ಉಡುಪಿ | ನಿರ್ಲಕ್ಷ್ಯದಿಂದ ಮೇಲ್ಸೇತುವೆ ಕಾಮಗಾರಿ: ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

Date:

ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಇಂದ್ರಾಳಿ ಮೇಲ್ಸೇತುವೆಯ ಕಾಮಗಾರಿಯನ್ನು ನಿರ್ಲಕ್ಷ್ಯ ವಹಿಸಿ ನಡೆಸುತ್ತಿರುವ ಕಾರಣ ಅನೇಕ ಅಪಘಾತಗಳಾಗಿ ಸಾವು-ನೋವುಗಳು ಸಂಭವಿಸುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಅಪಘಾತಕ್ಕೆ ಕಾರಣಕರ್ತರಾದ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಸೇರಿದಂತೆ ಮತ್ತಿತರ ಪ್ರಕರಣಗಳನ್ನು ದಾಖಲಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.

ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ರಾಷ್ಟ್ರೀಯ ಹೆದ್ದಾರಿ 169 ಎ ಇಂದ್ರಾಳಿ ಮೇಲ್ಸೇತುವೆ ರಸ್ತೆ ಕಾಮಗಾರಿ ವಿಳಂಬದಿಂದಾಗಿ ರಸ್ತೆ ಇಕ್ಕಟ್ಟಿನಿಂದಾಗಿ ಕಳೆದ ಎರಡು ವರ್ಷಗಳಿಂದ ಮಾರಣಾಂತಿಕ ರಸ್ತೆ ಅಪಘಾತಗಳು ಸಂಭವಿಸಿ, ಮರಣ ಹೊಂದಿರುತ್ತಾರೆ. ಇದಕ್ಕೆಲ್ಲಾ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾರಣವಾಗಿದ್ದು, ರಸ್ತೆ ಅಪಘಾತ ಸಂಬಂಧ ಕಾರಣಕರ್ತರಾದ ರೈಲ್ವೆ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಭಿಯಂತರರು ಹಾಗೂ ಗುತ್ತಿಗೆದಾರರುಗಳ ಮೇಲೆ ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು ಎಂದು ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದ್ರಾಳಿ ಬ್ರಿಡ್ಜ್ ಕಾಮಗಾರಿಯ ವಿಳಂಬದಿಂದಾಗಿ 2023 ನೆ ಸಾಲಿನಲ್ಲಿ 8 ಪ್ರಕರಣಗಳು ಆಗಿ, ಅಪಘಾತದಲ್ಲಿ ಒಬ್ಬ ಮೃತಪಟ್ಟರೆ, 7 ಪ್ರಕರಣಗಳಲ್ಲಿ ತೀವ್ರ ತರಹದ ಗಾಯ ಹಾಗೂ ಸಾಧಾರಣ ಗಾಯವಾಗಿದೆ. 2024ನೇ ಸಾಲಿನಲ್ಲಿ 10 ಪ್ರಕರಣಗಳಾಗಿ, ಎರಡು ಪ್ರತ್ಯೇಕ ಅಪಘಾತದಲ್ಲಿ, 2 ಜನ ಮರಣ ಹೊಂದಿ, 8 ಪ್ರಕರಣದಲ್ಲಿ 10 ಜನ ತೀವ್ರ ತರಹದ ಹಾಗೂ ಸಾಮಾನ್ಯ ಗಾಯಗಳು ಉಂಟಾಗಿವೆ. ಇದಕ್ಕೆಲ್ಲಾ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ವಿಭಾಗದ ಅಭಿಯಂತರರ ನಿರ್ಲಕ್ಷ್ಯದ ಕಾಮಗಾರಿಯೇ ಕಾರಣ. ಈ ಸಂಬಂಧ ಬೇಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ್ದರಿಂದ ಸೂಕ್ತ ಕ್ರಮಕ್ಕಾಗಿ ಕೇಂದ್ರ ಸಚಿವಾಲಯದ ಕಾರ್ಯಾಲಯಕ್ಕೆ ಪತ್ರ ಬರೆಯುವುದಾಗಿ ತಿಳಿಸಿದರು.

ಉಡುಪಿ

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿಯನ್ನು 2018-19ನೇ ಸಾಲಿನಲ್ಲಿಯೇ ಕೈಗೊಳ್ಳಲು ನಿರ್ಧರಿಸಿ, ಕಾಮಗಾರಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿತ್ತು. ಅಧಿಕಾರಿಗಳ ನಿರ್ಲಕ್ಷ್ಯ, ಸಮನ್ವಯದ ಕೊರತೆಯಿಂದಾಗಿ ಕಾಮಗಾರಿ ನಿಧಾನ ಗತಿಯಲ್ಲಿ ಸಾಗಿದೆ. ಈ ಸಂಬಂಧ ಅಭಿಯಂತರರಿಗೆ ಏನೂ ಕೆಲಸಗಳನ್ನು ಮಾಡುತ್ತಿದ್ದೀರಾ? ನಿಮಗೆ ಹೇಳು ಕೇಳುವವರು ಯಾರು ಇಲ್ಲವೇ? ಅನೇಕ ಬಾರಿ ಸಭೆಗಳನ್ನು ಕರೆದು ಸೂಚನೆ ನೀಡಿದರೂ ವಿಳಂಬ ಮಾಡುತ್ತಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ಮುಂದಿನ ನವೆಂಬರ್ 10ರ ಒಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ಇಂದ್ರಾಳಿ ಮೇಲ್ಸೇತುವೆ ನಿರ್ಮಾಣಗೊಳ್ಳುತ್ತಿರುವ ಕಬ್ಬಿಣದ ವೆಲ್ಡರ್ ಕಾಮಗಾರಿಯ ಜೊತೆ ಜೊತೆಯಲ್ಲಿಯೇ ಅವುಗಳ ಗರ್ಡಲ್ಸ್ ಅನ್ನು ರೈಲ್ವೆ ಹಳಿಯ ಮೇಲೆ ನಿರ್ಮಾಣ ಮಾಡಲು ಗರ್ಡಲ್ಸ್‌ನ ಪರಿಶೀಲನೆ, ಅವುಗಳ ಬೇರಿಂಗ್ ಅಳವಡಿಸಿ ಚಾಲನೆ ಮಾಡುವುದು, ಅಳವಡಿಸುವ ಸಮಯದಲ್ಲಿ ರೈಲುಗಳ ಸಂಚಾರ ತಡೆಯುವುದು, ಒಪ್ಪಿಗೆ ಪಡೆಯುವುದನ್ನು ಸಹ ಏಕಕಾಲದಲ್ಲಿ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ ಮಾತನಾಡಿ, ಕಾಮಗಾರಿಯ ವಿಳಂಬದ ಬಗ್ಗೆ ಅನೇಕ ಸಂಘ-ಸಂಸ್ಥೆಗಳು, ಸಾರ್ವನಿಕರು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ಅದಕ್ಕೆ ಜಿಲ್ಲಾಡಳಿತವೇ ಉತ್ತರ ನೀಡಬೇಕು. ಸಂಬಂಧಪಟ್ಟ ಅಧಿಕಾರಿಗಳು ನಿಗಧಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳದಿರುವುದು ಇದಕ್ಕೆಲ್ಲಾ ಕಾರಣ ಎಂದರು.

ಇದನ್ನು ಓದಿದ್ದೀರಾ? ಚಿತ್ರದುರ್ಗ | ಡಿಸೆಂಬರ್‌ನೊಳಗೆ ದುರ್ಗೋತ್ಸವ ಆಚರಿಸದಿದ್ದರೆ ಪ್ರತಿಭಟನೆ: ಕರುನಾಡ ಸೇನೆ ಎಚ್ಚರಿಕೆ

ಸಂಬಂಧಪಟ್ಟ ಅಧಿಕಾರಿಗಳ ಅಸಂಬದ್ಧ ಕಾಮಗಾರಿಯಿಂದ ರಸ್ತೆ ಅಪಘಾತದಿಂದ ಮರಣ ಹಾಗೂ ಅನೇಕ ಜನರಿಗೆ ತೀವ್ರ ಹಾಗೂ ಸಾಮಾನ್ಯ ಸ್ವರೂಪದ ಗಾಯಗಳಾಗಿವೆ. ಇವು ನಿಮ್ಮ ಕುಟುಂಬದಲ್ಲಿ ಆಗಿದ್ದರೆ, ನೀವು ಸಹಿಸುತ್ತಿದ್ದೀರಾ, ಕಾಮಗಾರಿ ವಿಳಂಬಕ್ಕೆ ಪ್ರತೀ ಸಭೆಯಲ್ಲೂ ಇಲ್ಲಸಲ್ಲದ ಕಾರಣ ಹೇಳುವುದು ಸರಿಯಲ್ಲ. ಇತ್ತೀಚೆಗೆ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ಗುತ್ತಿಗೆದಾರರ ರಾಷ್ಟ್ರೀಯ ಹೆದ್ದಾರಿ ಅಭಿಯಂತರರು ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳ ಮೇಲೆ ಅಪರಾಧಿಗಳನ್ನಾಗಿ ಮಾಡುವುದರ ಜೊತೆಗೆ ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದರು.

ಸಭೆಯಲ್ಲಿ ಅಪರ್ ಜಿಲ್ಲಾಧಿಕಾರಿ ಮಮತ ದೇವಿ ಜಿ.ಎಸ್, ಕೊಂಕಣ ರೈಲ್ವೆಯ ಸೀನೀಯರ್ ಇಂಜಿನಿಯರ್ ಗೋಕುಲ್‌ದಾಸ್, ಶೃಂಗೇರಿ-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಂಜುನಾಥ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...