ಉಡುಪಿ | ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

Date:

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಅತೀ ಶೀಘ್ರವಾಗಿ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂ.ಎಂ.ಡಿ.ಆರ್. ಪ್ರಕರಣ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣಗಳು, ಮೋಟಾರ್/ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಉದ್ಯೋಗದಲ್ಲಿ ಪುನ‌ರ್ ಸ್ಥಾಪಿಸಲ್ಪಡುವ ಪ್ರಕರಣಗಳು ಸೇರಿದಂತೆ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ/ಕುಟುಂಬ ನ್ಯಾಯಾಲಯಗಳ ಪ್ರಕರಣಗಳು (ವಿಚ್ಛೇದನವನ್ನು ಹೊರತುಪಡಿಸಿ), ಭೂ ಸ್ವಾಧೀನ ಪರಿಹಾರ ಪ್ರಕರಣಗಳು, ಭೂ ಸ್ವಾಧೀನ ಪರಿಹಾರ ಹಂಚಿಕೆ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗು ಹಾಗೂ ಸಿವಿಲ್ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಿಕೊಳ್ಳಲಾಗುವುದು.

ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನೂ ಸಹ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು, ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು, ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...