ಉಡುಪಿ | ವಾಯುಭಾರ ಕುಸಿತ; ಕರಾವಳಿಯಲ್ಲಿ ಮುಂದಿನ 5 ದಿನ ಹೆಚ್ಚಿನ ಗಾಳಿ, ಮಳೆ ಸಾಧ್ಯತೆ

Date:

ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ ಕೆ ವಿದ್ಯಾ ಕುಮಾರಿ ಪ್ರಕಟಣೆ ಹೊರಡಿಸಿದ್ದು, “ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರು ಕೆಲವು ಸೂಚನೆಗಳನ್ನು ಪಾಲಿಸಬೇಕು” ಎಂದು ಹೇಳಿದರು.

“ಉಡುಪಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು” ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳಿಗೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಭಾರೀ ಮಳೆಗೆ ನಲುಗಿದ ಏಲಕ್ಕಿ ಬೆಳೆಗಾರರು; ಕಟಾವು ಮಾಡಿದ ಏಲಕ್ಕಿ ಒಣಗಿಸಲು ಪರದಾಟ

“ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್‌ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಅಂಶಗಳನ್ನು ಮಳೆಗಾಲದ ಎಲ್ಲ ಸಂದರ್ಭಗಳಲ್ಲಿ ಚಾಚು ತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು” ಎಂದು ಎಚ್ಚರಿಕೆ ನೀಡಿದೆ.

ತುರ್ತುಸೇವೆಗೆ ಶುಲ್ಕ ರಹಿತ: 1077 ಹಾಗೂ 0820-2574802 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...