ಉಡುಪಿ | ಗ್ರಾಮ ಪಂಚಾಯತ್ ಚುನಾವಣೆ: ಮೀಸಲಾತಿ ಪ್ರಕಟ; ನಾಮಪತ್ರ ಸಲ್ಲಿಕೆಗೆ ನ. 27 ಕೊನೆಯ ದಿನ

Date:

1993 ರ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ ಉಪಬಂಧಗಳ ಮೇರೆಗೆ ಜಿಲ್ಲೆಗೆ ಸಂಬಂಧಿಸಿದಂತೆ 2023 ರ ಡಿಸೆಂಬರ್ ಮಾಹೆಯಿಂದ 2025 ರ ಜನವರಿ ಮಾಹೆಯವರೆಗೆ ಅವಧಿ ಮುಕ್ತಾಯವಾಗುತ್ತಿರುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆಯನ್ನು ನಡೆಸಲು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 308 ಎಎ ಮತ್ತು 308 ಎಬಿ ರನ್ವಯ ಚುನಾವಣಾ ವೇಳಾಪಟ್ಟಿಯನ್ನು ಮತ್ತು ಮೀಸಲಾತಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ನವೆಂಬರ್ 21ರಂದು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ನವೆಂಬರ್ 27 ಕೊನೆಯ ದಿನವಾಗಿದೆ. ನವೆಂಬರ್ 28ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಎಂದು ತಿಳಿಸಿದೆ.

ಉಮೇದುವಾರಿಕೆಗಳನ್ನು ಹಿಂದೆಗೆದುಕೊಳ್ಳಲು ನವೆಂಬರ್ 30 ಕೊನೆಯ ದಿನವಾಗಿದ್ದು, ಡಿಸೆಂಬರ್ 8 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದೆ. ಮತಗಳ ಎಣಿಕೆ ಕಾರ್ಯವು ಡಿಸೆಂಬರ್ 11 ರಂದು ಬೆಳಗ್ಗೆ 8 ರಿಂದ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿಕ್ರಂ ಗೌಡ ಶೂಟೌಟ್‌ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ : ನೂರ್‌ ಶ್ರೀಧರ್‌, ಸಿರಿಮನೆ ನಾಗರಾಜ್‌ ಆಗ್ರಹ

ಮೀಸಲಾತಿ ವಿವರ

ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಗಂಗೊಳ್ಳಿ-1 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 5 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ ಮಹಿಳೆ (1), ಸಾಮಾನ್ಯ (2) ಹಾಗೂ ಸಾಮಾನ್ಯ ಮಹಿಳೆ (2), ಗಂಗೊಳ್ಳಿ-2 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ (2), ಸಾಮಾನ್ಯ (1) ಹಾಗೂ ಸಾಮಾನ್ಯ ಮಹಿಳೆ (1), ಗಂಗೊಳ್ಳಿ-3 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಅನುಸೂಚಿತ ಪಂಗಡ ಮಹಿಳೆ (1), ಹಿಂದುಳಿದ ವರ್ಗ ಅ ಮಹಿಳೆ (1), ಹಿಂದುಳಿದ ವರ್ಗ ಬ ಮಹಿಳೆ (1) ಹಾಗೂ ಸಾಮಾನ್ಯ (1), ಗಂಗೊಳ್ಳಿ-4 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಅನುಸೂಚಿತ ಜಾತಿ (1), ಹಿಂದುಳಿದ ವರ್ಗ ಅ (1) ಹಾಗೂ ಸಾಮಾನ್ಯ ಮಹಿಳೆ (2), ಗಂಗೊಳ್ಳಿ-5 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ ಮಹಿಳೆ (1), ಸಾಮಾನ್ಯ (2) ಹಾಗೂ ಸಾಮಾನ್ಯ ಮಹಿಳೆ (1), ಗಂಗೊಳ್ಳಿ-6 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 5 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ ಮಹಿಳೆ (1), ಹಿಂದುಳಿದ ವರ್ಗ ಬ (1), ಸಾಮಾನ್ಯ (1) ಹಾಗೂ ಸಾಮಾನ್ಯ ಮಹಿಳೆ (2), ಗಂಗೊಳ್ಳಿ-7 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 3 ಸದಸ್ಯ ಸ್ಥಾನಗಳಿಗೆ ಹಿಂದುಳಿದ ವರ್ಗ ಅ (1) ಹಾಗೂ ಸಾಮಾನ್ಯ (2) ಮತ್ತು ಗಂಗೊಳ್ಳಿ-8 ಗ್ರಾಮ ಪಂಚಾಯತ್ ಕ್ಷೇತ್ರದ ಒಟ್ಟು 4 ಸದಸ್ಯ ಸ್ಥಾನಗಳಿಗೆ ಅನುಸೂಚಿತ ಜಾತಿ ಮಹಿಳೆ (1), ಹಿಂದುಳಿದ ವರ್ಗ ಅ (1), ಸಾಮಾನ್ಯ (1) ಹಾಗೂ ಸಾಮಾನ್ಯ ಮಹಿಳೆ (1) ಮೀಸಲಾತಿಯನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...