ಉಡುಪಿ | ವರ್ಗಾವಣೆಯಾಗದ ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿಯನ್ನು ಭೇಟಿಯಾದ ದ.ಸಂ.ಸ.

Date:

ಈಗಾಗಲೇ ವರ್ಗಾವಣೆ ಆದೇಶವಿದ್ದರೂ ಉಡುಪಿ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ಆಗಿರುವ ಹೆಚ್.ಎಸ್.ಅಶೋಕ್ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡದಿರುವ ಕ್ರಮದ ವಿರುದ್ಧ ಇಂದು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿಯು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮತ್ತು ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು.

ಸ್ಪಷ್ಟ ಆದೇಶ ಇದ್ದರೂ ಮಂಗಳೂರು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿ ಇರುವಾಗ ದಲಿತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ತನಿಖೆಯಲ್ಲಿ ಸಾಬಿತಾಗಿ ಶಿಕ್ಷೆಯ ರೂಪದಲ್ಲಿ 5 ಇಂಕ್ರಿಮೆಂಟ್ ಗಳನ್ನು ಕಡಿತಗೊಳಿಸಿಕೊಂಡ ಒಬ್ಬ ಅಶಿಸ್ತಿನ ಜಿಲ್ಲಾ ಸರ್ಜನ್ ಹೆಚ್.ಎಸ್.ಅಶೋಕ್ ಅವರನ್ನು ವರ್ಗಾವಣೆ ಮಾಡಲು ಮೀನಾಮೇಷ ಎಣಿಸುತ್ತಿರುವ ಜಿಲ್ಲಾಧಿಕಾರಿಯವರ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತದೆ ಎಂದು ದ.ಸಂ.ಸ.ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ವಿಷಾದ ವ್ಯಕ್ತಪಡಿಸಿದ್ದಾರೆ.

1006558767

ಇಂದು ದ.ಸಂ.ಸ.ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಮತ್ತು ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯವರಿಗೆ ವಾಸ್ತವದ ಅರಿವು ಮೂಡಿಸಿತು. ಜಿಲ್ಲಾಧಿಕಾರಿಯವರ ಭೇಟಿಯ ನಂತರ ಚರ್ಚಿಸಿದ ದ.ಸಂ.ಸ.ನಿಯೋಗ ಕರ್ನಾಟಕ ಆಡಳಿತಾತ್ಮಕ ನ್ಯಾಯಲಯದ ಸ್ಪಷ್ಟ ಆದೇಶವಿರುವಾಗ ಇನ್ನು ಸಹ ವರ್ಗಾವಣೆ ಮಾಡದೇ ಇದ್ದರೆ ಉಸ್ತುವಾರಿ ಸಚಿವರು ಬಂದಾಗ ಕಪ್ಪು ಬಾವುಟ ತೋರಿಸಿ ಘೇರಾವ್ ಹಾಕುವ ಕಾರ್ಯಕ್ರಮ‌ ಹಾಕಿಕೊಳ್ಳುವ ನಿರ್ಧಾರಕ್ಕೆ ಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಜಿಲ್ಲಾಧಿಕಾರಿಯವರನ್ನು ಭೇಟಿಯಾದ ನಿಯೋಗದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಬಾಸ್ಕರ ಮಾಸ್ಟರ್ ಕುಂಜಿಬೆಟ್ಟು, ಅಣ್ಣಪ್ಪ ನಕ್ರೆ, ತಾಲೂಕು ಸಂಚಾಲಕರಾದ ಶಿವರಾಜ್ ಬೈಂದೂರು, ಕೆ.ಸಿ.ರಾಜು ಬೆಟ್ಟಿನಮನೆ, ಹರೀಶ್ಚಂದ್ರ ಬಿರ್ತಿ, ರಾಘವ ಕುಕುಜೆ, ರಾಜೇಂದ್ರ ಮಾಸ್ಟರ್ ಬೆಳ್ಳೆ, ಪದಾಧಿಕಾರಿಗಳಾದ ಕೀರ್ತಿ ಕುಮಾರ್ ಪಡುಬಿದ್ರಿ, ರಾಘವ ಕೋಟ್ಯಾನ್, ಶೇಖರ ಕೊಡಂಕೂರು, ಚಂದ್ರ ಕೊರ್ಗಿ, ಶಂಕರ ಕೊಡಂಕೂರು, ಕ್ರಷ್ಣ ಬೆಳ್ಳೆ, ಶ್ರೀಕಾಂತ್ ಹಿಜಾಣ, ಭಾಸ್ಕರ್ ಕುಂಟೋಳಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...