ್ಜಾಲದ ಮೂಲಕ ವ್ಯವಹರಿಸುವಾಗ ಎಚ್ಚರವಿರಲಿ – ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

Date:

ಅಂತರ್ಜಾಲ ಬಳಕೆಯ ಸಮಯದಲ್ಲಿ ಜನ ಸಾಮಾನ್ಯರು ಜವಾಬ್ದಾರಿಯಿಂದ ಎಚ್ಚರಿಸಿ ವ್ಯವಹರಿಸಬೇಕು. ಒಂದೊಮ್ಮೆ ನಿರ್ಲಕ್ಷ್ಯ ವಹಿಸಿದಲ್ಲಿ ವಂಚನೆಗೆ ಒಳಗಾಗುವ ಸಾಧ್ಯತೆಗಳು ಇರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕಿರಣ ದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಸುರಕ್ಷಿತ ಅಂತರ್ಜಾಲ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜನಸಾಮಾನ್ಯರು ಆಧುನಿಕ ತಂತ್ರಜ್ಞಾನಗಳ ಮೊರೆ ಹೊಗಿ ಕ್ಷಣಾರ್ಧದಲ್ಲಿ ತಮ್ಮ ದೈನಂದಿನ ಕಾರ್ಯ ಚಟುವಟಿಕೆಗಳಲ್ಲಿ ಆರ್ಥಿಕ ವ್ಯವಹಾರಗಳನ್ನು ಡಿಜಿಟಲ್ ಎಲೆಕ್ಟ್ರಾನಿಕ್ ಬಳಕೆಯನ್ನು ಹೆಚ್ಚು ಹೆಚ್ಚು ಮಾಡುತ್ತಿದ್ದಾರೆ. ಇಂತಹ ವ್ಯವಹಾರಗಳನ್ನು ಮಾಡುವಾಗ ಜವಾಬ್ದಾರಿಯಿಂದ ಎಚ್ಚರಿಕೆ ವಹಿಸಿ ಮಾಡಬೇಕು. ಸ್ವಲ್ಪ ಎಚ್ಚರ ತಪ್ಪಿದರೆ ವಂಚನೆಗೆ ಒಳಗಾಗುವ ಸಾಧ್ಯತೆ ಇರುತ್ತದೆ. ಪ್ರತಿದಿನ ಹೊಸ ಹೊಸ ರೂಪದಲ್ಲಿ ಸೈಬರ್ ಅಪರಾಧ ಪ್ರಕರಣಗಳೂ ಸಹ ನಡೆಯುತ್ತಿರುವುದು ಕೇಳಿ ಬರುತ್ತಿದೆ ಎಂದರು.
ಜನಸಾಮಾನ್ಯರು ಅಲ್ಪ ಅವಧಿಯಲ್ಲಿಯೇ ಹೆಚ್ಚಿನ ಹಣವನ್ನು ದ್ವಿಗುಣಗೊಳಿಸುವ ಆಸೆಯಿಂದ ಹಣದ ಹೂಡಿಕೆಗಳನ್ನು ಕಂಪನಿಗಳ ಪೂರ್ವಾಪರ ಮಾಹಿತಿಯನ್ನು ಹೊಂದದೇ ತೊಡಗಿಸಿ ಆರಂಭದಲ್ಲಿ ಹೆಚ್ಚಿನ ಹಣ ಗಳಿಸಿ, ಇತರರಿಗೂ ಹೂಡಿಕೆ ಮಾಡಲು ಪ್ರಚಾರಪಡಿಸುವುದರೊಂದಿಗೆ ಹೆಚ್ಚಿನ ಹಣವನ್ನು ವ್ಯಯಿಸಿ, ಹಣ ಕಳೆದುಕೊಂಡ ನಿರ್ದೇಶನಗಳು ನಮ್ಮ ಕಣ್ಣು ಮುಂದೆ ಇವೆ. ಇವುಗಳ ಬಗ್ಗೆ ಜಾಗೃತಿ ವಹಿಸಿದಾಗ ಮಾತ್ರ ಆರ್ಥಿಕ ನಷ್ಟದಿಂದ ಪಾರಾಗಲು ಸಾಧ್ಯ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1004399426

ವಿಧಾನಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಮಾತನಾಡಿ, ಸೈಬರ್ ವಂಚಕರು ಬ್ಯಾಂಕ್ ಖಾತೆಗಳಲ್ಲಿ ಹೆಚ್ಚಿನ ಹಣ ಹೊಂದಿರುವ ಸರ್ಕಾರಿ ನೌಕರರು ಹಾಗೂ ಇತರೆ ಶ್ರೀಮಂತ ವ್ಯಕ್ತಿಗಳ ಹಣವನ್ನು ಲೂಟಿಮಾಡಲು ಅವರ ದತ್ತಾಂಶಗಳನ್ನು ಇಂಟರ್‌ನೆಟ್ ಬಳಕೆಯ ಮೂಲಕ ಸರಳವಾಗಿ ಸಂಗ್ರಹಿಸಿ, ಮೋಸ ಮಾಡಲು ಸಂಚು ರೂಪಿಸುತ್ತಾರೆ. ಈ ಬಗ್ಗೆ ಜನಸಾಮಾನ್ಯರು ಜಾಗೃತಿ ವಹಿಸಬೇಕು. ಹಠಾತ್ ಆಗಿ ಮೋಸ ಮಾಡುವ ಉದ್ದೇಶದಿಂದ ಕೆಲವೊಂದು ಸುಳ್ಳು ಮಾಹಿತಿಗಳನ್ನು ಹಂಚಿಕೊಂಡು ಉದ್ರೇಕಿಸುವುದರೊಂದಿಗೆ ಭಯ ಹುಟ್ಟಿಸಿ ಹಣ ಪಡೆಯಲು ಮುಂದಾಗುತ್ತಾರೆ. ಇದಕ್ಕೆ ಒತ್ತು ನೀಡಬಾರದು ಎಂದು ತಮ್ಮ ಸ್ವಂತ ಅನುಭವಗಳ ನಿರ್ದೇಶನ ನೀಡುವುದರೊಂದಿಗೆ ಮನಮುಟ್ಟುವ ರೀತಿಯಲ್ಲಿ ಮಾಹಿತಿ ಹಂಚಿಕೊಂಡರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಸೈಬರ್ ಕ್ರೈಮ್ ಪ್ರಕರಣಗಳಲ್ಲಿ ಕಳೆದುಕೊಂಡ ಹಣವನ್ನು ಮತ್ತೆ ಪಡೆಯಲು ಹಾಗೂ ಅಂತಹ ಪ್ರಕರಣಗಳನ್ನು ತನಿಖೆ ಮಾಡುವುದು ಕಷ್ಟಸಾಧ್ಯ. ಆನ್‌ಲೈನ್ ವಂಚಕರು ಮೊದಲು ನಮ್ಮ ನಂಬಿಕೆಯನ್ನು ಗಳಿಸಲು ಪ್ರಯತ್ನಿಸಿ, ಮೋಸ ಮಾಡುತ್ತಾರೆ. ಎಷ್ಟೇ ಎಚ್ಚರವಿದ್ದರೂ ಕಷ್ಟ. ಹಣಕಾಸಿನ ವ್ಯವಹಾರಗಳನ್ನು ಮಾಡುವಾಗ ಜವಾಬ್ದಾರಿಯುತವಾಗಿ ಮಾಡಬೇಕು ಎಂದರು.

1004399427

ಜಿಲ್ಲಾ ಪೊಲೀಸ್ ಅಧಿಕ್ಷಕ ಡಾ. ಅರುಣ್ ಕೆ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಸಾಂಪ್ರದಾಯಿಕ ಮೋಸದ ಅಪರಾಧಗಳಿಗಿಂತ ಕುಳಿತಲ್ಲಿಯೇ ಇಂಟರ್‌ನೆಟ್ ಬಳಕೆಯಿಂದ ಸೈಬರ್ ಅಪರಾಧಗಳನ್ನು ಮಾಡುವುದರೊಂದಿಗೆ ಹೆಚ್ಚಿನ ಹಣ ಗಳಿಕೆ ಮಾಡುತ್ತಿದ್ದಾರೆ. ಸೈಬರ್ ಅಪರಾಧದಲ್ಲಿ ಶೇ. 80 ರಷ್ಟು ಹಣಕಾಸಿನ ಮೋಸಗೊಳಿಸುವಿಕೆ ಹೆಚ್ಚು ಇವೆ. ಜಿಲ್ಲೆಯಲ್ಲಿ ಸಾಂಪ್ರದಾಯಿಕ ಅಪರಾಧದಿಂದ 4 ಕೋಟಿ ಹಣ ಸಾರ್ವಜನಿಕರು ಕಳೆದುಕೊಂಡರೆ, ಸೈಬರ್ ಅಪರಾಧದಲ್ಲಿ 44 ಕೋಟಿ ಗೂ ಹೆಚ್ಚು ಹಣ ಕಳೆದುಕೊಂಡಿರುತ್ತಾರೆ ಎಂದ ಅವರು, ಜನರು ಆರ್ಥಿಕ ವಹಿವಾಟು ಮಾಡುವಾಗ ಮೂಲಭೂತ ಅಂಶಗಳ ಬಗ್ಗೆ ಎಚ್ಚರವನ್ನು ವಹಿಸುವುದು ಅತ್ಯಂತ ಅವಶ್ಯ ಎಂದರು.

ಲೀಡ್‌ಬ್ಯಾಂಕ್ ಮ್ಯಾನೆಜರ್ ಹರೀಶ್ ಮಾತನಾಡಿದರು. ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ ಹಾಗೂ ಬೆಂಗಳೂರು ಎನ್.ಐ.ಸಿ ಯ ಬಾಲಚಂದ್ರ ಸೈಬರ್ ಪ್ರಕರಣಗಳಾಗದಂತೆ ಎಚ್ಚರ ವಹಿಸುವ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಎನ್.ಐ.ಸಿ ಅಧಿಕಾರಿ ಉಮಾಮಹೇಶ್ವರಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಡಯಟ್ ಉಪನ್ಯಾಸಕ ಡಾ. ಅಶೋಕ್ ಕಾಮತ್ ಸ್ವಾಗತಿಸಿ, ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...