ಉಡುಪಿ | ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಸೂಕ್ತ ಬಹುಮಾನ : ಡಾ. ಲೆಸ್ಸಿ ಲುವಿಸ್‌

Date:

ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು, ಹತ್ಯೆ ಮಾಡುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೃತ್ಯವನ್ನು ಕಂಡು ಬಂದಲ್ಲಿ ಸಾರ್ವಜನಿಕರು ಮಾಹಿತಿಗಳನ್ನು ಸೂಕ್ತ ಪ್ರಾಧಿಕಾರಕ್ಕೆ ನೀಡಬೇಕು ಎಂದು ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಅಧ್ಯಕ್ಷೆ ಡಾ. ಲೆಸ್ಸಿ ಲುವಿಸ್ ಕರೆ ನೀಡಿದರು.

ಅವರು ಇಂದು ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಯವರ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಹೆಣ್ಣು ಮಕ್ಕಳು ಜೀವಿಸಲು ಅವಕಾಶ ಮಾಡಿಕೊಡಬೇಕು. ಅವುಗಳನ್ನು ಭ್ರೂಣದಲ್ಲಿಯೇ ಹತ್ಯೆ ಮಾಡಿದ್ದಲ್ಲಿ ಲಿಂಗಾನುಪಾತದಲ್ಲಿ ತಾರತಮ್ಯ ಉಂಟಾಗುತ್ತದೆ. ಭ್ರೂಣಲಿಂಗ ಪತ್ತೆ ಮಾಡುವ ವ್ಯಕ್ತಿಗಳು, ಸ್ಕ್ಯಾನಿಂಗ್ ಸೆಂಟರ್‌ಗಳು ಹಾಗೂ ಆಸ್ಪತ್ರೆಗಳ ವಿರುದ್ಧ ಸಾರ್ವಜನಿಕರು ಮಾಹಿತಿ ನೀಡಿದ್ದಲ್ಲಿ ಅವರುಗಳಿಗೆ ಸರಕಾರದ ವತಿಯಿಂದ 50,000 ರೂ. ದಿಂದ 1 ಲಕ್ಷ ರೂ. ವರೆಗೆ ಸೂಕ್ತ ಬಹುಮಾನ ನೀಡಲಾಗುವುದು. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದರು.

PCPNDT MEETING 3 1

ಭ್ರೂಣಲಿಂಗ ಪತ್ತೆ ಮಾಡುವ ವೈದ್ಯಾಧಿಕಾರಿಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲೀಕರುಗಳಿಗೆ ಕಾನೂನಿನ ಅಡಿಯಲ್ಲಿ ಹತ್ತು ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಇದೇ ಅಪರಾಧ ಪುನರಾವರ್ತನೆಯಾದಲ್ಲಿ ಐವತ್ತು ಸಾವಿರ ರೂ. ದಂಡದೊಂದಿಗೆ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ ಎಂದರು. ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಸರಕಾರದ ಅನುಮತಿ ಪತ್ರವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಸ್ಕಾö್ಯನಿಂಗ್ ಯಂತ್ರ ನಿರ್ವಹಣೆ ಮಾಡಿರುವ ಬಗ್ಗೆ ರಿಜಿಸ್ಟರ್ ಹಾಗೂ ದಾಖಲೆಗಳನ್ನು ನಿಯಮಾನುಸಾರ ಮಾಡಬೇಕು. ತಪ್ಪಿದ್ದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ 2025 ರ ಏಪ್ರಿಲ್ ನಿಂದ ಸೆಪ್ಟಂಬರ್ ವರೆಗೆ 1000 ಗಂಡು ಮಕ್ಕಳಿಗೆ 997 ಹೆಣ್ಣು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳ ಲಿಂಗಾನುಪಾತ ಕಡಿಮೆ ಇರುವುದರಿಂದ ಆಗುವ ಸಾಮಾಜಿಕ ತೊಂದರೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಏರ್ಪಡಿಸಬೇಕು ಎಂದರು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಮರಾವ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ,ಜಿಲ್ಲಾ ಆಸ್ಪತ್ರೆ ರೇಡಿಯಾಲಜಿಸ್ಟ್ ಡಾ. ಆಮ್ನಾ ಹೆಗ್ಡೆ, ಕೆ.ಎಂ.ಸಿ ಮಣಿಪಾಲ ಪ್ರಸೂತಿ ತಜ್ಞ ಡಾ. ಪ್ರತಾಪ್ ಕುಮಾರ್, ಸಮಾಜ ಸೇವಕಿ ತಾರಾ ಆಚಾರ್ಯ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...