ಉಡುಪಿ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಮಾನವ ಸರಪಳಿ : ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

Date:

ಜಿಲ್ಲೆಯಲ್ಲಿ ಸೆಪ್ಟಂಬರ್ 15 ರಂದು ಪ್ರಜಾಪ್ರಭುತ್ವದ ದಿನದ ಅಂಗವಾಗಿ 100 ಕಿ.ಮೀ. ಮಾನವ ಸರಪಳಿ ನಿರ್ಮಾಣ ಕಾರ್ಯವನ್ನು ಯಶಸ್ವಿಗೊಳಿಸೋಣ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಇಂದು ಕಾಪು ತಾಲೂಕಿನ ಕುಂಜಾರುಗಿರಿಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಾರ್ವಜನಿಕರನ್ನು ಉತ್ತೇಜಿಸಲು ಆಯೋಜಿಸಲಾದ ಟ್ರೆಕ್ಕಿಂಗ್‌ನಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ರಾಜ್ಯ ಸರ್ಕಾರವು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಲು ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ಬೀದರ್‌ನಿಂದ ಚಾಮರಾಜ ನಗರದವರೆಗೆ 25 ಲಕ್ಷ ಜನರು ಮಾನವ ಸರಪಳಿ ನಿರ್ಮಿಸಲು ತೀರ್ಮಾನಿಸಿದೆ. ಉಡುಪಿ ಜಿಲ್ಲೆಯಲ್ಲಿ 100 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಸಾರ್ವಜನಿಕರು, ಸಂಘ-ಸಂಸ್ಥೆಯ ಪದಾಧಿಕಾರಿಗಳು, ವಿವಿಧ ಸಮುದಾಯದ ಮುಖಂಡರುಗಳು, ಎನ್.ಜಿ.ಓ ಗಳು, ಸ್ವ-ಸಹಾಯ ಸಂಘದ ಸದಸ್ಯರುಗಳು, ರೋಟರಿ ಸಂಸ್ಥೆಯ ಸದಸ್ಯರುಗಳು ಸೇರಿದಂತೆ ಪ್ರತಿಯೊಬ್ಬ ನಾಗರಿಕರು ಸ್ವಯಂಪ್ರೇರಿತವಾಗಿ ಕೈಜೋಡಿಸಿ, ಭಾಗವಹಿಸುವುದರೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Kunjarugiri 2

ಮಾನವ ಸರಪಳಿಯು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮೂಲಕ ಬೈಂದೂರು ತಾಲೂಕಿನ ಶಿರೂರು ಗ್ರಾಮದಿಂದ ಮಾನವ ಸರಪಳಿ ಆರಂಭಗೊಂಡು ಬಿಜೂರು, ಉಪ್ಪುಂದ, ಕಾರ್ಗಲ್, ಕಂಬದಕೋಣೆ, ಕಿರಿಮಂಜೇಶ್ವರ, ನಾವುಂದ, ಮರವಂತೆ, ಹೊಸಾಡು, ಹೆಮ್ಮಾಡಿ, ಕಟ್‌ಬೆಲ್ತೂರು, ತಲ್ಲೂರು, ಕೋಟೇಶ್ವರ, ಗೋಪಾಡಿ, ಕುಂಭಾಶಿ, ತೆಕ್ಕಟ್ಟೆ, ಕೋಟ, ಕೋಟತಟ್ಟು, ಸಾಲಿಗ್ರಾಮ, ಪಾಂಡೇಶ್ವರ, ಐರೋಡಿ, ಹಂದಾಡಿ, ವಾರಂಬಳ್ಳಿ, ಚಾಂತಾರು, ಹಾರಾಡಿ, ಉಪ್ಪೂರು, ಅಂಬಲಪಾಡಿ, ಕಡೆಕಾರ್, ಉದ್ಯಾವರ, ಕಟಪಾಡಿ, ಕೋಟೆ, ಇನ್ನಂಜೆ, ಬಡಾ, ತೆಂಕ, ಪಡುಬಿದ್ರೆ ಗ್ರಾಮ ಪಂಚಾಯತ್ ಮೂಲಕ ಹಾದು ದಕ್ಷಿಣ ಕನ್ನಡ ಜಿಲ್ಲೆಯನ್ನು ಕಾಪು ತಾಲೂಕಿನ ಹೆಜಮಾಡಿಯಲ್ಲಿ ಸೇರುತ್ತದೆ ಎಂದರು.

ಜಿಲ್ಲೆಯಲ್ಲಿ ಏರ್ಪಡಿಸಲಾಗುವ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪ್ರತಿಯೊಬ್ಬ ನಾಗರಿಕರು, ಕುಟುಂಬ ಸಮೇತ ಕ್ರಿಯಾಶೀಲರಾಗಿ ಪಾಲ್ಗೊಂಡು ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸೋಣ ಎಂದರು.

ಇದೇ ಸಂದರ್ಭದಲ್ಲಿ ಕುಂಜಾರುಗಿರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದ ಆವರಣದಲ್ಲಿ ಮಾನವ ಸರಪಳಿಯನ್ನು ರಚಿಸಿ, ಪ್ರಜಾಪ್ರಭುತ್ವವನ್ನು ಸಂಭ್ರಮಿಸೋಣ, ಮಾನವ ಸರಪಳಿಯನ್ನು ನಿರ್ಮಿಸೋಣ ಎಂಬ ಘೋಷಣೆಗಳನ್ನು ಕೂಗಿದರು.

Kunjarugiri

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ. ಸಿದ್ದಲಿಂಗಪ್ಪ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಕಾಪು ತಹಶೀಲ್ದಾರ್ ಪ್ರತಿಭಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...