ಉಡುಪಿ | ಗ್ರಾ.ಪಂ.ಉಪಾಧ್ಯಕ್ಷರ ಆಯ್ಕೆ, ಚುನಾವಣಾಧಿಕಾರಿಗಳ ನೇಮಕ

Date:

ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮ ಪಂಚಾಯತ್‌ನ ಮುಂದಿನ ಅವಧಿಗೆ ಉಪಾಧ್ಯಕ್ಷರ ಸ್ಥಾನವನ್ನು (ಮೀಸಲಾತಿ-ಸಾಮಾನ್ಯ) ಆಯ್ಕೆ ಮಾಡುವ ಸಲುವಾಗಿ ಬ್ರಹ್ಮಾವರ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರ್ ನಾಯಕ್ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಉಪಾಧ್ಯಕ್ಷರನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್ ಉಪ ಚುನಾವಣೆ, ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

ಉಡುಪಿ ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಹಾಗೂ ಕಾಪು ತಾಲೂಕಿನ ಬೆಳ್ಳೆ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ / ತೆರವಾಗಿರುವ ತಲಾ 01 ಸದಸ್ಯ ಸ್ಥಾನಗಳೂ ಸೇರಿದಂತೆ ಒಟ್ಟು 3 ಸದಸ್ಯ ಸ್ಥಾನಗಳಿಗೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಎ ಮತ್ತು 308 ಎಬಿ ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಚುನಾವಣೆ ನಡೆಸುವ) ನಿಯಮಗಳು 1993 ರ ನಿಯಮ 12 ರ ಅನ್ವಯ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿಗಳು ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಏ. 29 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮೇ 11 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮೇ 14 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕಾ ಕಾರ್ಯಗಳು ನಡೆಯಲಿದೆ.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಪ್ರಿಲ್ 22 ರಿಂದ ಮೇ 14 ರ ವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...