ಉಡುಪಿ | ಜಿಲ್ಲೆಯಾದ್ಯಂತ ಕ್ರೈಸ್ತರಿಂದ ಪಾಮ್ ಸಂಡೆ ಆಚರಣೆ

Date:

ಯೇಸು ಸ್ವಾಮಿ ಜೆರುಸಲೇಂ ನಗರವನ್ನು ಪ್ರವೇಶಿಸಿದ ಸಂಕೇತವಾಗಿ ಆಚರಿಸುವ ಗರಿಗಳ ಭಾನುವಾರ (ಪಾಮ್ ಸಂಡೆ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ. ಡಾ. ಜೆರಾಲ್ಡ್ ಐಸಾಕ್ ಲೋಬೊ ಅವರು ಕುಂದಾಪುರ ತಾಲೂಕಿನ ಬಸ್ರೂರು ಸಂತ ಫಿಲಿಪ್ ನೆರಿ ಚರ್ಚಿನಲ್ಲಿ ನಡೆದ ಧಾರ್ಮಿಕ ವಿಧಿವಿಧಾನದಲ್ಲಿ ಭಾಗವಹಿಸಿ ಗರಿಗಳನ್ನು ಆಶೀರ್ವದಿಸಿ, ಬಲಿಪೂಜೆಯಲ್ಲಿ ಸಂದೇಶ ನೀಡಿದರು. ಈ ವೇಳೆ ಚರ್ಚ್ನ ಪ್ರಧಾನ ಧರ್ಮಗುರು ವಂ. ರೋಯ್ ಲೋಬೊ, ಸಹಾಯಕ ಧರ್ಮಗುರು ವಂ| ವಿಲ್ಸನ್ ಸಲ್ಡಾನಾ ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ಎಲ್ಲ ಚರ್ಚ್ಗಳಲ್ಲಿ ಕ್ರೈಸ್ತ ಬಾಂಧವರು ಬೆಳಗ್ಗಿನ ಪ್ರಾರ್ಥನಾ ವಿಧಿಯಲ್ಲಿ ಪಾಲ್ಗೊಂಡು ತೆಂಗಿನ ಗರಿಗಳನ್ನು ಹಿಡಿದುಕೊಂಡು ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಚರ್ಚ್ಗಳಲ್ಲಿ ಯೇಸುವಿನ ಕಷ್ಟದ ದಿನಗಳನ್ನು ನೆನಪು ಮಾಡಿಕೊಂಡು ಬಲಿಪೂಜೆಯಲ್ಲಿ ಭಾಗವಹಿಸಿದರು.


ಧರ್ಮಪ್ರಾಂತ್ಯದ ಪ್ರಧಾನ ದೇವಾಲಯವಾದ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ದೇವಾಲಯದ ಪ್ರಧಾನ ಧರ್ಮಗುರು ಹಾಗೂ ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್ ಧಾರ್ಮಿಕ ವಿಧಿವಿಧಾನದ ನೇತೃತ್ವ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಾಮ್ ಸಂಡೆ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಯೇಸುಕ್ರಿಸ್ತರು ಜೆರುಸಲೇಂ ನಗರವನ್ನು ಪ್ರವೇಶಿಸಿದಾಗ ಅಲ್ಲಿನ ಭಕ್ತರು ಒಲಿವ್ ಮರದ ಗರಿಗಳನ್ನು ಹಿಡಿದು ಯೇಸುವಿಗೆ ವೈಭವದಿಂದ ಸ್ವಾಗತಿಸಿದ ಸಂಕೇತವಾಗಿ ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ಮೆರವಣಿಗೆಯಲ್ಲಿ ತೆರಳಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಳ್ಳುತ್ತಾರೆ.

ಪವಿತ್ರ ಸಪ್ತಾಹವು ಕ್ರೈಸ್ತರಿಗೆ ಅತೀ ಮಹತ್ವದಾಗಿದ್ದು, ಗುರುವಾರ ಯೇಸುಕ್ರಿಸ್ತರು ಕೊನೆಯ ಭೋಜನ ಸ್ಮರಣೆ ಮಾಡಿದ್ದರೆ, ಶುಕ್ರವಾರ ಯೇಸುಕ್ರಿಸ್ತರ ಮರಣದ ದಿನವಾದ ಗುಡ್ ಫ್ರೈಡೆ ಆಚರಿಸಿ ಇಡೀ ದಿನವನ್ನು ಉಪವಾಸ, ಧ್ಯಾನದಲ್ಲಿ ಕಳೆಯುತ್ತಾರೆ. ಶನಿವಾರ ಈಸ್ಟರ್ ಜಾಗರಣೆ ಮತ್ತು ಭಾನುವಾರ ಯೇಸುಕ್ರಿಸ್ತರ ಪುನರುತ್ಥಾನದ ಪ್ರಯುಕ್ತ ಈಸ್ಟರ್ ಹಬ್ಬ ಆಚರಿಸಲಾಗುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...