ಉಡುಪಿ | ದಲಿತ ವಿದ್ಯಾರ್ಥಿಯ ಭವಿಷ್ಯಕ್ಕೆ ಕೊಳ್ಳಿ ಇಟ್ಟ ಜಿಲ್ಲಾಧಿಕಾರಿ ವಿರುದ್ಧ ದಸಂಸ ಪ್ರತಿಭಟನೆ

Date:

ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಪದವಿಪೂರ್ವ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದ ಕಾರ್ಕಳ ತಾಲೂಕು ಬೈಲೂರಿನ ಸುಜಿತ್ ಮತ್ತು ಜಸೀರ ಇವರನ್ನು ರಾಜಕೀಯ ನಾಯಕರ ಒತ್ತಡಕ್ಕೆ ಕಟ್ಟುಬಿದ್ದು ಉಡುಪಿ ಜಿಲ್ಲಾಧಿಕಾರಿಗಳು ರಾಜ್ಯ ತಂಡದಿಂದ ಹೊರಕ್ಕೆ ಹಾಕಿರುವುದನ್ನು ವಿರೋಧಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ಉಡುಪಿ ಜಿಲ್ಲೆ ವತಿಯಿಂದ ಉಡುಪಿ ಅಜ್ಜರಕಾಡು ಹತಾತ್ಮರ ಚೌಕದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತಾಡಿದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ಜಿಲ್ಲಾಧಿಕಾರಿಗಳ ದಲಿತ-ಅಲ್ಪ ಸಂಖ್ಯಾತ ವಿರೋಧಿ ನಡೆಯನ್ನು ಖಂಡಿಸಿದರು.ಪ್ರಭಾವಿ ರಾಜಕಾರಣಿಗಳ ತಾಳಕ್ಕೆ ಕುಣಿಯುವ ಇಂತಹ ಲಜ್ಜೆಗೆಟ್ಟ ಜಿಲ್ಲಾಧಿಕಾರಿ ಈ ಜಿಲ್ಲೆಯಿಂದ ತೊಲಗಬೇಕು ಎಂದರು.

ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು,ಜಿಲ್ಲಾ ಸಂಘಟನಾ ಸಂಚಾಲಕ ಶಾಮ್ ರಾಜ್ ಬಿರ್ತಿ, ಜನಪರ ಚಿಂತಕ ಪ್ರೊಫೇಸರ್ ಫಣಿರಾಜ್ ಮತ್ತು ಹುಸೇನ್ ಕೋಡಿಬೆಂಗ್ರೆ ಮಾತಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಸುರೇಶ್ ಹಕ್ಲಾಡಿ, ಅಣ್ಣಪ್ಪ ನಕ್ರೆ, ಶಾಮಸುಂದರ ತೆಕ್ಕಟ್ಟೆ, ರಾಜೇಂದ್ರನಾಥ್, ಮಂಜುನಾಥ ನಾಗೂರು, ರಾಜು ಬೆಟ್ಟಿನಮನೆ, ಶಿವರಾಜ್ ಬೈಂದೂರ್,ಮಂಜುನಾಥ ಬಾಳ್ಕುದ್ರು,ಬಾಸ್ಕರ ನಿಟ್ಟೂರು, ಹರಿಶ್ಚಂದ್ರ ಕೆಡಿ, ಶಿವಾನಂದ ಬ್ರಹ್ಮಾವರ ಮತ್ತು ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...