ಉಡುಪಿ | ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ: ಶೇಕಡಾ 100 ಫಲಿತಾಂಶಕ್ಕೆ ಕರೆ

Date:

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆ ಇಂದು ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯಲ್ಲಿ ಮಾನ್ಯ ಶಾಸಕ ಶ್ರೀಯುತ ಯಶಪಾಲ್ ಎ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಶಿಕ್ಷಣ ಕಾಶಿ ಎಂದೇ ಖ್ಯಾತಿ ಪಡೆದಿರುವ ಉಡುಪಿ ಜಿಲ್ಲೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ಶಿಕ್ಷಕರ ಶ್ರಮವೇ ಕಾರಣವಾಗಿದ್ದು, ಆ ಸ್ಥಾನವನ್ನು ಮುಂದುವರಿಸಿಕೊಳ್ಳಲು ಇನ್ನಷ್ಟು ಪರಿಶ್ರಮವಹಿಸಬೇಕೆಂದು ಶಾಸಕ ಯಶಪಾಲ್ ಎ. ಸುವರ್ಣ ಅವರು ಕರೆ ನೀಡಿದರು.

1009288005

ಡಯಟ್ ಉಡುಪಿ ಉಪನಿರ್ದೇಶಕ ಹಾಗೂ ಪ್ರಾಚಾರ್ಯರಾದ ಡಾ. ಅಶೋಕ ಕಾಮತ್ ಮಾತನಾಡಿ, ಮಕ್ಕಳ ಕುರಿತು ದೂರು ಹೇಳುವುದಕ್ಕಿಂತ ಅವರನ್ನು ಕಲಿಕೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಶೇಕಡಾವಾರು ಫಲಿತಾಂಶಕ್ಕೆ ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ಅವರು ಕಳೆದ ಎರಡು ವರ್ಷಗಳ ಹಾಗೂ ಪ್ರಸಕ್ತ ವರ್ಷದ ಸಂಕಲನಾತ್ಮಕ–1 ಮತ್ತು ಮಂಡಳಿಯ ಪೂರ್ವ ಸಿದ್ಧತಾ ಪರೀಕ್ಷೆಗಳ ಫಲಿತಾಂಶಗಳ ಬಗ್ಗೆ ಮಾಹಿತಿ ನೀಡಿದರು. ಮುಂದಿನ 2 ಮತ್ತು 3ನೇ ಪರೀಕ್ಷೆಗಳ ವೇಳಾಪಟ್ಟಿ, ಅದರ ಅನುಷ್ಠಾನ, ಕಲಿಕೆಯಲ್ಲಿ ನವೀನತೆ ಅಳವಡಿಸಿಕೊಳ್ಳುವಿಕೆ, ಒತ್ತಡರಹಿತ ವಾತಾವರಣ ನಿರ್ಮಾಣ ಹಾಗೂ ಶೇಕಡಾ 100 ಫಲಿತಾಂಶ ಸಾಧಿಸಲು ಶಿಕ್ಷಕರನ್ನು ಪ್ರೇರೇಪಿಸಿದರು.

ಸಭೆಯನ್ನು ಸರಕಾರಿ ಪದವಿ ಪೂರ್ವ ಕಾಲೇಜು (ಬಾಲಕಿಯರ) ಉಡುಪಿ ಪ್ರಾಚಾರ್ಯ ಶ್ರೀಯುತ ಜಗದೀಶ್ ಸ್ವಾಗತಿಸಿದರು. ಬಾಲಕಿಯರ ಪ್ರೌಢಶಾಲೆ ಉಡುಪಿ ಹಿರಿಯ ಸಹಶಿಕ್ಷಕಿ ಶ್ರೀಮತಿ ಇಂದಿರಾ ವಂದಿಸಿದರು.

ಸಭೆಯಲ್ಲಿ ಬ್ರಹ್ಮಾವರ ವಲಯದ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಉಮಾ, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಪ್ರಾಚಾರ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...