ಉಡುಪಿ | ನೇಣುಬಿಗಿದ ಸ್ಥಿತಿಯಲ್ಲಿ ಅಸ್ತಿಪಂಜರ ಪತ್ತೆ, ಆತ್ಮ*ಹತ್ಯೆ ಶಂಕೆ

Date:

ಉಡುಪಿ ನಗರದ ಖಾಸಗಿಯವರ ಸ್ಥಳದಲ್ಲಿದ್ದ ಮರದ ಕೊಂಬೆಗೆ, ನೇಣುಬಿಗಿದ‌‌‌ ಸ್ಥಿತಿಯಲ್ಲಿ ಗಂಡಸಿನ ಕಳೇಬರ ಪತ್ತೆಯಾಗಿರುವ ಘಟನೆ ಬುಧವಾರ ನಡೆದಿದೆ. ವ್ಯಕ್ತಿ ಮೃತಪಟ್ಟು ಎರಡು ತಿಂಗಳು ಕಳೆದಿರುವ ಶಂಕೆ ವ್ಯಕ್ತವಾಗಿದೆ.

ಶವವು ಸಂಪೂರ್ಣ ಕೊಳೆತು ಅಸ್ಥಿಪಂಜರ ಮಾತ್ರ ಉಳಿದುಕೊಂಡಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ವಾರಸುದಾರರು ನಗರ ಪೋಲಿಸ್ ಠಾಣೆಯ‌ ನಾಗರೀಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ. ನಗರ ಪೋಲಿಸ್ ಠಾಣೆಯ ತನಿಖಾಧಿಕಾರಿ ಈರಣ್ಣ, ಎ ಎಸ್ ಐ ಹರೀಶ್, ಜಾಸ್ವ ಘಟನಾ ಸ್ಥಳದಲ್ಲಿದ್ದು ಮಹಜರು ಪ್ರಕ್ರಿಯೆ ನಡೆಸಿದರು.

ಮರದ ಕೊಂಬೆಗೆ ಕಟ್ಟಿದ ಕುಣಿಕೆಯಲ್ಲಿ ನೇಲುತ್ತಿದ್ದ ಕಳೇಬರವನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ಕೆಳಗಿಳಿಸಿದರು. ಬಳಿಕ ಕಳೇಬರವನ್ನು ಟಾರ್ಪಲಿನಲ್ಲಿ ಭದ್ರಗೊಳಿಸಿಕೊಂಡು ನಾಗರೀಕ ಸಮಿತಿಯ ಉಚಿತ ಸೇವೆಯ ಆಂಬುಲೆನ್ಸಿನ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಿಕೊಟ್ಟು ಇಲಾಖೆಗೆ ನೆರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಆತ್ಮಹತ್ಯೆ ಪರಿಹಾರವಲ್ಲ 5 1

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...