ಉಡುಪಿ | ಸಂಭವನೀಯ ಪ್ರಕೃತಿ ವಿಕೋಪದ ಮಾಹಿತಿಗಳನ್ನು ಸಾರ್ವಜನಿಕರಿಗೆ ನೀಡಿ – ಡಿಸಿ ಡಾ. ಕೆ ವಿದ್ಯಾ ಕುಮಾರಿ

Date:

ಉಡುಪಿ ಜಿಲ್ಲೆಯಲ್ಲಿ ಸಂಭವನೀಯ ಪ್ರಕೃತಿ ವಿಕೋಪದ ಬಗ್ಗೆ ಹವಾಮಾನ ಇಲಾಖೆಯಿಂದ ನೀಡುವ ಮಾಹಿತಿಗಳನ್ನು ಸಾರ್ವಜನಿಕರಿಗೆ ತಲುಪಿಸಿ, ಅವುಗಳಿಂದ ರಕ್ಷಣೆ ಪಡೆಯುವ ಹಾಗೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರಸ್ತುತ ಜಿಲ್ಲೆಯಲ್ಲಿ ಬಿಸಿ ಶಾಖದ ಮಾರುತಗಳು ಬೀಸುತ್ತವೆ ಎಂಬ ಬಗ್ಗೆ ಹವಾಮಾನ ಇಲಾಖೆ ವರದಿ ನೀಡಿದೆ. ಈ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ನೀಡಬೇಕು. ಅದರಿಂದ ರಕ್ಷಣೆ ಪಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸಹ ತಿಳಿಸಿ, ಅವುಗಳಿಂದ ಯಾರೊಬ್ಬರಿಗೂ ತೊಂದರೆಯಾಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ಇವುಗಳನ್ನು ಆದ್ಯತೆಯ ಮೇಲೆ ಮಾಡಬೇಕು ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವ ಸಾಧ್ಯತೆಗಳು ಇವೆ. ಈ ದಿನಗಳಲ್ಲಿ ಜಿಲ್ಲೆಯ ಯಾವುದೇ ಭಾಗದಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಅವಶ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದ ಅವರು, ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆಯೂ ಸಹ ಕ್ರಮ ವಹಿಸಬೇಕು ಎಂದರು.

ಕಳೆದ ಸಾಲಿನಲ್ಲಿ ಹೆಚ್ಚಿನ ಮಳೆಯಿಂದ ಹಾನಿಗೊಳಗಾದ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ದುರಸ್ಥಿ ಕಾರ್ಯಗಳನ್ನು ಆದ್ಯತೆಯ ಮೇಲೆ ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಹಾಗೂ ಮಳೆಯಿಂದ ಹಾನಿಗೊಳಗಾದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಸೇರಿದಂತೆ ಹೊಸದಾಗಿ ಡಾಂಬರೀಕರಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ವಿವಿಧ ಅನುದಾನಗಳ ಅಡಿಯಲ್ಲಿ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಮುಂಬರುವ ದಿನಗಳಲ್ಲಿ ಯಾವಾಗ ಬೇಕಾದರೂ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಮಳೆಯ ನೀರು ಸರಾಗವಾಗಿ ಚರಂಡಿಯಲ್ಲಿ ಹರಿದುಹೋಗಲು ಅನುಕೂಲವಾಗುವಂತೆ ನಗರ ಹಾಗೂ ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳು ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಮಳೆ-ಗಾಳಿಯಿಂದ ಮೆಸ್ಕಾಂನ ವಿದ್ಯುತ್ ಕಂಬಗಳು, ಟ್ರಾನಸ್‌ಫಾರ್ಮ್ಗಳು ಹಾಗೂ ವಿದ್ಯುತ್ ತಂತಿಗಳ ಹಾನಿಉಂಟಾದಾಗ ಅವುಗಳನ್ನು ಬದಲಾಯಿಸಲು ಅಗತ್ಯವಿರುವ ಕಂಬಗಳು, ಟ್ರಾನ್ಸ್ಫಾರ್ಮ್ಗಳು ಸೇರಿದಂತೆ ಮತ್ತಿತರ ಪರಿಕರಗಳನ್ನು ಸಾಕಷ್ಟು ದಾಸ್ತಾನು ಇಟ್ಟುಕೊಳ್ಳಬೇಕು. ಇವುಗಳ ಜೊತೆಗೆ ಹೆಚ್ಚಿನ ಸಿಬ್ಬಂದಿ ವರ್ಗಗಳನ್ನು ನಿಯೋಜಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು.

ಕಳೆದ ವರ್ಷ ಮುಂಜಾಗ್ರತೆ ವಹಿಸಿ, ಅಪಾಯಕಾರಿ ಮರಗಳನ್ನು ಗುರುತಿಸಿ, ತೆರವುಗೊಳಿಸಿದ ಹಿನ್ನೆಲೆ, ಮರಬಿದ್ದ ಅಪಘಾತಗಳು ಅಷ್ಟಾಗಿ ಕಂಡುಬರಲಿಲ್ಲ. ಈ ಬಾರಿಯೂ ಮುಂಚಿತವಾಗಿಯೇ ಅಪಾಯಕಾರಿ ಮರಗಳನ್ನು ತೆರವುಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಯವರು ಇತರೆ ಇಲಾಖೆಯ ಸಮನ್ವಯದೊಂದಿಗೆ ಕೈಗೊಳ್ಳಬೇಕು ಎಂದರು.

ಗ್ರಾಮ ಪಂಚಾಯತಿ ಹಾಗೂ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿಪತ್ತು ನಿರ್ವಹಣೆಯ ಯೋಜನೆಯನ್ನು ತಯಾರಿಸಬೇಕು ಎಂದ ಅವರು, ಜಿಲ್ಲೆಯಲ್ಲಿ ಕಡಲಕೊರೆತದ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಪ್ರಸ್ತಾವನೆಯನ್ನು 115 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಸಹಾಯಕ ಕಮೀಷನರ್ ಮಹೇಶ್ಚಂದ್ರ, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಶೀಲ್ದಾರ್‌ಗಳು, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...