ಉಡುಪಿ | ಗರ್ಭಿಣಿ ತಾಯಂದಿರ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ನಡೆಸಿ – ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

Date:

ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಾಯಿ ಮರಣ ತನಿಖಾ ಸಮಿತಿ ಸಭೆ, ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ತಾಯಿ ಮತ್ತು ಮಕ್ಕಳ ಮರಣವನ್ನು ತಡೆಗಟ್ಟಲು ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಇವುಗಳ ಜೊತೆಗೆ ತಮ್ಮ ಮಗುವಿನ ಆರೈಕೆ ಕೈಗೊಳ್ಳುವ ಕುರಿತು ಮಾಹಿತಿಗಳನ್ನು ಒದಗಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲ ಸುರಕ್ಷತಾ ಕಾರ್ಯಕ್ರಮದಡಿ ಶಾಲೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸುವ ಸಂದರ್ಭದಲ್ಲಿ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಅವರ ಪೋಷಕರುಗಳಿಗೆ ಈ ವಿಚಾರವನ್ನು ತಿಳಿಸುವುದರ ಜೊತೆಗೆ ಉಚಿತವಾಗಿ ಚಿಕಿತ್ಸೆ ಪಡೆಯಲು, ಸರಕಾರದ ಯೋಜನೆಗಳ ಮಾಹಿತಿಯನ್ನು ಅವರಿಗೆ ನೀಡುವುದರ ಜೊತೆಗೆ ಅಂತಹ ಮಕ್ಕಳು ಚಿಕಿತ್ಸೆ ಪಡೆದುಕೊಂಡ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದರು.

ನವಜಾತ ಶಿಶುಗಳಿಗೆ ಕಾಲಕಾಲಕ್ಕೆ ನೀಡುವ ಸಾರ್ವತ್ರಿಕ ಲಸಿಕೆಗಳನ್ನು ಹಾಕಿಸಲು ತಾಯಂದಿರುಗಳಿಗೆ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡಿ, ತಪ್ಪದೇ ಮಕ್ಕಳಿಗೆ ಸಂಪೂರ್ಣ ಲಸಿಕೆ ಪಡೆಯುವಂತೆ ನೋಡಿಕೊಳ್ಳಬೇಕು ಎಂದ ಅವರು, 5 ವರ್ಷದ ವರೆಗಿನ ಮಕ್ಕಳಿಗೆ ಶೇ.87.24, 10 ವರ್ಷದ ವರೆಗಿನ ಮಕ್ಕಳಿಗೆ ಶೇ. 62.16 ಹಾಗೂ 16 ವರ್ಷದ ವರೆಗಿನ ಮಕ್ಕಳಿಗೆ ಶೇ. 55.43 ರಷ್ಟು ಲಸಿಕೆ ನೀಡಿದ್ದು, ಇದರ ಪ್ರಮಾಣ ಕಡಿಮೆ ಇದೆ. ಇವುಗಳನ್ನು ಪ್ರತಿಶತಃ ನೂರರಷ್ಟು ಸಾಧನೆ ಆಗಬೇಕು ಎಂದರು.

ಜಂತುಹುಳು ನಿವಾರಣಾ ದಿನಾಚರಣೆಯು ಡಿಸೆಂಬರ್ 9 ರಂದು ಜರುಗಲಿದ್ದು, ಮಾಫ್ ಅಫ್ ಡೇ ಯು ಡಿಸೆಂಬರ್ 16 ರಂದು ಜರುಗಲಿದೆ. ಜಿಲ್ಲೆಯ ಎಲ್ಲಾ 1 ರಿಂದ 19 ವರ್ಷದ ಮಕ್ಕಳಿಗೆ ಜಂತು ಹುಳು ನಿವಾರಣಾ ಮಾತ್ರೆಯನ್ನು ಅಂಗನವಾಡಿ, ಶಾಲೆ, ಕಾಲೇಜು ಹಾಗೂ ಕೈಗಾರಿಕಾ ತರಬೇತಿ ಹಾಗೂ ವೃತ್ತಿ ತರಬೇತಿ ಸಂಸ್ಥೆಗಳಲ್ಲಿ ನೀಡಲು ಸಂಬಂಧಿಸಿದ ಎಲ್ಲಾ ಇಲಾಖೆಗಳು ಕ್ರಮ ವಹಿಸುವಂತೆ ತಿಳಿಸಿದರು.

ಜಂತುಹುಳು ನಿವಾರಣಾ ಉಚಿತ ಮಾತ್ರೆ ವಿತರಣೆ ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯ ಜೊತೆಗೆ ಇತರೆ ಎಲ್ಲಾ ಇಲಾಖೆಯವರು ಕೈಜೋಡಿಸಿ, ಯಶಸ್ವಿಗೊಳಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಐ.ಪಿ ಗಡಾದ, ಜಿಲ್ಲಾ ಆರ್.ಸಿ. ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಡಿ.ಎಸ್.ಓ ಡಾ. ನಾಗರತ್ನ, ವಿವಿಧ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...