ಉಡುಪಿ | ಯುವಜನತೆಗೆ ಮಾದಕ ವಸ್ತುಗಳ ದುಷ್ಪರಿಣಾಮದ ಕುರಿತು ಅರಿವು ಮೂಡಿಸಿ : ಜಿಲ್ಲಾಧಿಕಾರಿ ವಿದ್ಯಾಕುಮಾರಿ

Date:

ಯುವಜನತೆಗೆ ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ ಅವುಗಳಿಂದ ದೂರ ಉಳಿಯುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆ ಕುರಿತ ಎರಡನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಯುವಜನತೆ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಮಾದಕ ವಸ್ತುಗಳಿಗೆ ಮಾರು ಹೋಗಿ ತಮ್ಮ ಶಿಕ್ಷಣದಿಂದ ವಂಚಿತ ಆಗುವುದರ ಜೊತೆಗೆ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಂಡು ಭವಿಷ್ಯದ ಜೀವನವು ಉತ್ತಮವಾಗದೇ ಸಮಾಜದಲ್ಲಿ ಗೌರವವನ್ನು ಕಳೆದುಕೊಳ್ಳುವ ಸಾಧ್ಯತೆಗಳು ಇರುತ್ತವೆ. ಯುವಜನರಿಗೆ ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿಯುವ ಹಾಗೆ ಅರಿವು ಮೂಡಿಸುವುದು ಪೋಷಕರು, ಶಾಲಾ-ಕಾಲೇಜಿನ ಶಿಕ್ಷಣ ಸಂಸ್ಥೆಯವರು ಹಾಗೂ ಸರಕಾರದ ಪ್ರತಿನಿಧಿಗಳಾದ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದನ್ನು ಆದ್ಯತೆಯ ಮೇಲೆ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲಾ-ಕಾಲೇಜುಗಳ ಆವರಣದ 100 ಮೀ. ವ್ಯಾಪ್ತಿಯಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂಬ ನಿಯಮವಿದ್ದರೂ ಸಹ ಆ ವ್ಯಾಪ್ತಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಮಾರಾಟ ಮಾಡುತ್ತಿರುವ ಅಂಗಡಿಗಳ ಪರವಾನಿಗೆಯನ್ನು ರದ್ದು ಮಾಡಲು ಸ್ಥಳೀಯ ಸಂಸ್ಥೆಗಳಿಗೆ ಕೂಡಲೇ ಶಿಫಾರಸು ಮಾಡಿ, ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ ಸಂದರ್ಭದಲ್ಲಿ ಮಾದಕ ವಸ್ತುಗಳಿಂದ ದೂರವಿರುವ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವ ರೀತಿಯಲ್ಲಿ ತಿಳಿಹೇಳಬೇಕು. ವಿದ್ಯಾರ್ಥಿಗಳಿಗೆ ಈ ಬಗ್ಗೆ ಪ್ರತಿಜ್ಞಾವಿಧಿಗಳನ್ನು ಪ್ರತೀ ತಿಂಗಳಿಗೊಮ್ಮೆ ಬೋಧಿಸಬೇಕು. ಅರಣ್ಯದ ಅಂಚಿನಲ್ಲಿ ಕೆಲವು ತೋಟಗಳಲ್ಲಿ, ಕೃಷಿ ಭೂಮಿಗಳಲ್ಲಿ ಅಥವಾ ಕಟ್ಟಡದ ಮೇಲ್ಛಾವಣಿಯ ಮೇಲೆ ಗಾಂಜಾ ಬೆಳೆಯುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ. ಈ ಬಗ್ಗೆ ಅರಣ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ನಿಗಾವಹಿಸಿ, ಅನಿರೀಕ್ಷಿತ ಭೇಟಿಗಳನ್ನು ಅಂತಹ ಅನುಮಾನದ ಸ್ಥಳಗಳ ವೀಕ್ಷಣೆ ಮಾಡಬೇಕು. ಈ ಬಗ್ಗೆ ವರದಿಗಳನ್ನು ನೀಡಬೇಕು ಎಂದು ಸೂಚನೆ ನೀಡಿದರು.

ಮಾದಕ ದ್ರವ್ಯ ವಸ್ತುಗಳು ಮೆಡಿಸಿನ್ ಹಾಗೂ ಚಿಕ್ಕ ಪಾರ್ಸೆಲ್‌ನಲ್ಲಿ ಅಂಚೆ ಮೂಲಕ ಸಾಗಾಟವಾಗುತ್ತಿದ್ದು, ಅಂಚೆ ಇಲಾಖೆಯವರು ಈ ಬಗ್ಗೆ ಅನುಮಾನ ಬಂದಂತಹ ಪಾರ್ಸೆಲ್‌ಗಳನ್ನು ವಾರಸುದಾರರ ಸಮ್ಮುಖದಲ್ಲಿ ತೆರೆದು ನೋಡಿ, ವಾರಸುದಾರರಿಗೆ ಹಸ್ತಾಂತರಿಸುವುದು ಸೂಕ್ತ ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕ ಹಾಗೂ ಮುಖಂಡರ ಜೊತೆ ಕಾರ್ಮಿಕ ಇಲಾಖಾ ಅಧಿಕಾರಿಗಳು ಸಭೆ ಮತ್ತು ಕಾರ್ಯಾಗಾರಗಳನ್ನು ನಡೆಸಿ ಮಾದಕ ವ್ಯಸನ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದರು.

ಶಾಲಾ-ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳು ಅನಧಿಕೃತವಾಗಿ ಆಗ್ಗಿಂದಾಗೆ ಗೈರು ಆಗುವುದು ಕಂಡು ಬಂದಲ್ಲಿ ಅವರ ಪೋಷಕರುಗಳಿಗೆ ತಿಳಿಸುವುದರ ಜೊತೆಗೆ ಶಾಲಾ ಶಿಕ್ಷಕರು ಅವರ ಚಲನ ವಲನಗಳ ಬಗ್ಗೆ ಗಂಭೀರವಾಗಿ ವೀಕ್ಷಣೆ ಮಾಡಬೇಕು. ಒಂದೊಮ್ಮೆ ವ್ಯಸನಕ್ಕೆ ಗುರಿಯಾಗಿದ್ದಲ್ಲಿ ಆಪ್ತ ಸಮಾಲೋಚನೆಯನ್ನು ಮಾಡುವುದರೊಂದಿಗೆ ಅವರ ಮನ ಪರಿವರ್ತನೆಗೆ ಮುಂದಾಗಬೇಕು ಎಂದರು.

ಜಿಲ್ಲೆಯ ಎಲ್ಲಾ ಮೆಡಿಕಲ್ ಸ್ಟೋರ್‌ಗಳಲ್ಲಿ ಸಿ.ಸಿ.ಟಿ.ವಿ ಆಳವಡಿಸುವುದು ಕಡ್ಡಾಯ ಎಂದ ಅವರು, ಯುವಜನರು ಮಾದಕ ವ್ಯಸನದ ಪರೀಕ್ಷೆ ಮಾಡಿದ ಸಂದರ್ಭದಲ್ಲಿ 97 ಜನರು ಮಾದಕ ವ್ಯಸನ ಮಾಡಿರುವುದು ಕಂಡುಬಂದಿದೆ, ಇವರಲ್ಲಿ 90 ಜನರು ಮಣಿಪಾಲ ಭಾಗದವರೇ ಆಗಿದ್ದಾರೆ. ಉಳಿದ 7 ಜನರು ಇತರೆ ಭಾಗದವರಾಗಿದ್ದು, ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯು ಇಂತವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಸಾಧ್ಯವಾದಲ್ಲಿ ಅವರನ್ನು ಶಿಕ್ಷಣ ಸಂಸ್ಥೆಯಿಂದ ಹೊರಗಿಡುವುದು ಸೂಕ್ತ ಎಂದರು.

ಉತ್ತರದಿಂದ ಹೆಚ್ಚಾಗಿ ಕೂಲಿ ಕಾರ್ಮಿಕರು ಜಿಲ್ಲೆಗೆ ರೈಲುಗಳ ಮೂಲಕ ಆಗಮಿಸುತ್ತಾರೆ. ರೈಲ್ವೆ ಪೊಲೀಸ್ ಅಧಿಕಾರಿಗಳು ಮಾದಕ ವಸ್ತುಗಳನ್ನು ತಂದಿರುವ ಬಗ್ಗೆ ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಂತಹವರ ಬ್ಯಾಗ್‌ಗಳನ್ನು ತಪಾಸಣೆ ಮಾಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಢಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಜಿಲ್ಲಾ ಸರ್ಜನ್ ಡಾ. ಅಶೋಕ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಜಿ.ಶಂಕರ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಭಾಸ್ಕರ್ ಶೆಟ್ಟಿ, ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...