ಉಡುಪಿ | ಗ್ಯಾಂಗ್ ವಾರ್ ಆರೋಪಿಗಳಿಂದ ಜೈಲಿನಲ್ಲಿ ದಾಂಧಲೆ; ಪೊಲೀಸರ ಮೇಲೆ ಹಲ್ಲೆ

Date:

ಉಡುಪಿಯಲ್ಲಿ ಇತ್ತೀಚೆಗೆ ನಡೆದಿದ್ದ ಗ್ಯಾಂಗ್ ವಾರ್ ಪ್ರಕರಣದ ಆರೋಪಿಗಳಿಬ್ಬರು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ದಾಂಧಲೆ ನಡೆಸಿ, ಜಿಲ್ಲಾ ಅಧೀಕ್ಷಕರು ಮತ್ತು ಸಿಬ್ಬಂದಿಯ ಮೇಲೆ ಹಲ್ಲೆ ಯತ್ನಿಸಿರುವ ಘಟನೆ ಸಂಭವಿಸಿದೆ.

ಕಾರಾಗೃಹದಲ್ಲಿರುವ ವಿಚಾರಣಾ ಕೈದಿಗಳಾದ ಮುಹಮ್ಮದ್ ಆಶಿಕ್ ಮತ್ತು ಮಹಮ್ಮದ್ ಸಕ್ಲೀನ್ ಪ್ರಿಜನ್ ಕಾಲ್ ಸಿಸ್ಟಮ್ ಕರೆ ಮಾಡಲು ತಡವಾಯಿತೆಂದು ಹೇಳಿ ಕರ್ತವ್ಯದಲ್ಲಿದ್ದ ಜೈಲ‌ರ್ ಎಸ್‌ ಎ ಶಿರೋಳ ಅವರಿಗೆ ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿ ಜೋರಾಗಿ ಕೂಗಾಡಿದ್ದಾರೆ. ಅಲ್ಲದೆ ಅಧೀಕ್ಷಕರ ಕಚೇರಿಯಿಂದ ಕರೆದುಕೊಂಡು ಹೋಗುವಾಗ ಸಿಬ್ಬಂದಿಯೊಂದಿಗೆ ಮತ್ತೆ ಗಲಾಟೆ ಅರಂಭಿಸಿ ಸಿಬ್ಬಂದಿಯನ್ನು ತಳ್ಳಿ ಕೊಠಡಿಯಲ್ಲಿದ್ದ ಬೆಂಕಿ ನಂದಿಸುವ ಯಂತ್ರವನ್ನು ತೆಗೆಯಲು ಪ್ರಯತ್ನಿಸಿದ್ದಾರೆ.

ಬಳಿಕ ಅಡುಗೆ ಕೋಣೆಯಲ್ಲಿರುವ ದೊಡ್ಡ ಸೌಟನ್ನು ಮತ್ತು ಚಹಾ ಮಾಡುವ ಸೌಟನ್ನು ತಂದು, ಮುಹಮ್ಮದ್ ಸಕ್ಲೀನ್ ತನ್ನ ಕೊಠಡಿಯ ಮರದ ಕುರ್ಚಿಯನ್ನು ತೆಗೆದುಕೊಂಡು ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತ್ನಿಸಿದ್ದನೆಂದು ದೂರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಉಡುಪಿ | ಹೊಸ ಕ್ರಿಮಿನಲ್ ಕಾನೂನುಗಳ ಸಾಧಕ ಬಾಧಕಗಳ ಕುರಿತು ಸಂವಾದ

ಈ ವೇಳೆ ಅವರನ್ನು ಸಿಬ್ಬಂದಿ ಸೆರೆಹಿಡಿದರು. ಅಲ್ಲದೆ ಕರ್ತವ್ಯದಲ್ಲಿದ್ದ ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ದರಾಮ ಬಿ ಪಾಟೀಲ್‌ ಹಾಗೂ ಸಿಬ್ಬಂದಿಗೆ ಹಲ್ಲೆ ಮಾಡಲು ಪ್ರಯತ್ನಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ದೂರಲಾಗಿದೆ. ಅದರಂತೆ ಹಿರಿಯಡ್ಕ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...