ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮಳೆಯ ಅಬ್ಬರಕ್ಕೆ ಜನಜೀವನ ಅಸ್ಥವ್ಯಸ್ಥವಾಗಿದೆ. ಉಡುಪಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ಒಂದು ವರ್ಷದ ಹಿಂದೆ ನಿರ್ಮಿಸಲಾಗಿದ್ದ ಸೇತುವೆ ಕುಸಿತಗೊಂಡಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಭರಣಕೊಳ್ಳಿಯಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಸೇತುವೆ ಕುಸಿದುಬಿದ್ದಿದೆ. ಸೇತುವೆಯು ಭರಣಕೊಳ್ಳಿಯಿಂದ ಹಾಲಾಡಿ, ಜೋರಾಡಿ, ಮುದ್ದೂರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿತ್ತು. ಇದೀಗ, ಗ್ರಾಮಗಳ ನಡುವಿನ ಸಂಪರ್ಕ ಕಡಿತವಾಗಿದ್ದು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಪಡಿಸಿದ್ದಾರೆ.
ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಗ್ರಾಮಸ್ಥರಿಗೆ ಭಾರೀ ಸಮಸ್ಯೆಯಾಗಿದ್ದು, ಕಳಪೆ ಕಾಮಗಾರಿ ನಡೆಸಿರುವ ಆಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.




